ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿದ್ದ 47 ಅಪ್ರಾಪ್ತ ಮಕ್ಕಳ ರಕ್ಷಣೆ, 36 ಮಹಿಳೆಯರು ಕೂಡ ವಶಕ್ಕೆ

By Suvarna News  |  First Published Apr 12, 2024, 1:32 PM IST

ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. 36 ಜನ ಮಹಿಳೆಯರನ್ನ ವಶಕ್ಕೆ ಪಡೆಯಲಾಗಿದೆ.


ಬೆಂಗಳೂರು (ಏ.12): ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.   ನಗರ ಪೊಲೀಸ್ ಆಯುಕ್ತ ಬಿ ದಯಾನಂದ್  ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಸಿಬಿ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಲಾಗಿದೆ.

ಪುಲಕೇಶಿ ನಗರದಲ್ಲಿ ಅಪ್ರಾಪ್ತ ಮಕ್ಕಳನ್ನ ಬಳಸಿ ಭಿಕ್ಷಾಟನೆ ನಡೆಸುತ್ತಿದ್ರು ಈ ಸಂಬಂಧ 36 ಜನ ಮಹಿಳೆಯರನ್ನ ವಶಕ್ಕೆ ಪಡೆಯಲಾಗಿದೆ. ಮಸೀದಿಗಳ ಮುಂದೆ ಬೇರೆ ಬೇರೆ ಸ್ಥಳದಲ್ಲಿ ಭಿಕ್ಷಾಟನೆ ಮಾಡಲಾಗುತ್ತಿದ್ದು, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ  6 ಜನ  ಮಕ್ಕಳಿದ್ದರು. 19 ಗಂಡು 28 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 47 ಮಕ್ಕಳ ರಕ್ಷಣೆಯಾಗಿದೆ.

Latest Videos

undefined

Rameshwaram Cafe Blast case: ಕೆಫೆ ಬಾಂಬ್‌ ಇಟ್ಟ ಮಾಸ್ಟರ್‌ ಮೈಂಡ್‌ ಉಗ್ರ ಸೇರಿ ಇಬ್ಬರು ಅರೆಸ್ಟ್

1-3 ವರ್ಷದ ಮಕ್ಕಳು 12
3-6 ವರ್ಷ ದ ಮಕ್ಕಳು 6
6-10ವರ್ಷದ ಮಕ್ಕಳು 16
10 ವರ್ಷ ಮೇಲ್ಪಟ್ಟು 7 

ಇದು ಯಾರ ಮಕ್ಕಳು ಎಂದು ಪರಿಶೀಲನೆ ನಡೆಸುತ್ತಿದ್ದೇವೆ. ಒಂದುವೇಳೆ ಭಿಕ್ಷಾಟನೆ ನಡೆಸುತ್ತಿರುವವರ ಮಕ್ಕಳೇ ಅಥವಾ ಬೇರೆಯವರ ಮಕ್ಕಳೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು  ದಯಾನಂದ್ ಸ್ಪಷ್ಟಪಡಿಸಿದ್ದಾರೆ.

ನಿಮ್ಮ ನೂರಾರು ವಿಷಯಗಳು ನನ್ನ ಬಳಿ ಇವೆ: ಕೂಡಲ ಶ್ರೀಗಳಿಗೆ ಎಚ್ಚರಿಕೆ ಕೊಟ್ಟ ನಿರಾಣಿ..!

ಫ್ರೇಜರ್ ಟೌನ್, ಕೋರಮಂಗಲ, ಕೆ.ಜಿ.ಹಳ್ಳಿ ಮತ್ತಿತರ ಕಡೆಗಳಲ್ಲಿ ಬಡ ಕುಟುಂಬದ ಮಕ್ಕಳನ್ನು ಬಲವಂತವಾಗಿ ಭಿಕ್ಷಾಟನೆಗೆ ತಳ್ಳುತ್ತಿದ್ದ ಟ್ರಾಫಿಕ್ ಸಿಗ್ನಲ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ರಕ್ಷಣೆ ಮಾಡಿದ್ದಾರೆ.

click me!