ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಸಣ್ಣಪುಟ್ಟ ಹಾನಿ ಸಂಭವಿಸುವುದು ಸಹಜ: ಹೈಕೋರ್ಟ್‌

By Kannadaprabha News  |  First Published Jul 6, 2024, 9:12 AM IST

ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಬಹುಮುಖ್ಯ ಹಕ್ಕು ಎಂದು ಬಲವಾಗಿ ಪ್ರತಿಪಾದಿಸಿದ ಹೈಕೋರ್ಟ್‌, ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಸಣ್ಣ-ಪುಟ್ಟ ಹಾನಿ ಸಂಭವಿಸುವುದು ಸಹಜ’ ಎಂದು ಅಭಿಪ್ರಾಯಪಟ್ಟಿದೆ. 


ಬೆಂಗಳೂರು (ಜು.06): ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಬಹುಮುಖ್ಯ ಹಕ್ಕು ಎಂದು ಬಲವಾಗಿ ಪ್ರತಿಪಾದಿಸಿದ ಹೈಕೋರ್ಟ್‌, ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಸಣ್ಣ-ಪುಟ್ಟ ಹಾನಿ ಸಂಭವಿಸುವುದು ಸಹಜ’ ಎಂದು ಅಭಿಪ್ರಾಯಪಟ್ಟಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಹಾಗೂ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಬಿಜೆಪಿ ಮುಖಂಡನ ವಿರುದ್ಧದ ವಿಚಾರಣೆಗೆ ಮಧ್ಯಂತರ ತಡೆ: ಅರ್ಜಿದಾರ ಸುವಿನ್ ಗಣಪತಿ ವಿರುದ್ಧದ ದೂರು ಹಾಗೂ ಆ ಕುರಿತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರ ಅರುಣ್ ಶ್ಯಾಮ್‌, ಅರ್ಜಿದಾರ ಕಾನೂನು ಪಾಲಿಸುವ ನಾಗರೀಕರಾಗಿದ್ದಾರೆ. ಪ್ರಕರಣ ಸಂಬಂಧ ಅರ್ಜಿದಾರರು ಅನುಮತಿ ಪಡೆದುಕೊಂಡೇ ಪ್ರತಿಭಟನೆ ನಡೆಸಿದ್ದಾರೆ. ಆದರೆ ರಾಜಕೀಯ ಪ್ರೇರಿತವಾಗಿ ಅವರ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡಿ ದೂರು ದಾಖಲಿಸಲಾಗಿದೆ. 

Latest Videos

undefined

ದರ್ಶನ್‌ ಭೇಟಿಗೆ ಕುಟುಂಬ ಹೋಗ್ತಿದೆ, ನಾವು ಎಲ್ಲಿಗೆ ಹೋಗ್ಬೇಕು: ರೇಣುಕಾಸ್ವಾಮಿ ತಾಯಿ

ಆದ್ದರಿಂದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿದರು. ಈ ವಾದವನ್ನು ಆಕ್ಷೇಪಿಸಿದ ಸರ್ಕಾರಿ ವಕೀಲರು, ಪ್ರತಿಭಟನೆ ಶಾಂತಿಯಿಂದ ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಪ್ರತಿಭಟನೆ ನಡೆಸುವ ನೆಪದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ. ಎರಡು ಗಂಟೆ ಕಾಲ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅಡಚಣೆ ಮಾಡಿದ್ದಾರೆ. ಸಾಮಾನ್ಯರಿಗೆ ಹಲವು ರೀತಿಯಲ್ಲಿ ತೊಂದರೆಯಾಗಿದೆ. ಆದ್ದರಿಂದ ಅರ್ಜಿದಾರರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಬಾರದು ಎಂದು ಮನವಿ ಮಾಡಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಬಹುಮುಖ್ಯ ಹಕ್ಕು. ಪ್ರಕರಣದಲ್ಲಿ ರಸ್ತೆ ಡಾಂಬರ್‌ಗೆ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದು ಸಹಜ. ಇದು ಪ್ರಯೋಗ ಶಾಲೆಯಲ್ಲಿ ನಡೆಯುವ ಪ್ರತಿಭಟನೆಯಲ್ಲ. ಬದಲಿಗೆ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ವಿಚಾರವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುವ ಪ್ರತಿಭಟನೆಯಾಗಿದೆ. ಸಿಗರೆಟ್ ಬೆಂಕಿ ತಾಗಿದರೂ ಅಲ್ಪ ಪ್ರಮಾಣದಲ್ಲಿ ರಸ್ತೆಗೆ ಹಾನಿಯಾಗುತ್ತದೆ. ಅದಕ್ಕೆ ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ನುಡಿಯಿತು.

ಮುಡಾದಲ್ಲಿ ಹಗರಣವೇ ಆಗಿಲ್ಲ: ಎಚ್‌ಡಿಕೆಗೆ ಸಚಿವ ಬೈರತಿ ಸುರೇಶ್ ತಿರುಗೇಟು

ಈ ವೇಳೆ ಸರ್ಕಾರಿ ಪರ ವಕೀಲರು ಉತ್ತರಿಸಿ, ಒಂದು ರು. ಹಾನಿಯಾದರೂ ಅಥವಾ 50 ಸಾವಿರ ರು. ಹಾನಿಯಾದರೂ ಅದು ಸಾರ್ವಜನಿಕ ಆಸ್ತಿಯಲ್ಲವೇ. ಹಾಗಾಗಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು. ನ್ಯಾಯಪೀಠ ಪ್ರತಿಕ್ರಿಯಿಸಿ, ಸ್ಥಳದ ಮಹಜರು ವರದಿಯಲ್ಲಿ ಸಾರ್ವಜನಿಕ ಆಸ್ತಿಯ ಹಾನಿ ಕುರಿತು ಉಲ್ಲೇಖಿಸಿಲ್ಲ. ಈ ರೀತಿ ಸಣ್ಣ- ಪುಟ್ಟ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ಹೇಳಿತು. ಹಾಗೆಯೇ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲ ಕಾನೂನು ಪ್ರಕ್ರಿಯೆ ಹಾಗೂ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

click me!