
ಬೆಂಗಳೂರು : ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಇರಿಸಿದ್ದ ವೇಳೆ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಬಂಧಿಸಬೇಕು ಎಂದು ಆನಂದ್ ಸಿಂಗ್ ಕುಟುಂಬದವರು ಪಟ್ಟು ಹಿಡಿದಿದ್ದಾರೆ.
ಶಾಸಕ ಗಣೇಶ್ ಬಂಧನವಾಗುವ ತನಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿರಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಆದರೆ ಇತ್ತ ಗಣೇಶ್ ನಿರೀಕ್ಷಣಾ ಜಾಮೀನು ಪಡೆಯಲು ಶಾಸಕ ಗಣೇಶ್ ಸಿದ್ಧತೆ ನಡೆಸಿದ್ದಾರೆ.
ಆನಂದ್ ಸಿಂಗ್ ಡಿಸ್ಚಾರ್ಜ್ ಆದರೆ ಗಣೇಶ್ ಗೆ ಜಾಮೀನು ಸಿಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಆನಂದ್ ಸಿಂಗ್ ಆಸ್ಪತ್ರೆಯಲ್ಲೇ ಇನ್ನೆರಡು ದಿನ ಉಳಿಯಲು ನಿರ್ಧಾರ ಮಾಡಿದ್ದಾರೆ.
ಸದ್ಯ ಹಲ್ಲೆಯಾದ ಗಾಯಗಳೆಲ್ಲಾ ಮಾಸಿದ್ದು, ಕಣ್ಣಿನ ಭಾಗದಲ್ಲಿ ಸ್ವಲ್ಪ ಮಟ್ಟಿಗಿನ ಊತವಿದೆ. ಶಾಸಕ ಆನಂದ್ ಸಿಂಗ್ ಬಯಸಿದರೆ ಡಿಸ್ಚಾರ್ಜ್ ಮಾಡುವುದಾಗಿ ಅಪೋಲೋ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಸದ್ಯ ಬಿಡದಿ ಪೊಲೀಸರಿಂದ ಶಾಸಕ ಗಣೇಶ್ ಗಾಗಿ ತೀವ್ರ ಹುಡುಕಾಟ ಆರಂಭವಾಗಿದ್ದು, ಸದ್ಯ ಪೊಲೀಸರ ಕಣ್ತಪ್ಪಿಸಿ ಶಾಸಕ ಗಣೇಶ್ ನಾಪತ್ತೆಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ