ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು (ಜೂ.21): ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ ಭೀಮಾ ನಾಯ್ಕ್. ಕೆಎಂಎಫ್ ಅಧ್ಯಕ್ಷ ಚುನಾವಣೆಗೆ ಶಾಸಕ ಭೀಮಾನಾಯ್ಕ್ ಒಬ್ಬರೇ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ಇವರ ವಿರೋಧವಾಗಿ ಯಾವುದೇ ನಾಮೊತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ನಾಮಪತ್ರ ಸಲ್ಲಿಕೆ ಮಾಡಿದ ಶಾಸಕ ಭೀಮಾನಾಯ್ಕ್ ಅವರನ್ನೇ ಅವಿರೋಧವಾಗಿ ಕೆಎಂಎಫ್ ಅಧ್ಯಕ್ಷರೆಂದು ಆಯ್ಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆ ಅವಧಿ ಮುಗಿದರೂ ಭೀಮಾನಾಯ್ಕ್‌ಗೆ ವಿರೋಧವಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಭೀಮಾನಾಯ್ಕ್ ಅವಿರೋಧವಾಗಿ ಕೆಎಂಎಫ್ (Karnataka Milk Federation -KMF) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳ ಮೊಟ್ಟೆಗೆ ಕನ್ನ ಹಾಕಿದ ಕಾಂಗ್ರೆಸ್ : ವಾರಕ್ಕೊಂದೇ ಮೊಟ್ಟೆ
ಭೀಮಾನಾಯ್ಕ್‌ಗೆ ಎಲ್ಲ ನಿರ್ದೇಶಕರ ಬೆಂಬಲ: ಕೆಎಂಎಫ್‌ಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ಶಾಸಕ ಭೀಮಾನಾಯ್ಕ್ ಎರಡು ನಾಮಪತ್ರ ಸಲ್ಲಿಕೆ ಮಾಡಿದ್ದರು. ಒಂದರಲ್ಲಿ ಕೆಲವು ದಾಖಲಾತಿಗಳು ಅಸ್ಪಷ್ಟ ಎಂಬ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಲ್ಲಿಕೆ ಮಾಡಿದ್ದರು. ಆದರೆ, ಭೀಮಾ ನಾಯ್ಕ್ ಗೆ ವಿರೋಧವಾಗಿ ಯಾವುದೇ ನಾಮ ಪತ್ರ ಸಲ್ಲಿಕೆಯಾಗಿಲ್ಲ. ಯಾವುದೇ ನಾಮ ಪತ್ರ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಕೆಎಂಎಫ್ ನಿರ್ದೇಶಕರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾದರು. ನಾಮಪತ್ರ ಸಲ್ಲಿಕೆ ವೇಳೆಯೂ ಹಲವು ನಿರ್ದೇಶಕರು ಅವರಿಗೆ ಸಾಥ್ ನೀಡಿದ್ದರು.
ಭೀಮಾನಾಯ್ಕ್ ಆಯ್ಕೆ ಖಚಿತಪಡಿಸಿದ ಸಹಕಾರ ಸಚಿವ: ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಭಿಮಾನಾಯ್ಕ್ ಆಯ್ಕೆ ಆಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದರು. ಭೀಮಾನಾಯ್ಕ್‌ಗೆ ಅಭಿನಂದನೆ ತಿಳಿಸಲಾಗಿದ್ದು, ಮಂಡಳಿಯನ್ನು ಲಾಭದತ್ತ ನಡೆಸಬೇಕು. ಮುಖ್ಯವಾಗಿ ರೈತರಿಗೆ ಹೆಚ್ಚು ಲಾಭ ಸದ್ಯಕ್ಕೆ ಸಿಗ್ತಾ ಇಲ್ಲ. ಕೆಎಂಎಫ್ ರೈತರ ಹಿತ ಕಾಯುವ ನಿಟ್ಟಿನಲ್ಲಿ ಮುಂದಾಗಬೇಕು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಜತೆ ಸಭೆ ನಡೆಲಾಗುತ್ತದೆ ಎಂದು ತಿಳಿಸಿದರು.
ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ಡೈರೆಕ್ಟ್ ಎಂಟ್ರಿ: ಮುಜರಾಯಿ ಇಲಾಖೆ ನಿರ್ಧಾರ
ಹಾಲಿನ ದರ ಹೆಚ್ಚಳದ ಮುನ್ಸೂಚನೆ ನೀಡಿದ ಸಚಿವ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಸುವ ಸಭೆಯಲ್ಲಿ ರೈತರ ಹಿತ ಕಾಯುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು. ಜೊತೆಗೆ, ಆ ಸಭೆಯಲ್ಲಿ ಹಾಲು ಹಾಕುವಂತಹ ರೈತರಿಗೆ ಹೆಚ್ಚಿನ ಲಾಭ ಸಿಗಲು ತೀರ್ಮಾನ ಕೈಗೊಳ್ಳಲಾಗುವುದು. ರೈತರಿಂದ ಹಾಲು ಖರೀದಿ ದರ ಹೆಚ್ಚಳ ಮಾಡಬೇಕಾಗಿದೆ. ಗ್ರಾಹಕರಿಗೂ ನೀಡುವ ಹಾಲಿನ ದರದಲ್ಲೂ ಹೆಚ್ಚಳ ಮಾಡಬೇಕಾಗಿದೆ. ಈ ಮೂಲಕ ಹಾಲಿನ ದರ ಹೆಚ್ಚಳದ ಬಗ್ಗೆ ಸಹಕಾರ ಸಚಿವ ರಾಜಣ್ಣ ಮುನ್ಸೂಚನೆ ನೀಡಿದರು.
ಅಮುಲ್ ಜೊತೆ ವಿಲೀನ ಎಂದವರು ಹುಚ್ಚರು: ರಾಜ್ಯದ ಕೆಎಂಎಫ್‌ನ ನಂದಿನಿ ಹಾಲನ್ನು ಅಮೂಲ್ ಜೊತೆ ಮಾಡಲಾಗುತ್ತದೆಯೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣ, ಯಾರು ಅದನ್ನ ಹೇಳಿದವರು ಹಾಗೆ ಹೇಳಿದವರು, ಅವರು ಹುಚ್ಚರಾ? ವಿಲೀನಾ ಅಂದವರು ಹುಚ್ಚರು, ಯಾವ ವಿಲೀನದ ಪ್ರಶ್ನೆಯೇ ಇಲ್ಲ. ನಾವು ನಮ್ಮ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಹೋದ್ರೆ ನಮಗೆ ಒಳೆಯ ಮಾರ್ಕೆಟ್ ಇರುತ್ತದೆ. ಯಾರು ಇನ್ಮುಂದೆ ವಿಲೀನದ ಬಗ್ಗೆ ಮಾತನಾಡೋದಕ್ಕೆ ಹೋಗಬೇಡಿ ಎಂದರು.