ನನ್ನ 3 ತಿಂಗಳ ಸಂಬಳ ಆಶಾ ಕಾರ್ಯಕರ್ತೆಯರಿಗೆ: ಶಾಸಕ ಗಣೇಶ್ ಹುಕ್ಕೇರಿ

Suvarna News   | Asianet News
Published : May 01, 2021, 11:01 AM ISTUpdated : May 01, 2021, 12:03 PM IST
ನನ್ನ 3 ತಿಂಗಳ ಸಂಬಳ ಆಶಾ ಕಾರ್ಯಕರ್ತೆಯರಿಗೆ: ಶಾಸಕ ಗಣೇಶ್ ಹುಕ್ಕೇರಿ

ಸಾರಾಂಶ

ಶಾಸಕ ಗಣೇಶ್ ಹುಕ್ಕೇರಿಯವರಿಂದ ಸಿಹಿ ಸುದ್ದಿ | ಕಾರ್ಮಿಕರ ದಿನಾಚರಣೆಯಂದು ಕೋವಿಡ್ ವಾರಿಯರ್ ಗಳಿಗೆ ಗುಡ್‌ನ್ಯೂಸ್

ಚಿಕ್ಕೋಡಿ(ಮೇ.01): ಕಾರ್ಮಿಕರ ದಿನಾಚರಣೆಯಂದು ಕೋವಿಡ್ ವಾರಿಯರ್ ಗಳಿಗೆ ಶಾಸಕ ಗಣೇಶ್ ಹುಕ್ಕೇರಿಯವರಿಂದ ಸಿಹಿ ಸುದ್ದಿ ಸಿಕ್ಕಿದೆ. ತನ್ನ ಮೂರು ತಿಂಗಳ ಸಂಬಳವನ್ನ ತಮ್ಮ ಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ನೀಡಲು ಶಾಸಕ ಮುಂದಾಗಿದ್ದಾರೆ.

ಗಣೇಶ್ ಹುಕ್ಕೇರಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಶಾಸಕ ತನ್ನ ಕ್ಷೇತ್ರದ ಕೊರೋನಾ ಮುಂಚೂಣಿ ಕಾರ್ಯಕರ್ತರಾದ ಆದ ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳ ಸಂಬಳವವನ್ನ ನೀಡಲು ತೀರ್ಮಾನಿಸಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೋರಿದ ವಿಜಯಪುರ DHO ಗೆ ಕಡ್ಡಾಯ ರಜೆ

ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೋವಿಡ್ ನಿಧಿಗೆ ನೀಡಿದ್ದಾರೆ. ಅದರ ಜೊತೆಗೆ ಅದರ ಮುಂದಿನ ಮೂರು ತಿಂಗಳ‌ ಸಂಬಳವನ್ನ ಕೋವಿಡ್ ವಾರಿಯರ್ ಗಳಿಗೆ ಬಳಕೆ ಮಾಡಲು ನಿರ್ಧಾರಿಸಿದ್ದಾರೆ. ಈ ಬಗ್ಗೆ ತನ್ನ ಫೆಸಬುಕ್ ಅಕೌಂಟ್ ನಲ್ಲಿ ಶಾಸಕ ಗಣೇಶ್ ಹುಕ್ಕೇರಿ ಬರೆದು ಕೊಂಡಿದ್ದಾರೆ.

ರಾಜ್ಯ ಸರ್ಕಾರ‌ ನನಗೆ ನೀಡುವ ಸಂಬಳದಲ್ಲಿ ಒಂದು ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಮನವಿಯಂತೆ ಕೋವಿಡ್ ನಿಧಿಗೆ ನೀಡುತ್ತಿದ್ದೇನೆ. ಅದನ್ನು...

Posted by Ganesh Hukkeri on Friday, April 30, 2021

ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಸಮುದಾಯಕ್ಕೆ ತಿಳಿವಳಿಕೆ ನೀಡುವುದರಿಂದ ಹಿಡಿದು ಕ್ಷೇತ್ರದ ನಾಗರಿಕರಿಗೆಲ್ಲರಿಗೂ ಕೊರೋನಾ ಲಸಿಕೆಯನನ್ನು ಹಾಕಿಸುವವರೆಗೂ ಹಲವಾರು ಜವಾಬ್ದಾರಿಗಳನ್ನು ವಹಿಸುವ ಇವರ ಕಾರ್ಯ ಶ್ಲಾಘನಾರ್ಹ. ಹಾಗಾಗಿ ಈ ಕಾರ್ಯಕರ್ತೆಯರಿಗೆ ನನ್ನಿಂದ ಒಂದು ಪುಟ್ಟ ಕಾಣಿಕೆಯನನ್ನು ಈ ಕಾರ್ಮಿಕ ದಿನದಂದು ನೀಡಲು ಇಷ್ಟಪಡುತ್ತೇನೆ ಎಂದಿದ್ದಾರೆ ಶಾಸಕ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ