Kolar: ಹಿಜಾಬ್ ತೀರ್ಪು ಕುರಿತು ಹಿರಿಯೂರ ಕ್ಷೇತ್ರದ ಶಾಸಕಿ ಪೂರ್ಣಿಮಾ ಹೇಳಿದ್ದೇನು?

Published : Oct 13, 2022, 11:15 PM IST
Kolar: ಹಿಜಾಬ್ ತೀರ್ಪು ಕುರಿತು ಹಿರಿಯೂರ ಕ್ಷೇತ್ರದ ಶಾಸಕಿ ಪೂರ್ಣಿಮಾ ಹೇಳಿದ್ದೇನು?

ಸಾರಾಂಶ

ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಅಂತ ಬಂದಾಗ ಯೂನಿಫಾರ್ಮ್‌ ಅನ್ನೋದು ಇರಬೇಕು ಎಂದು ಕೋಲಾರದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯಪಟ್ಟರು. ಇಂದು ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಹಿಜಾಬ್ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಸಂಬಂಧ  ಮಾತನಾಡಿದರು.

ವರದಿ: ದೀಪಕ್, ಏಷ್ಯಾನೆಟ್ ಸುವರ್ಣ ನ್ಯೂಸ್, ಕೋಲಾರ

ಕೋಲಾರ (ಅ.13): ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಅಂತ ಬಂದಾಗ ಯೂನಿಫಾರ್ಮ್‌ ಅನ್ನೋದು ಇರಬೇಕು ಎಂದು ಕೋಲಾರದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯಪಟ್ಟರು. ಇಂದು ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಹಿಜಾಬ್ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಸಂಬಂಧ  ಮಾತನಾಡಿದ ಅವರು, ವಿವಿಧ ಸಮುದಾಯ, ಧರ್ಮಗಳಿರುವ ದೇಶ ನಮ್ಮದು, ವಿವಿಧತೆ ಇದ್ದರೂ ಏಕತೆಯಲ್ಲಿ ಬದುಕುತ್ತಿರುವ ದೇಶ ಭಾರತ ಎಂದರು. 

ಅಲ್ಲದೆ ಒಂದು ಧರ್ಮದವರು ಮಾತ್ರ ಹಿಜಾಬ್ ಹಾಕಿಕೊಳ್ಳುತ್ತಾರೆ, ನಮಗೆ  ಅವರ ಸಂಪ್ರದಾಯಗಳ ಕುರಿತು ಅಗೌರತೆ ಇಲ್ಲ, ಆದರೆ ಶಿಕ್ಷಣ ಅಂತ ಬಂದಾಗ ಯೂನಿಫಾಮಿಟಿ ಅನ್ನೋದು ಇರಬೇಕು ಎಂದು ಹೇಳಿದರು. ಅವರು ಹಿಜಾಬ್ ಬೇಕೆಂದು ಧರ್ಮಕ್ಕೆ ಹೆಚ್ಚು ಒತ್ತು ಕೊಡುತ್ತಿರುವುದು ಶಿಕ್ಷಣದ ಕೊರತೆಯಿಂದಾಗಿ ಹೀಗಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು. ಇನ್ನು ನ್ಯಾಯಾಲಯ ಯಾವುದೇ ಆದೇಶ ಕೊಟ್ಟರು ಗೌರವಿಸಬೇಕು, ನ್ಯಾಯಾಲಯದ ಆದೇಶದ ವಿರುದ್ದ ಹೋದರೆ ನಾವು ದೇಶಕ್ಕೆ ಅಗೌರವ ತೋರಿಸಿದ ಹಾಗೆ ಹೀಗಾಗಿ  ಹಿಜಾಬ್‌ಗಿಂತಲೂ ಶಿಕ್ಷಣಕ್ಕೆ ಮೊದಲ ಪ್ರಾಮುಖ್ಯತೆ ನೀಡಬೇಕೆಂದರು. 

Kolar: ಅಕ್ರಮ ಜಾಗ ತೆರವುಗೊಳಿಸಿ ಎಂದಿದ್ದಕ್ಕೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ!

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ವಿಧಾ‌ನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಕೋಲಾರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳ ಮತ್ತು ಹೆರಿಗೆ ವಾರ್ಡ್‌ಗಳಿಗೆ ಭೇಟಿ ನೀಡಿದ ತಂಡ, ಆಸ್ಪತ್ರೆಯಲ್ಲಿನ ನೀರಿನ ಸಮಸ್ಯೆ, ಶೌಚಾಲಯದ ಸಮಸ್ಯೆ ಸೇರಿದಂತೆ ಆಸ್ಪತ್ರೆಯಲ್ಲಿ ಸ್ವಚ್ಚತೆಯ ಕೊರತೆ ಕಂಡು ಬಂದ ಹಿನ್ನಲೆ ಅಧಿಕಾರಿಗಳ ವಿರುದ್ದ ಹರಿಹಾಯ್ದರು.  ಇನ್ನು ಗರ್ಭಿಣಿಯರಿಗೆ ಅಂಗನವಾಡಿಗಳಲ್ಲಿ ಸರ್ಕಾರದ ವತಿಯಿಂದ ನೀಡುವ ಆಹಾರ ಸರಿಯಾಗಿ ತಲುಪಿಲ್ಲದಿರುವುದು ಕಂಡು ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. 

ಹೆಚ್ಚುತ್ತಿರುವ ಕಾಂಗ್ರೆಸ್‌ ಶಾಸಕರ ದಬ್ಬಾಳಿಕೆ: ಬಿಜೆಪಿ ನಾಯಕರ ಆರೋಪ

ಅಲ್ಲದೆ ಆಸ್ಪತ್ರೆಯಲ್ಲಿ ನರ್ಸ್‌ಗಳ ಕೊರತೆ ಹಾಗೂ ಸಿಬ್ಬಂದಿ ಕೊರತೆಯೂ ಸಹ ಕಂಡು ಬಂದಿದ್ದು, ಆಸ್ಪತ್ರೆಯಲ್ಲಿ ಕುಡಿಯುವ ನೀರು ಸೇರಿದಂತೆ ಸ್ವಚ್ಛತೆಯನ್ನ ಕಾಪಾಡಬೇಕೆಂದು ಎಚ್ಚರಿಕೆ ನೀಡಿದ್ರು. ಅಲ್ಲದೆ ನರಸಿಂಹ ರಾಜ ಒಡೆಯರ್ ಅವರ ಕುಟುಂಬ ಕರ್ನಾಟಕದಲ್ಲಿ ತಮ್ಮದೇ ಆದ ಕೊಡುಗೆಯನ್ನ ಕೊಟ್ಟಿದ್ದು  ಆಸ್ಪತ್ರೆಯಲ್ಲಿ ಅವರ ಭಾವಚಿತ್ರವನ್ನ ಇಡುವುದರೊಂದಿಗೆ, ನರಸಿಂಹರಾಜ್ ಒಡೆಯರ್ ಎಂದು ನಾಪಫಲಕ ಹಾಕುವಂತೆ ಸೂಚಿಸಿದರು. ಇನ್ನು ಇದೇ ವೇಳೆ ಎಂಎಲ್‌ಸಿಗಳಾದ ತೇಜಸ್ವಿನಿ ಗೌಡ, ಹೇಮಲತಾ ಹಾಗೂ ಗೋವಿಂದರಾಜು ಅವರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ