
ಬೆಳಗಾವಿ (ಫೆ.05): ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬಂದ ಮಾದರಿಯಲ್ಲೇ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದ ವಿರುದ್ಧ ತೊಡೆ ತಟ್ಟಿ ತಾವು ಬಿಜೆಪಿಗೆ ಸೇರುವುದಿಲ್ಲ ಎಂದಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ಯಕ್ಕಂಚ್ಚಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೊಗುದಿಲ್ಲ. ನಾನು ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ. ನಾನು ಮಾದ್ಯಮದಲ್ಲಿ ನೋಡಿ ಅಚ್ಚರಿ ಮೂಡಿಸಿದೆ. ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಿಂದೆತ್ತ ಸಂಬಂಧವಯ್ಯಾ? ಎಲ್ಲಿಂದ ಎಲ್ಲಿಗೆ ಸಂಬಂದ.. ಆ ಸುದ್ದಿ ಎಲ್ಲವೂ ಸುಳ್ಳು. ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ ಎಂದು ತಿಳಿಸಿದ್ದಾರೆ.
ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ; ಪಕ್ಷಕ್ಕೆ ಬಂದ್ರೆ ಆಫರ್ ಏನು ಗೊತ್ತಾ?
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ನೀತಿಯನ್ನು ನಾವು ಖಂಡಿಸುತ್ತೇವೆ. ನಮಗೆ ಬರಬೇಕಾದ ಅನುದಾನ ಪಾಲನ್ನು ಕೊಡುತ್ತಿಲ್ಲ. ಇದರಿಂದ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೆಹಲಿಗೆ ಹೋಗಿ ಪ್ರತಿಭಟನೆ ಮಾಡುತ್ತೇವೆ. ದೆಹಲಿಯಲ್ಲಿ ಕುಳಿತು ಸಾಂಕೇತಿಕ ಪ್ರತಿಭಟನೆ ಮಾಡುತ್ತೇವೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲ. 136 ಶಾಸಕರು ಜೊತೆಯಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ 'ಸತ್ತ ಸರಕಾರದ ಸಾಹುಕಾರ'; ಸೋಗಲಾಡಿ ಸಮಾಜವಾದ ಬೆತ್ತಲಾಗಿದೆ: ಹೆಚ್‌ಡಿಕೆ ವಾಗ್ದಾಳಿ
ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ. ನನಗೆ ಅಥಣಿ ಕ್ಷೇತ್ರದ ಜನರು ಆಶಿರ್ವಾದ ಮಾಡಿದ್ದಾರೆ. ಅಥಣಿ ಕ್ಷೇತ್ರದ ಜನರು ಶಾಸಕರಾಗಿ ಇರುವಂತೆ ಆದೇಶವನ್ನು ಮಾಡಿದ್ದಾರೆ. ಆದ್ದರಿಂದ ನಾನು ಶಾಸಕನಾಗಿ ಇರುತ್ತೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದಲೂ ನಾನು ಸ್ವರ್ಧೆ ಮಾಡುವುದಿಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ