ಶಾಸಕ ಸೈಲ್‌ ಅಕ್ರಮದಿಂದ ರಾಜ್ಯಕ್ಕೆ ₹44 ಕೋಟಿ ನಷ್ಟ

Kannadaprabha News   | Kannada Prabha
Published : Nov 16, 2025, 05:45 AM IST
MLA Satish Sail

ಸಾರಾಂಶ

ಉತ್ತರ ಕನ್ನಡ ಜಿಲ್ಲೆ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಾಂಗ್ರೆಸ್‌ ಶಾಸಕ ಸತೀಶ್‌ ಕೃಷ್ಣ ಸೈಲ್‌ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಗರದ ಪಿಎಂಎಲ್‌ಎ ವಿಶೇಷ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸಿದೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಾಂಗ್ರೆಸ್‌ ಶಾಸಕ ಸತೀಶ್‌ ಕೃಷ್ಣ ಸೈಲ್‌ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಗರದ ಪಿಎಂಎಲ್‌ಎ ವಿಶೇಷ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸಿದೆ. ಅದಿರಿನ ಅಕ್ರಮ ರಫ್ತಿನಿಂದ ಸರ್ಕಾರದ ಖಜಾನೆಗೆ ಸಮಾರು 44.09 ಕೋಟಿ ರು. ನಷ್ಟವುಂಟಾಗಿದೆ ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ ಕೃಷ್ಣ ಸೈಲ್‌ ಮತ್ತು ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿರುವ ಮಲ್ಲಿಕಾರ್ಜುನ ಶಿಪ್ಪಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯನ್ನು ಆರೋಪಿ ಎಂದು ಪರಿಗಣಿಸಲಾಗಿದೆ. ಪ್ರಕರಣ ಸಂಬಂಧ ಸೆಪ್ಟೆಂಬರ್‌ನಲ್ಲಿ ಇ.ಡಿ.ಅಧಿಕಾರಿಗಳು ಸತೀಶ್‌ ಸೈಲ್‌ ಅವರನ್ನು ಬಂಧಿಸಿದ್ದರು.

ಸುಮಾರು ₹44 ಕೋಟಿ ಮೌಲ್ಯದ ಕಬ್ಬಿಣದ ಅದಿರು ಅಕ್ರಮ ರಫ್ತು ಸಂಬಂಧ 2010ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಇ.ಡಿ. ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸುಮಾರು 8 ಲಕ್ಷ ಟನ್‌ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಸರ್ಕಾರಕ್ಕೆ 44.09 ಕೋಟಿ ರು. ನಷ್ಟ:

ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಆರೋಪಿಗಳು ಚೀನಾಕ್ಕೆ ಅಕ್ರಮವಾಗಿ ರಫ್ತು ಮಾಡಿ ಮಾರಾಟ ಮಾಡಿದ್ದರು. ಈ ಅಕ್ರಮದಲ್ಲಿ ಬೇಲೆಕೇರಿ ಬಂದರು ಅಧಿಕಾರಿಗಳು ಆರೋಪಿಗಳಿಗೆ ಸಾಥ್‌ ನೀಡಿದ್ದರು ಎಂಬುದು ಇ.ಡಿ.ತನಿಖೆಯಲ್ಲಿ ಬಯಲಾಗಿದೆ. ಅದಿರು ಅಕ್ರಮ ರಫ್ತಿನಿಂದ ಸರ್ಕಾರದ ಖಜಾನೆಗೆ ಸುಮಾರು 44.09 ಕೋಟಿ ರು. ನಷ್ಟವುಂಟಾಗಿದೆ ಎಂದು ದೋಷಾರೋಪಪಟ್ಟಿಯಲ್ಲಿ ಇ.ಡಿ. ಉಲ್ಲೇಖಿಸಿದೆ.

46.18 ಕೋಟಿ ರು. ಪಾವತಿ ಬೆಳಕಿಗೆ:

ಆರೋಪಿ ಸತೀಶ್‌ ಸೈಲ್‌ ಈ ಕಬ್ಬಿಣದ ಅದಿರನ್ನು ಅಕ್ರಮವಾಗಿ ಖರೀದಿಸಿದ್ದಕ್ಕಾಗಿ ಇತರೆ ಆರೋಪಿಗಳಿಗೆ 46.18 ಕೋಟಿ ರು. ಪಾವತಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕಬ್ಬಿಣದ ಅದಿರನ್ನು ಸತೀಶ್‌ ಸೈಲ್‌ ಅವರು ಬಹಿರಂಗಪಡಿಸದ ವಿದೇಶಿ ಕಂಪನಿ ಹಾಂಕಾಂಗ್‌ ಜಿಐ (ಎಚ್‌ಇಬಿಇಐ) ಐರನ್‌ ಆ್ಯಂಡ್‌ ಸ್ಟೀಲ್‌ ಇನ್ವೆಸ್ಟ್‌ಮೆಂಟ್‌ ಕಂಪನಿ ಲಿಮಿಟೆಡ್‌ (ಹಿಂದಿನ ಮಲ್ಲಿಕಾರ್ಜುನ ಶಿಪ್ಪಿಂಗ್‌ ಲಿಮಿಟೆಡ್‌ ಕಂಪನಿ) ಮೂಲಕ ರಫ್ತು ಮಾಡಿದ್ದಾರೆ. ಅಂದರೆ, ಕಬ್ಬಿಣದ ಅದಿರನ್ನು ಚೀನಾದ ಖರೀದಿದಾರರಿಗೆ ನೇರವಾಗಿ ಕಳುಹಿಸುವ ಬದಲು ಅಕ್ರಮವಾಗಿ ತಲುಪಿಸಿ, ಆದಾಯವನ್ನು ಮರೆ ಮಾಚಿರುವುದು ಇ.ಡಿ.ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸೈಲ್‌ ವಿದೇಶಿ ಬ್ಯಾಂಕ್‌ ಖಾತೆಗಳು:

ಆರೋಪಿ ಸತೀಶ್‌ ಸೈಲ್‌ ಅವರು ತಮ್ಮ ವಿದೇಶಿ ಕಂಪನಿಗೆ ಸಂಬಂಧಿಸಿ ಸ್ಟ್ಯಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್‌ (ಹಾಂಕಾಂಗ್‌), ಹಾಂಕಾಂಗ್‌ ಇಡಸ್ಟ್ರಿಯಲ್‌ ಮತ್ತು ಕಮರ್ಷಿಯಲ್‌ ಬ್ಯಾಂಕ್‌ ಆಫ್‌ ಚೀನಾ, ಐಸಿಬಿಸಿ ಬ್ಯಾಂಕ್‌ನಲ್ಲಿ ವಿದೇಶಿ ಖಾತೆಗಳನ್ನು ಹೊಂದಿರುವುದು ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಇ.ಡಿ. ಇತ್ತೀಚೆಗಷ್ಟೇ ಸತೀಶ್‌ ಸೈಲ್‌ಗೆ ಸೇರಿದ 21 ಕೋಟಿ ರು. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಚಾರ್ಜ್‌ಶೀಟಲ್ಲೇನಿದೆ?

- ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪನಿಗೆ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್ ಮುಖ್ಯಸ್ಥ

- ಈ ಕಂಪನಿ ಮೂಲಕ ಬೇಲೇಕೇರಿ ಬಂದರಿಂದ 8 ಲಕ್ಷ ಟನ್‌ ಅದಿರು ಅಕ್ರಮ ರಫ್ತು

- ಆದರೆ ದಾಖಲೆಯಲ್ಲಿ ಈ ಕಂಪನಿ ಹೆಸರು ನಮೂದಿಸದೇ ಅಕ್ರಮವಾಗಿ ಸಾಗಣೆ

- ಈ ರೀತಿಯ ಬೇನಾಮಿ ಸಾಗಣೆಯಿಂದ ರಾಜ್ಯದ ಬೊಕ್ಕಸಕ್ಕೆ ₹44 ಕೋಟಿ ಹಾನಿ

- ಇದೇ ಪ್ರಕರಣದಲ್ಲಿ ಸೆಪ್ಟೆಂಬರಲ್ಲಿ ಇ.ಡಿ.ಯಿಂದ ಬಂಧಿತರಾಗಿದ್ದ ಶಾಸಕ ಸೈಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್