ಉದಯ ನಿಧಿ ಹೇಳಿಕೆ ಮೂಲಕ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗ : ಯಶ್ ಪಾಲ್ ಸುವರ್ಣ

By Ravi Janekal  |  First Published Sep 4, 2023, 5:40 PM IST

ಈ ಹಿಂದೆ ಬ್ರಿಟಿಷರು, ಮುಸ್ಲಿಂ ಮತಾಂಧ ರಾಜರು ಮತಾಂತರ, ದಬ್ಬಾಳಿಕೆಯ ಮೂಲಕ ಸನಾತನ ಧರ್ಮದ ನಿರ್ಮೂಲನೆಗೆ ವಿಫಲ ಪ್ರಯತ್ನಕ್ಕೆ ಮುಂದಾಗಿದ್ದರು, ಇದೀಗ ಅದೇ ಮನಸ್ಥಿತಿಯಲ್ಲಿ ಉದಯ ನಿಧಿ ಈ ಹೇಳಿಕೆಯ ಮೂಲಕ ಮಹಮ್ಮದ್ ಘೋರಿ, ಘಜನಿ ವಂಶದ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಕಿಡಿಕಾರಿದರು.


ಉಡುಪಿ (ಸೆ.4) : ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ ಎನ್ ಡಿ ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ,  ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸನಾತನ ಧರ್ಮ ಅಪಮಾನಿಸಲು ಮುಂದಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಈ ಹಿಂದೆ ಬ್ರಿಟಿಷರು, ಮುಸ್ಲಿಂ ಮತಾಂಧ ರಾಜರು ಮತಾಂತರ, ದಬ್ಬಾಳಿಕೆಯ ಮೂಲಕ ಸನಾತನ ಧರ್ಮ(Sanatana dharma)ದ ನಿರ್ಮೂಲನೆಗೆ ವಿಫಲ ಪ್ರಯತ್ನಕ್ಕೆ ಮುಂದಾಗಿದ್ದರು, ಇದೀಗ ಅದೇ ಮನಸ್ಥಿತಿಯಲ್ಲಿ ಉದಯ ನಿಧಿ(Udayanidhi stalin) ಈ ಹೇಳಿಕೆಯ ಮೂಲಕ ಮಹಮ್ಮದ್ ಘೋರಿ, ಘಜನಿ ವಂಶದ ಪರಂಪರೆಯನ್ನು ಮುಂದುವರಿಸುವ ಕಾಯಕದಲ್ಲಿ ತೊಡಗಿದ್ದಾರೆ.

Tap to resize

Latest Videos

undefined

ಸನಾತನ ಧರ್ಮ ನಿರ್ಮೂಲನೆ ಮಾಡಲು ಅವರಪ್ಪನಿಂದಲೂ ಸಾಧ್ಯವಿಲ್ಲ; ಈಶ್ವರಪ್ಪ ವಾಗ್ದಾಳಿ

ಸನಾತನ ಧರ್ಮ ಕೇವಲ ಒಂದು ಧರ್ಮವಾಗಿರದೇ ಭಾರತದ ಜನರ ಜೀವನ ಪದ್ಧತಿಯಾಗಿದ್ದು, ಕೇವಲ ಅಲ್ಪ ಸಂಖ್ಯಾತ ಓಲೈಕೆ, ಕ್ರೈಸ್ತ ಮತಾಂತರ  ಸಂಸ್ಥೆಗಳ ಹಿಡನ್ ಅಜೆಂಡಾದ ಟೂಲ್ ಕಿಟ್ ಭಾಗವಾಗಿ  ಉದಯನಿಧಿ ಬಹು ಸಂಖ್ಯಾತ ಹಿಂದೂ ದ್ವೇಷಿ ನಿಲುವು ತಾಳಿ ಓರ್ವ ಜವಾಬ್ದಾರಿ ಸಚಿವನಾಗಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.

ಉದಯನಿಧಿ ಹೇಳಿಕೆಗೆ  ಐ ಎನ್ ಡಿ ಎ ಒಕ್ಕೂಟದ ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ದಿವ್ಯ ಮೌನ ತಾಳುವ ಮೂಲಕ ಪರೋಕ್ಷವಾಗಿ ತಮ್ಮ ಸಹಮತ ಸೂಚಿಸಿ ಹಿಂದೂ ವಿರೋಧಿ ಹೇಳಿಕೆಗೆ ಸಮ್ಮತಿ ಸೂಚಿಸಿದೆ. ವಿಪಕ್ಷ ನಾಯಕರು ತಮ್ಮ ನಿಲುವನ್ನು ಕೂಡಲೇ ಸ್ಪಷ್ಟ ಪಡಿಸಬೇಕು, ತಮಿಳುನಾಡು ಸರ್ಕಾರ ಹಿಂದೂ ವಿರೋಧಿ ಹೇಳಿಕೆ ನೀಡಿದ ಉದಯನಿಧಿ ಯನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

I N D I A ಮೈತ್ರಿಕೂಟ ಧರ್ಮದ ಆಧಾರದಲ್ಲಿ ದೇಶ ಒಡೆಯುತ್ತಿದೆ- ಮಾಜಿ ಶಾಸಕ ರಘುಪತಿ ಭಟ್

ಹಿಂದೂ ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ ಇದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಯನ್ನು ಜವಾಬ್ದಾರಿಯುತ ಸ್ಥಾನದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಖಂಡನೀಯ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ, ಎಲ್ಲರನ್ನೂ, ಎಲ್ಲಾ ಧರ್ಮವನ್ನು ಸಮಾನತೆಯಿಂದ ನೋಡುವ ಪ್ರಮಾಣವನ್ನು ಮಾಡಿ ಈಗ ತನ್ನ ಮಗ ರಾಜ್ಯದ ಸಚಿವ ಒಂದು ಧರ್ಮದ ಬಗ್ಗೆ ಇಂತಹ ಹೇಳಿಕೆಯನ್ನು ನೀಡಬೇಕಾದರೆ ಈ ಬಗ್ಗೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನಿಲುವೇನು? ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದಲ್ಲಿ ಇಂತಹ ವಿಷ ಬೀಜ ಬಿತ್ತುವುದು ಸರಿಯೇ? ಒಂದು ವರ್ಗದ ಓಲೈಕೆಗಾಗಿ ಪವಿತ್ರ ಹಿಂದೂ ಧರ್ಮವನ್ನು ಕೊನೆಗಾನಿಸುವ ಮಾತು ಎಷ್ಟು ಸರಿ? ಸನಾತನ ಹಿಂದೂ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಅವರ ಮನೋಪ್ರವೃತ್ತಿ ಸರಿಯಲ್ಲ‌ ಎಂದಿದ್ದಾರೆ.

ಸನಾತನಧರ್ಮ ಎಂಬುದು ಸದಾಕಾಲ ಇರುವಂತದ್ದು; ಪೇಜಾವರಶ್ರೀ

ಇತ್ತೀಚೆಗೆ ದೇಶದಲ್ಲಿ ಆರಂಭಗೊಂಡ (I. N. D. I. A) ಇಂ.ಡಿ.ಯಾ. ಮೈತ್ರಿಕೂಟವು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ, ವಿಭಜಿಸುವ ಹುನ್ನಾರ ನಡೆಸಿದೆ. ಈ ಬಗ್ಗೆ ಜನರು ಜಾಗೃತರಾಗಬೇಕು. ಸನಾತನ ಹಿಂದೂ ಧರ್ಮದ ನಾಶವನ್ನು ಬಯಸುವವರು ಸ್ವತಃ ಅವರೇ ನಾಶಗೊಳ್ಳುತ್ತಾರೆ ಎಂಬುದನ್ನು ನೆನಪಿನಲ್ಲಿಡಬೇಕು. ಹಲವಾರು ವರ್ಷಗಳಿಂದ ಸನಾತನ ಹಿಂದೂ ಧರ್ಮದ ಮೇಲೆ ನಿರಂತರವಾಗಿ ದಾಳಿಗಳು ನಡೆದರು, ಸವಾಲುಗಳು ಎದುರಾದರು ನಮ್ಮ ಸನಾತನ ಹಿಂದೂ ಧರ್ಮ ಇಂದಿಗೂ ಎಂದೆಂದಿಗೂ ಬಲಿಷ್ಠವಾಗಿದೆ. ಕರ್ನಾಟಕ ಸರ್ಕಾರವು ತಮಿಳುನಾಡು ಸಚಿವ ಉದಯನಿಧಿ  ಸ್ಟಾಲಿನ್ ಅವರ ಈ ಹೇಳಿಕೆ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಮುಂದಿ‌ನ ದಿನಗಳಲ್ಲಿ ಸನಾತನ ಹಿಂದೂ ಧರ್ಮದ ರಕ್ಷಣೆಯ ದೃಷ್ಟಿಯಿಂದ ಧರ್ಮವನ್ನು ಅವಮಾನಿಸುವವರ ವಿರುದ್ಧ ಹೋರಾಟ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದ್ದಾರೆ.

click me!