ಇಸ್ರೋಗೆ ಬೆಂಗಳೂರಲ್ಲಿ ಜಾಗ ನೀಡಿದ್ದು ಕಾಂಗ್ರೆಸ್‌: ಬಿಕೆ ಹರಿಪ್ರಸಾದ್

By Santosh Naik  |  First Published Sep 2, 2023, 3:41 PM IST

ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌, ಇಸ್ರೋದ ವಿಚಾರದಲ್ಲಿ ರಾಜಕಾರಣ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷ ಅಧಿಕಾರವಿದ್ದಾಗಲೇ ಇಸ್ರೋಗೆ ಬೆಂಗಳೂರಿನಲ್ಲಿ ಜಾಗ ನೀಡಲಾಗಿತ್ತು ಎಂದು ಹೇಳಿದ್ದಾರೆ.


ಕಲಬುರಗಿ (ಸೆ.2): ಚಂದ್ರಯಾನ-3ಯ ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್‌ ಆದ ಬಳಿಕ ಟ್ವಿಟರ್‌ನಲ್ಲಿ ಕಾಂಗ್ರೆಸ್‌ ನಾಯಕರು ಭಾರತದ ಮೊದಲ ಪ್ರಧಾನಿ ನೆಹರು ಅವರ ಫೋಟೋ ಹಾಕಿಕೊಂಡು, ನೆಹರು ಅವರ ಕಾರಣದಿಂದಾಗಿಯೇ ಈ ಯಶಸ್ಸು ಸಾಧ್ಯವಾಗಿದೆ ಎನ್ನುವ ರೀತಿಯಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.  ಕಲಬುರಗಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್, ಆದಿತ್ಯ ಎಲ್ 1 ಉಡಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಪಕ್ಷ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿರುವ ಪಕ್ಷವಾಗಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡವರಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರೋ ಬೀಜದ ಮರದ ಹಣ್ಣನ್ನು ಬಿಜೆಪಿ ಯವರು ತಿನ್ನುತ್ತಿದ್ದಾರೆ ಚಂದ್ರಯಾನದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗದವರು. ಅಧಿಕಾರ ಬಂದಾಗ ಕೆಲವೇ ಸಮುದಾಯಗಳು  ಅಧಿಕಾರ ಅನುಭವಿಸುತ್ತಿವೆ. ಎಲ್ಲಾ ವರ್ಗದವರಿಗೂ ಅಧಿಕಾರ ಸಿಗುವಂತಾಗಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಘೋಷಣೆ ಮಾಡಿಕೊಂಡೇ ಇರುವ ಪಾರ್ಟಿ: ಒನ್ ನೇಷನ್ ಒನ್ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಬಂದಮೇಲೆ ಘೋಷಣೆಗಳಿಗೆ ಕಮ್ಮಿ ಇಲ್ಲ. ರಾಷ್ಟ್ರದಲ್ಲಿನ ವೈವಿದ್ಯತೆಯನ್ನು ಹಾಳು ಮಾಡುತ್ತಿದ್ದಾರೆ. ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಒನ್ ನೇಷನ್ ಒನ್ ಲೀಡರ್ ಅಂದ್ರು ಅನ್ನಬಹುದು. ದೇಶದಲ್ಲಿ ಚುನಾವಣೆಯಲ್ಲಿ ಇಡಿಯನ್ನು ಬಳಸದೆ ಚುನಾವಣೆ ನಡೆಸಬೇಕಿದೆ ಎಂದು ಹೇಳಿದರು.

ಬಿ.ಕೆ ಹರಿಪ್ರಸಾದಗೆ ಮಂತ್ರಿಸ್ಥಾನ ಸಿಗದೇ ಇರೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಪಕ್ಕಾ ಕಾಂಗ್ರೆಸ್ ನವನು. ನನ್ನ ಹೋರಾಟ ನನ್ನ ಮಂತ್ರಿ ಮಾಡಿಲ್ಲಾ ಅಂತ ಅಲ್ಲ. ಸಣ್ಣ ಸಮುದಾಯಗಳಿಗೆ ಅವಕಾಶ‌ ಸಿಗಬೇಕು ಅನ್ನೋದು ನಮ್ಮ ಹೋರಾಟ. ಅದಕ್ಕಾಗಿ ನಾನು  ಯಾವ ಹೋರಾಟಕ್ಕೂ ಕೂಡಾ ಸಿದ್ದ. ಇಂದಿರಾಗಾಂಧಿ ಅವರನ್ನು ನೋಡಿ  ಇಂದಿನವರು ಕಲಿಬೇಕು. ಜವಾನನಿಂದ ದಿವಾನ ವರಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲಾ ವರ್ಗದವರಿಗೂ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

Tap to resize

Latest Videos

ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು:ಬಿ.ಕೆ. ಹರಿಪ್ರಸಾದ್‌

ಸಿದ್ದರಾಮಯ್ಯ ನವರ ಖಾಸಗಿ ಸ್ನೇಹಿತರು ರಾಯರೆಡ್ಡಿ. ಹೀಗಾಗಿ ಅವರ ಪತ್ರದ ಬಗ್ಗೆ ಅವರಿಗೇ ಕೇಳಬೇಕು ಎಂದು ಸಿಎಂಗೆ ರಾಯರೆಡ್ಡಿ ಪತ್ರ ಬರೆದ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಇನ್ನು ಬಿಜೆಪಿಯ ಬಿಎಲ್‌ ಸಂತೋಷ್‌ ಆಪರೇಷನ್‌ ಕಮಲ ಮಾಡೋದ್ರಲ್ಲಿ ಡಾಕ್ಟರೇಟ್‌ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

click me!