ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಬರಲು ಪ್ರಧಾನಿ ನರೇಂದ್ರ ಮೋದಿ ಕಾರಣರಲ್ಲ. ಅವರ ಸಾಹಿತ್ಯ ಕೃಷಿ ಮತ್ತು ಬರವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಂದು ಹೇಳಿದರು.
ಮೈಸೂರು (ಜ.29): ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಬರಲು ಪ್ರಧಾನಿ ನರೇಂದ್ರ ಮೋದಿ ಕಾರಣರಲ್ಲ. ಅವರ ಸಾಹಿತ್ಯ ಕೃಷಿ ಮತ್ತು ಬರವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಂದು ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮೋದಿ ಸರ್ಕಾರ ಇರುವುದರಿಂದ ಪದ್ಮವಿಭೂಷಣ ಪ್ರಶಸ್ತಿ ಬಂದಿದೆ ಎಂಬ ಭೈರಪ್ಪ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದರು. ಭೈರಪ್ಪನವರಿಗೆ ಈ ವಯಸ್ಸಿನಲ್ಲಿ ಓಲೈಕೆ ಏಕೆ ಬೇಕು? ನಿಮಗೆ ಅಕ್ಟೋಬರ್‌ನಲ್ಲಿ ಜ್ಞಾನಪೀಠ ಪ್ರಶಸ್ತಿ ಸಿಗುತ್ತದೆ.
ಅದಕ್ಕಾಗಿ ಓಲೈಕೆ ಸರಿಯಲ್ಲ. ಮೋದಿಯಿಂದ ಪ್ರಶಸ್ತಿ ಬಂದಿಲ್ಲ. ನಿಮ್ಮ ಬರವಣಿಗೆಗೆ, ಸಾಹಿತ್ಯ ಕೃಷಿಗೆ ಗೌರವ ಸಂದಿದೆ. ನಿಮ್ಮ ಈ ಹೇಳಿಕೆ ಪ್ರಶಸ್ತಿಗೆ ಅವಮಾನ ಮಾಡಿದಂತೆ. ನೀವು ಬರೆವಣಿಗೆ ಆರಂಭಿಸಿದಾಗ ಮೋದಿ ಎಲ್ಲಿದ್ದರು? ಅನ್ನುವುದೇ ಗೊತ್ತಿಲ್ಲ ಎಂದು ಅವರು ಕಿಡಿಕಾರಿದರು. ಕರ್ನಾಟಕದ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾದ ಎಸ್.ಎಂ. ಕೃಷ್ಣ ಅವರು ಪ್ರಧಾನಿ, ರಾಷ್ಟ್ರಪತಿ ಸ್ಥಾನ ಹೊರತುಪಡಿಸಿ ರಾಜಕೀಯದಲ್ಲಿರುವ ಇನ್ನುಳಿದ ಎಲ್ಲಾ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಕ್ಷರ, ಆರೋಗ್ಯ, ಅನ್ನಕ್ಕೆ ಹೆಚ್ಚಿನ ಆದ್ಯತೆ ನೀಡಿದರು.
undefined
ಖರ್ಗೆ, ಧರಂರಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಡಿ.ಕೆ.ಶಿವಕುಮಾರ್
ವೈಬ್ರೆಂಟ್ ಗುಜರಾತ್ ಮಾದರಿಯಲ್ಲಿ ವೈಬ್ರೆಂಟ್ ಕರ್ನಾಟಕ ಎಂಬ ಮಾದರಿಗೆ ಎಸ್.ಎಂ. ಕೃಷ್ಣ ಕಾರಣರಾದರು. ಹಲವು ಪ್ರಥಮಗಳಿಗೆ ಎಸ್.ಎಂ. ಕೃಷ್ಣ ಕಾರಣೀಭೂತರಾಗಿದ್ದಾರೆ. ಅವರ ಬಳಿಕ ಮತ್ತೆ ಯಾರು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಕೃಷ್ಣರಂತೆ ನ್ಯಾಯ ಒದಗಿಸಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಸ್.ಎಂ. ಕೃಷ್ಣ ಅವರ ಅಪಾರ ಅನುಭವವನ್ನು ಬಿಜೆಪಿ ಬಳಸಿಕೊಳ್ಳಲಿಲ್ಲ ಎಂಬ ನೋವು ನನಗಿದೆ. ಬಿಜೆಪಿ, ಬಿಬಿಸಿ ಬಗ್ಗೆ ಈಗ ಮಾತನಾಡುವುದಿಲ್ಲ ಎಂದರು. ಮೈಸೂರು- ಬೆಂಗಳೂರು ದಶಪಥಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ಎಸ್.ಎಂ. ಕೃಷ್ಣ ಪತ್ರ ಬರೆದಿದ್ದಾರೆ.
ಅವರಿಂದ, ಸಂಸದ ಪ್ರತಾಪ್ ಸಿಂಹ ಹಾಗೂ ನನ್ನಂತಹವರು ಕಲಿಯುವುದು ಬಹಳಷ್ಟಿದೆ ಎನ್ನುವ ಮೂಲಕ ಪರೋಕ್ಷವಾಗಿ ಹೈವೇಗೆ ಕಾವೇರಿ ಎಂದು ಹೆಸರಿಡುವಂತೆ ಆಗ್ರಹಿಸಿರುವ ಸಂಸದ ಪ್ರತಾಪ್ ಸಿಂಹಗೆ ಕುಟುಕಿದರು. ಕಾಗಿನೆಲೆ ಶ್ರೀಗಳು ಮಾತನಾಡುವಾಗ ಸಿಎಂ ಬೊಮ್ಮಾಯಿ ಅವರು ಮೈಕ್ ಕಿತ್ತುಕೊಂಡ ಘಟನೆಯ ಬಗ್ಗೆ ನನಗೆ ಬೇಸರವಿದೆ.ಯಾವುದಾದರೂ ದೊಡ್ಡ ಸಮುದಾಯದ ಮಠದ ಶ್ರೀಗಳು ಮಾತನಾಡುವಾಗ ಈ ರೀತಿ ಮೈಕ್ ಕಸಿದು ಕೊಂಡಿದ್ದರೆ ಬಿಡುತ್ತಿದ್ದರಾ? ಎಂದು ಅವರು ಪ್ರಶ್ನಿಸಿದರು.
ಕಾಂಗ್ರೆಸ್ ಬಸ್‌ಯಾತ್ರೆಗೆ 52 ಸ್ಥಾನ ಮಾತ್ರ: ಸಚಿವ ಅಶ್ವತ್ಥ ನಾರಾಯಣ್
ಕೇಂದ್ರ ಸರ್ಕಾರ ನೀಡುವ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಭಾಜನರಾದ ಮಾಜಿ ಸಿಎಂ ಎಸ್.ಎಂ. ಕೃಷ್ಣ, ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ, ಉದ್ಯಮಿ ಹಾಗೂ ಸಮಾಜ ಸೇವಕಿ ಡಾ. ಸುಧಾಮೂರ್ತಿ, ಡಾ. ಖಾದರ್ ವಲ್ಲಿ ಸೇರಿದಂತೆ ಇನ್ನಿತರ ಹಿರಿಯ ಸಾಧಕರಿಗೆ ಎಚ್ ವಿಶ್ವನಾಥ್ ಅಭಿನಂದನೆ ಸಲ್ಲಿಸಿದರು. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿ, ಇನ್ನುಳಿದ ಅವಧಿಯಲ್ಲಿ ಒಳ್ಳೆಯ ಆಡಳಿತ ನೀಡಲಿ ಎಂದು ಹಾರೈಸಿದರು.