ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಪೊಲೀಸರು ದೂರು ದಾಖಲಿಸಿಲು ಹಿಂದೇಟು ಹಾಕಿದ ಆರೋಪ ಕೇಳಿಬಂದಿದ್ದು, ಬಿಜೆಪಿ ಕಾರ್ಯಕರ್ತರು ಬರ್ಕೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಮಂಗಳೂರು (ಆ.19): ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಪೊಲೀಸರು ದೂರು ದಾಖಲಿಸಿಲು ಹಿಂದೇಟು ಹಾಕಿದ ಆರೋಪ ಕೇಳಿಬಂದಿದ್ದು, ಬಿಜೆಪಿ ಕಾರ್ಯಕರ್ತರು ಬರ್ಕೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಇಲ್ಲವಾದರೆ ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಐವನ್ ಡಿಸೋಜ್. ಪ್ರಚೋದನಾತ್ಮಕ ಹೇಳಿಕೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಾ ಮೋರ್ಚಾ ಕಾರ್ಯಕರ್ತರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಪೊಲೀಸರ ನಡೆ ವಿರುದ್ಧ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಠಾಣೆ ಎದುರು ಕುಳಿತು ಪೊಲೀಸರಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು.
'ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ'; ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಹೇಳಿಕೆಗೆ ಆರ್‌ವಿ ದೇಶಪಾಂಡೆ ಬೇಸರ
ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡುವುದಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ರೂ ದೂರು ದಾಖಲಿಸಿಕೊಳ್ಳದ ಪೊಲೀಸರು. ಇಂದು ಸಂಜೆ ಮಂಗಳೂರು ಪೊಲೀಸ್ ಕಮಿಷನರ್‌ಗೆ ಬಿಜೆಪಿ ನಿಯೋಗ ದೂರು ನೀಡಿದ್ದರು. ಇದರ ನಡುವೆ ಬಿಜೆಪಿ ಯುವ ಮೋರ್ಚಾದಿಂದಲೂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೆ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಭಾಗಿಯಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಾಪಸ್ ಕರೆಸಬೇಕು ಇಲ್ಲವಾದಲ್ಲಿ ಬಾಂಗ್ಲಾ ಪ್ರಧಾನಿಗೂ ಇದೇ ಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಸಿದರು.
ಸಿಎಂ ಸಿದ್ದರಾಮಯ್ಯರ ಮೇಲೆ ಕೇಸ್ ಮಾಡಿದ್ರೆ ರಾಜ್ಯದ ಏಳು ಕೋಟಿ ಜನ ಸಹಿಸೊಲ್ಲ: ಎಂಬಿ ಪಾಟೀಲ್
ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ ಮುಂದಿನ ಹೆಜ್ಜೆ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ರಾಜ್ಯಪಾಲರು ಹಿಂಪಡೆಯಬೇಕು. ಇಲ್ಲಿದಿದ್ದರೆ ರಾಜಭವನಕ್ಕೆ ಬಾಂಗ್ಲಾ ಮಾದರಿ ದಾಳಿ ನಡೆಸಿ ರಾಜ್ಯಪಾಲರ ಕಚೇರಿ ವಶಪಡಿಸಿಕೊಳ್ಳುತ್ತೇವೆ ಎಂದು ನೀಡಿದ್ದರು. ಅವರ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ. ಆದರೆ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ ಹಿನ್ನೆಲೆ ಪೊಲೀಸರ ನಡೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.