ಪರೀಕ್ಷೆ ವೇಳೆ ಅಧಿಕಾರಿಗಳಿಗೂ ಫೋನ್‌ ಬಳಕೆ ನಿಷೇಧ

By Kannadaprabha NewsFirst Published Nov 4, 2019, 8:57 AM IST
Highlights

 ಪರೀಕ್ಷಾ ಕಾರ್ಯದಲ್ಲಿ ನಿರತರಾಗಿರುವ ವಿಭಾಗದ ಮುಖ್ಯಸ್ಥರು, ಎಲ್ಲ ಉಪನ್ಯಾಸಕರು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್‌ ಫೋನ್‌ ಬಳಕೆ ಮಾಡದಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು (ನ.04): ಡಿಪ್ಲೋಮಾ ಸೆಮಿಸ್ಟರ್‌ ಥಿಯೆರಿ ಪರೀಕ್ಷೆಗಳು ನ.11ರಿಂದ ಆರಂಭವಾಗಲಿದ್ದು, ಪರೀಕ್ಷಾ ಕಾರ್ಯದಲ್ಲಿ ನಿರತರಾಗಿರುವ ವಿಭಾಗದ ಮುಖ್ಯಸ್ಥರು, ಎಲ್ಲ ಉಪನ್ಯಾಸಕರು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್‌ ಫೋನ್‌ ಬಳಕೆ ಮಾಡದಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ನಕಲು ಮುಕ್ತವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ವಿದ್ಯಾರ್ಥಿಗಳ ಜತೆಗೆ ಅಧಿಕಾರಗಳು ಸಹ ಫೋನ್‌ ಬಳಕೆ ಮಾಡಬಾರದು. ಪ್ರಾಂಶುಪಾಲರು ಮತ್ತು ಮುಖ್ಯ ಅಧೀಕ್ಷಕರು ಇದರ ನಿಗಾವಹಿಸಬೇಕಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೊಬೈಲ್‌ ಬಳಕೆಯಿಂದ ನಕಲು ನಡೆಯುವ ಸಾಧ್ಯತೆಗಳಿವೆ. ಹೀಗಾಗಿ, ಯಾರೊಬ್ಬರೂ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ ಬಳಸಬಾರದು. ಸರ್ಕಾರದ ಆದೇಶ ಮೀರಿ ಮೊಬೈಲ್‌ ಬಳಕೆ ಮಾಡಿದರೆ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

click me!