ಇಂದು ನಾಳೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Published : Oct 23, 2023, 09:11 AM IST
ಇಂದು ನಾಳೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಸಾರಾಂಶ

ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ‌ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ಅ.23)  ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ‌ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿರಲಿದ್ದು, ಮುಂಜಾನೆ ಮಂಜು ಆವರಿಸಿದ ವಾತಾವರಣ ಇರಲಿದೆ.  ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ 'ತೇಜ್' ಚ೦ಡ ಮಾರುತದಿಂದ ರಾಜ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿಸಿರುವ ಹವಾಮಾನ ಇಲಾಖೆ, ಇಂದು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಯಾದಗಿರಿ: ಬೆಳೆಗೆ ಟ್ಯಾಂಕರ್ ನೀರಿಗೆ ಮೊರೆ ಹೋದ ರೈತರು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ