
ಮಂಗಳೂರು (ಜ.18) : ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸುವ ಗುರಿಯೊಂದಿಗೆ ಮೋದಿ ಬ್ರಿಗೇಡ್ ಎಂಬ ಸಂಘಟನೆ ಸ್ಥಾಪಿಸಲಾಗಿದೆ. ಜ.21ರಂದು ಬೆಳಗ್ಗೆ 10.30ಕ್ಕೆ ನಗರದ ನವಭಾರತ್ ಸರ್ಕಲ್ ಬಳಿಯ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಇದರ ಉದ್ಘಾಟನೆ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು. ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಮೋದಿ ಬ್ರಿಗೇಡ್ ಉದ್ಘಾಟಿಸುವರು. ವಕೀಲೆ ಮೀರಾ ರಾಘವೇಂದ್ರ ಪ್ರಮುಖ ಭಾಷಣ ಮಾಡುವರು ಎಂದು ಮೋದಿ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ರವಿ ಕಾವೂರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ದೇಶದ ನೂರು ಕೋಟಿ ಜನರಿಗೆ ನಾಯಕತ್ವ ಕೊಡುವ ವ್ಯಕ್ತಿತ್ವ ಇರೋದು ಮೋದಿಗೆ ಮಾತ್ರ: ಎಚ್‌ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅಭಿಮಾನದಿಂದ ಸಂಘಟನೆಯನ್ನು ಸ್ಥಾಪಿಸಿದ್ದೇವೆ. ‘ಸಬ್‌ಕಾ ಸಾಥ್ ಸಬ್ ಕಾ ವಿಕಾಸ್, ಸಬ್‌ಕಾ ವಿಶ್ವಾಸ್’ ಎಂಬ ಧ್ಯೇಯದೊಂದಿಗೆ ಮೋದಿ ಅವರು ಕಳೆದ 10 ವರ್ಷಗಳಿಂದ ದೇಶದಲ್ಲಿ ಯಶಸ್ವಿ ಆಡಳಿತ ನೀಡಿದ್ದಾರೆ. ಮೋದಿ ಅವರ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜತೆಗೆ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ, ಆರ್ಥಿಕವಾಗಿ ಹಿಂದುಳಿದವರಿಗೆ ಸೇವಾ ಕಾರ್ಯವನ್ನು ಸಂಘಟನೆ ನಡೆಸಲಿದೆ ಎಂದರು.
ಬಿಜೆಪಿಯಿಂದ ಯಾರು ಸ್ಪರ್ಧಿಸಿದರೂ ಬೆಂಬಲ:
ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರನ್ನು ಬೆಂಬಲಿಸಿ ಪ್ರಚಾರ ನಡೆಸುತ್ತೇವೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಲಿದ್ದಾರೆ ಎಂದರು.
Ticket fight: ಅನಂತ್ ಸುತ್ತಲೇ ಗಿರಕಿ ಹೊಡೆಯುತ್ತಿರುವ ಬಿಜೆಪಿ ಟಿಕೆಟ್!
ಮೋದಿ ಬ್ರಿಗೇಡ್ ಗೌರವಾಧ್ಯಕ್ಷ ದಿನೇಶ್ ಕೆ. ಉರ್ವ, ಅಧ್ಯಕ್ಷ ಪದ್ಮರಾಜ್ ಲೋಹಿತ್‌ನಗರ, ಸಂಚಾಲಕ ಶಿವಪ್ರಸಾದ್ ಮುಡಿಪು, ಸದಸ್ಯ ಧೀರಜ್ ಕಲ್ಲಡ್ಕ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ