
ಬೆಂಗಳೂರು (ಡಿ.6): ನರೇಂದ್ರ ಮೋದಿ ಸರ್ಕಾರ ಕರ್ನಾಟಕ್ಕೆ ಗುಡ್ ನ್ಯೂಸ್ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೂಡ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನವಾಗಿದೆ. ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ.
ಕರ್ನಾಟಕದ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳು ಯಾದಗಿರಿ, ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸ್ಥಾಪನೆಯಾಗಲಿದೆ. ಯಾದಗಿರಿ ಜಿಲ್ಲೆಯ ಮುದ್ನಾಳ್ ಗ್ರಾಮದಲ್ಲಿ, ಚಿತ್ರದುರ್ಗದ ಕುಂಚಿಗನಾಳ್ ಗ್ರಾಮ ಹಾಗೂ ರಾಯಚೂರಿನ ಸಿಂಧನೂರು ತಾಲೂಕಿನ ಎಳರಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ನಿರ್ಮಾಣವಾಗಲಿದೆ. ಅದರೊಂದಿಗೆ ಕರ್ನಾಟಕ ಕ್ಕೆ ಒಂದು ಹೊಸ ನವೋದಯ ವಿದ್ಯಾಲಯ ಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಳ್ಳಾರಿಯಲ್ಲಿ ನವೋದಯ ವಿದ್ಯಾಲಯ ನಿರ್ಮಾಣವಾಗಲಿದೆ.
20 ದಿನಗಳಲ್ಲೇ ಶಬರಿಮಲೆಯಲ್ಲಿ 60 ಕೋಟಿ ಮೌಲ್ಯದ ಅಪ್ಪಂ, ಅರವಣ ಮಾರಾಟ!
ಕೇಂದ್ರ ಸಂಪುಟ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಅನುಮೋದನೆ ನೀಡಿದೆ. ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ತಿಳಿಸಿದೆ. ದೇಶದಾದ್ಯಂತ 28 ಹೊಸ ನವೋದಯ ವಿದ್ಯಾಲಯಗಳನ್ನು (NVs) ಸ್ಥಾಪಿಸಲು ಕ್ಯಾಬಿನೆಟ್ ಅನುಮೋದಿಸಿದೆ. ನವೋದಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿದೆ.
Mangaluru: ಕೆಟ್ಟಿದ್ದ ಫ್ರಿಜ್ ಸರಿ ಮಾಡಲು ಬಂದು ಶೀಲ ಹಾಳು ಮಾಡಿದ ಶಫೀನ್
ಕರ್ನಾಟಕದಲ್ಲಿ ನಿರ್ಮಾಣವಾಗಲಿರುವ ಕೇಂದ್ರೀಯ ವಿದ್ಯಾಲಯಗಳು/ವಿಸ್ತರಣೆಗಳು
| ಚಿತ್ರದುರ್ಗ | ಕುಂಚಿಗನಾಳ್ ಗ್ರಾಮ |
| ರಾಯಚೂರು | ಎಳರಗಿ ಗ್ರಾಮ |
| ಯಾದಗಿರಿ | ಮುದ್ನಾಳ್ ಗ್ರಾಮ |
| ಶಿವಮೊಗ್ಗ | ಈಗಿರುವ ಕೇಂದ್ರೀಯ ವಿದ್ಯಾಲಯ ವಿಸ್ತರಣೆ |
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ