ರಾಜ್ಯಕ್ಕೂ ಕಾಲಿಟ್ಟ ಮೊಹ್ಮದ್‌ ವಿವಾದ: ದಾವಣಗೆರೆಯಲ್ಲಿ ಘರ್ಷಣೆ, ಕಲ್ಲೆಸೆತ

Kannadaprabha News   | Kannada Prabha
Published : Sep 25, 2025, 06:06 AM IST
KSRP

ಸಾರಾಂಶ

ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ.

ದಾವಣಗೆರೆ : ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ದಾವಣಗೆರೆಯಲ್ಲಿ ಇದೇ ಪೋಸ್ಟರ್‌ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಭಿತ್ತಿ ಪತ್ರ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ವೇಳೆ, ಒಂದು ಗುಂಪು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಲಾಗಿದೆ.

ಏನಿದು ವಿವಾದ?:

ಉತ್ತರ ಪ್ರದೇಶದ ಬರೇಲಿಯಲ್ಲಿ ಉರುಸ್‌ ಯಾತ್ರೆ ವೇಳೆ ‘ಐ ಲವ್‌ ಮೊಹಮ್ಮದ್‌’ ಎಂಬ ಹಿಡಿದು ಮೆರವಣಿಗೆ ಸಾಗಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿ ಹಿಂದೂಗಳು ‘ಐ ಲವ್‌ ಮಹಾದೇವ್‌’ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಈ ವಿವಾದ ಹಲವು ರಾಜ್ಯಗಳಿಗೆ ಹಬ್ಬಿದ್ದು, ಕೋಮುತ್ವೇಷಕ್ಕೆ ಕಾರಣವಾಗಿದೆ.

ಅನ್ಯಕೋಮಿನ ಯುವಕರು ಮನೆ ಮನೆಗೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಕಾರ್ಲ್ ಮಾರ್ಕ್ಸ್ ನಗರದಲ್ಲಿ ‘ಐ ಲವ್ ಮಹಮ್ಮದ್’ ಎಂಬ ಫ್ಲೆಕ್ಸ್‌ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಜ್ಯಕ್ಕೂ ಕಾಲಿಟ್ಟ ಮೊಹ್ಮದ್‌ ವಿವಾದ: ದಾವಣಗೆರೆಯಲ್ಲಿ

ಘರ್ಷಣೆ, ಕಲ್ಲೆಸೆತ - ಪೋಸ್ಟರ್‌ ಅಂಟಿಸಿದ್ದಕ್ಕೆ ಗಲಾಟೆ

- ಬಿಗು ಸ್ಥಿತಿ । ಬಿಗಿ ಬಂದೋಬಸ್ತ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌