ಅಕ್ಕಿ ಜತೆ ಹಣದ ಭಾಗ್ಯ ಜು. 10ರಿಂದ: ಸಿಎಂ ಸಿದ್ದರಾಮಯ್ಯ

By Kannadaprabha NewsFirst Published Jul 2, 2023, 7:01 AM IST
Highlights

ಅನ್ನಭಾಗ್ಯದ ಅಡಿ ಹಾಲಿ ನೀಡುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ನೀಡುವುದಾಗಿ ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ 170 ರು.ಗಳಂತೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆದರೆ, ಈ ಹಣ ಜು.1ರಿಂದಲೇ ಖಾತೆಗೆ ವರ್ಗಾವಣೆ ಮಾಡುವುದಾಗಿ ಹೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜು.02):  ರಾಜ್ಯದ ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ 5 ಕೆ.ಜಿ. ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜು.1ರಿಂದಲೇ ಜಾರಿಯಾಗಲಿದೆ ಎಂದು ನಾವು ಹೇಳಿಲ್ಲ. ಜು.10ರಿಂದ ಅಕ್ಕಿ ಬದಲು ನೇರ ನಗದು ವರ್ಗಾವಣೆ ಮೂಲಕ ಹಣ ಹಾಕಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯದ ಅಡಿ ಹಾಲಿ ನೀಡುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ನೀಡುವುದಾಗಿ ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ 170 ರು.ಗಳಂತೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆದರೆ, ಈ ಹಣ ಜು.1ರಿಂದಲೇ ಖಾತೆಗೆ ವರ್ಗಾವಣೆ ಮಾಡುವುದಾಗಿ ಹೇಳಿಲ್ಲ ಎಂದರು.

Latest Videos

ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ, ಅನ್ನ ಭಾಗ್ಯ ಜಾರಿಯಾದ್ರೂ ಮತ್ತೆ ಗೊಂದಲ!

ಜುಲೈ ತಿಂಗಳಲ್ಲೇ ಅಕ್ಕಿ ಬದಲು ಹಣ ನೀಡುವ ಕೆಲಸ ಮಾಡುತ್ತೇವೆ. ಜು.10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗಲಿದೆ. ಜುಲೈ ತಿಂಗಳಲ್ಲಿ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೂ ಹಣ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಶೇ.85ರಷ್ಟು ಖಾತೆ ಮಾಹಿತಿ ಸಂಗ್ರಹ:

ಇದೇ ವಿಚಾರವಾಗಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ‘ಅಕ್ಕಿ ನೀಡುವುದಾಗಿ ಮಾತು ಕೊಟ್ಟಿದ್ದೆವು. ಮುಖ್ಯಮಂತ್ರಿಗಳು ಹಾಗೂ ಆಹಾರ ಸಚಿವರು ಎಲ್ಲಾ ರೀತಿಯ ಪ್ರಯತ್ನ ಮಾಡಿದರೂ ಅಕ್ಕಿ ಹೊಂದಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅಕ್ಕಿ ಬದಲಿಗೆ ಅವರ ಖಾತೆಗಳಿಗೆ ಹಣ ಹಾಕುತ್ತಿದ್ದೇವೆ. ಶೇ.85 ರಷ್ಟು ಖಾತೆಗಳ ಮಾಹಿತಿ ಈಗಾಗಲೇ ಸಂಗ್ರಹವಾಗಿದೆ. ಉಳಿದ ಮಾಹಿತಿ ಸಂಗ್ರಹಿಸಿ ಹಣ ಹಾಕುತ್ತೇವೆ’ ಎಂದು ಮಾಹಿತಿ ನೀಡಿದರು.

click me!