DK Shivakumar: ಮುಂಗಾರು ಮಳೆ ಕೊರತೆ: ಬರದ ನಾಡಿಗೆ ಸಿಎಂ ಸಿದ್ಧತೆ; ಇಂದು ಸರಣಿ ಸಭೆ

Kannadaprabha News   | Kannada Prabha
Published : Jul 19, 2026, 07:44 AM IST
DK Shivakumar

ಸಾರಾಂಶ

ರಾಜ್ಯದ ಬರ ಪರಿಸ್ಥಿತಿ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿ ಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಲಾಗುತ್ತಿದ್ದು, ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

 ಬೆಂಗಳೂರು (ಜು.19): ರಾಜ್ಯದ ಬರ ಪರಿಸ್ಥಿತಿ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿ ಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಲಾಗುತ್ತಿದ್ದು, ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಇಂದು ಸಿಎಂ ಮಹತ್ವದ ಸಭೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್‌, ರಾಜ್ಯದ ಬರ ಪರಿಸ್ಥಿತಿ ಸಂಬಂಧ ಮುಖ್ಯಮಂತ್ರಿ ಅವರ ಜತೆಗೂಡಿ ಈಗಾಗಲೇ ಬೆಳಗಾವಿ ಕಂದಾಯ ವಿಭಾಗ, ಕಲಬುರಗಿ ಕಂದಾಯ ವಿಭಾಗ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಇದೀಗ ಇಡೀ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಿ, ಪರಿಹಾರ ಸೂಚಿಸಲು ಭಾನುವಾರ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಸಲಹೆ, ಸೂಚನೆ ನೀಡಲಾಗುವುದು ಎಂದರು.

ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ

ರಾಜ್ಯದಲ್ಲಿ ಮಳೆ ಕೊರತೆ ಕಾರಣದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದನ್ನು ತಡೆಯಲು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಲಾ 5 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು ಪೂರೈಕೆಗಾಗಿಯೇ 329 ಕೋಟಿ ರು. ನೀಡಲಾಗಿದೆ. ಅದರೊಂದಿಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿ ಸುಮಾರು 600 ಕೋಟಿ ರು. ಲಭ್ಯವಿದ್ದು, ಅದನ್ನು ಅಗತ್ಯ ಸಂದರ್ಭದಲ್ಲಿ ಬಳಸುವಂತೆ ಸೂಚಿಸಲಾಗಿದೆ. ಹಾಗೆಯೇ, ರಾಜ್ಯದ ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಾವು ಸುಮ್ಮನೆ ಕೂರದೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಜೂನ್‌ ತಿಂಗಳಲ್ಲಿ ಭಾರಿ ಮಳೆಯ ಕೊರತೆಯ ಬಳಿಕ ಜುಲೈನಲ್ಲಿ ಉತ್ತಮ ಮಳೆಯಾಗದೇ ಇದ್ದರೆ ರಾಜ್ಯವು 150 ವರ್ಷಗಳಲ್ಲೇ ಕಂಡುಕೇಳರಿಯದ ಭೀಕರ ಬರಕ್ಕೆ ತುತ್ತಾಗಲಿದೆ ಎಂದು ಇತ್ತೀಚೆಗೆ ಸ್ವತಃ ಕಂದಾಯ ಸಚಿವ ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

State News Live: ಮುಂಗಾರು ಮಳೆ ಕೊರತೆ - ಬರದ ನಾಡಿಗೆ ಸಿಎಂ ಸಿದ್ಧತೆ | ಇಂದು ಸರಣಿ ಸಭೆ ನಡೆಸಲಿರುವ ಡಿಕೆ ಶಿವಕುಮಾರ್
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮತ್ತೊಂದು ಖಡಕ್ ನಿರ್ಧಾರ