ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಸೂಚನೆ!

By Suvarna News  |  First Published May 16, 2023, 3:28 PM IST

ಕರ್ನಾಟಕದ ಹಲವು ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ವೇಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ? 


ಬೆಂಗಳೂರು(ಮೇ.16): ಕರ್ನಾಟಕದಲ್ಲಿ ಕೆಲ ದಿನ ಸತತವಾಗಿ ಅಬ್ಬರಿಸಿದ್ದ ಮಳೆರಾಯ ಇದೀಗ ಬ್ರೇಕ್ ತೆಗೆದುಕೊಂಡಿದ್ದಾನೆ. ಆದರೆ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಲಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲೆವೆಡೆ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮಾರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರಿಂದ ನಗರ ಪ್ರದೇಶದಲ್ಲಿ ಜನರು ಮಳೆಗೆ ಹೈರಾಣಾಗುವ ಸಾಧ್ಯತೆ ಕಾಣಿಸತೊಡಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಬಳಿಕ ದಿಢೀರ್ ಮಳೆಯಾಗಲಿದೆ ಎಂದಿದೆ.

Tap to resize

Latest Videos

 

Karnataka rain: ರಾಜ್ಯದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: 4 ಬಲಿ!
 
ರಾಜ್ಯದ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಶ್ ಇದ್ದು ಉರಿಬಿಸಿಲು ಹಲವೆಡೆ ತಟ್ಟುತ್ತಿದೆ. ನಗರದ ಎಚ್‌ಎಎಲ್‌ನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ 32.6 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಒಟ್ಟಾರೆ ನಗರದಲ್ಲಿ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ ವಾರ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ಮೋಚಾ ಸೈಕ್ಲೋನ್‌ನಿಂದ ಕರ್ನಾಟಕದಲ್ಲಿ ಈಗಾಗಲೇ ಹಲವು ಭಾಗದಲ್ಲಿ ಮಳೆಯಾಗಿದೆ. ಬಂಗಾಳ ಕೊಲ್ಲಿಯ ಆಗ್ನೇಯ ದಿಕ್ಕಿನಲ್ಲಿ ಮೋಚಾ ಚಂಡಮಾರುತ ರೂಪಗೊಂಡಿತ್ತು. ಬಳಿಕ ಉತ್ತರದ ಕಡೆಗೆ ಚಲಿಸಿತ್ತು. ಇತ್ತ ಮೋಚಾ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಭಾಗ ತಲುಪುವಷ್ಟರಲ್ಲಿ ಕ್ಷೀಣಿಸಿತ್ತು. ಮೋಚಾ ಚಂಡಮಾರುತದಿಂದ ಈ ಬಾರಿ ಭಾರತದಲ್ಲಿ ಮುಂಗಾರ ಆರಂಭಕ್ಕೆ ಉತ್ತಮ ವಾತಾವರಣ ನಿರ್ಮಿಸಿದೆ. ಹೀಗಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಕೇರಳ ಪ್ರವೇಶಿಸಲಿದೆ. ಕೇರಳ ಪ್ರವೇಶಿಸಿದ ಮೂರರಿಂದ ನಾಲ್ಕು ದಿನದಲ್ಲಿ ಮುಂಗಾರು ಕರ್ನಾಟಕ ಪ್ರವೇಶಿಸಲಿದೆ.

ಮೊದಲ ಮಳೆಗೆ ಕುಣಿದು ಕುಪ್ಪಳಿಸಿದ ನಾಯಿ... ವೈರಲ್ ವಿಡಿಯೋ

ಈ ಬಾರಿ ಪ್ರವಾಸ ಸೃಷ್ಟಿಯಾಗುವಂತ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ನಿರೀಕ್ಷೆಯಂತೆ ಉತ್ತಮ ಮಳೆಯಾಗಲಿದೆ.ಮುಂಗಾರು ಅವಧಿಯಲ್ಲಿ ಶೇಕಡಾ 90 ರಷ್ಟು ಮಳೆಯಾಗವು ಸಾಧ್ಯತೆ ಇದೆ.  ಸರಾಸರಿಯಾಗಿ ಕರ್ನಾಟಕದಲ್ಲಿ ಶೇ 70 ರಿಂದ 80 ರಷ್ಟು ಮಳೆ ಮುಂಗಾರಿನ ಅವಧಿಯಲ್ಲಿ ಆಗಲಿದೆ. ಇನ್ನುಳಿದ 20 ರಿಂದ 30 ಶೇಕಡಾ ಮಳೆ ಹಿಂಗಾರು ಅವಧಿಯಲ್ಲಿ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

click me!