ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು

ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು

Published : Mar 17, 2026, 12:53 PM IST

ದಕ್ಷಿಣ ಕನ್ನಡದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ಕಾಮುಕ ಪ್ರವೃತ್ತಿ ತೋರಿದ್ದಾರೆಯೇ? ರಕ್ಷಣೆ ಕೋರಿ ಬಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಲೈಂಗಿಕ ಸುಖಕ್ಕೆ ಆಹ್ವಾನ ನೀಡುತ್ತಿದ್ದಾರೆಯೇ? ಇಂತಹದೊಂದು ಗಂಭೀರ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅವರ ವಿರುದ್ಧ ಕೇಳಿಬಂದಿದ್ದು, ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಏನಿದು ಆರೋಪ?

ಖಾಸಗಿ ಸುದ್ದಿ ವಾಹಿನಿಯೊಂದು ನಡೆಸಿದ ತನಿಖಾ ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಸಂದೇಶ್ ಅವರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಟುಂಬಗಳ ಆಸ್ತಿ ಕಲಹ ಅಥವಾ ಕೌಟುಂಬಿಕ ಜಗಳದ ಕೇಸ್‌ಗಳನ್ನು ಬಳಸಿಕೊಂಡು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವಿದೆ. ಆರೋಪಿಗಳ ಹೆಂಡತಿಯನ್ನೇ ಗುರಿಯಾಗಿಸಿಕೊಂಡು, 'ನಿನ್ನ ಗಂಡನನ್ನು ಕೇಸ್‌ನಿಂದ ಬಿಡಿಸಬೇಕೆಂದರೆ ನೀನು ನನ್ನ ಬಳಿ ಬರಬೇಕು' ಎಂದು ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದಕ್ಕೆ ಒಪ್ಪದಿದ್ದರೆ ಗಂಡನ ಮೇಲೆ ರೌಡಿಶೀಟ್ ತೆರೆಯುವ ಬೆದರಿಕೆ ಹಾಕುತ್ತಿದ್ದರು ಎಂಬ ದೂರುಗಳು ಕೇಳಿಬಂದಿವೆ. ಇದಕ್ಕೆ ಪೂರಕವಾಗಿ ಇನ್ಸ್‌ಪೆಕ್ಟರ್ ಮಹಿಳೆಯೊಬ್ಬರ ಮನೆಯ ಕಾಂಪೌಂಡ್ ಹಾರಿ ಒಳಹೋದ ದೃಶ್ಯಗಳು ಮತ್ತು ಡ್ಯಾನ್ಸ್ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಇನ್ಸ್‌ಪೆಕ್ಟರ್ ಸಂದೇಶ್ ನೀಡಿದ ಸ್ಪಷ್ಟನೆ:

ಈ ಎಲ್ಲಾ ಆರೋಪಗಳನ್ನು ಇನ್ಸ್‌ಪೆಕ್ಟರ್ ಸಂದೇಶ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. 'ನನ್ನ ಮೇಲೆ ಬಂದಿರುವ ಆರೋಪಗಳೆಲ್ಲವೂ ಸುಳ್ಳು. ಕಳೆದ ವರ್ಷ ನಾನು ಈ ಠಾಣೆಗೆ ಬಂದಾಗಿನಿಂದ ಕೆಲವು ಹಿತಶತ್ರುಗಳು ಈ ರೀತಿ ಮಾಡುತ್ತಿದ್ದಾರೆ. ಈಗಾಗಲೇ ಮೇಲಧಿಕಾರಿಗಳು ತನಿಖೆ ನಡೆಸಿ ನನಗೆ ಕ್ಲೀನ್ ಚಿಟ್ ನೀಡಿದ್ದಾರೆ' ಎಂದು ಹೇಳಿದ್ದಾರೆ. ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಹೆಸರಿನಲ್ಲಿ ವಂಚನೆ ಮಾಡಿದ ಪ್ರಕರಣದಲ್ಲಿ ದೂರುದಾರ ಮಹಿಳೆಯ ಗಂಡನ ಮೇಲೆ ಕೇಸ್ ಇದೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಕರೆತರಲಾಗಿತ್ತು. ಸಿಸಿಟಿವಿ ಫೂಟೇಜ್ ನಮ್ಮ ಬಳಿ ಇದೆ. ನಾವು ಯಾವುದೇ ಕಿರುಕುಳ ನೀಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಮೂಡುಬಿದಿರಿ ಇನ್ಸ್‌ಪೆಕ್ಟರ್ ಸಂದೇಶ್‌ ಕಾಮಕಾಂಡ: 8 ವರ್ಷ ತಾಯಿಯೊಂದಿಗೆ ಸಂಬಂಧ, ಈಗ ಮಗಳ ಮೇಲೂ ಕಣ್ಣು? ಆಡಿಯೋ ವೈರಲ್

ಇನ್ನು ಕಾಂಪೌಂಡ್ ಹಾರಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 'ಅದು ನನ್ನ ಪರಿಚಯಸ್ಥರ ಮನೆ. ಅಲ್ಲಿ ಗಂಡ-ಹೆಂಡತಿ ಜಗಳವಾಗಿ ಹೆಂಡತಿ ಫೋನ್ ತೆಗೆಯುತ್ತಿರಲಿಲ್ಲ. ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಆತಂಕದಿಂದ ನಾನು ಕಾಂಪೌಂಡ್ ಹಾರಿ ಹೋಗಿದ್ದೆ. ಕ್ರಿಶ್ಚಿಯನ್ ಸಮುದಾಯದಲ್ಲಿ ಡ್ಯಾನ್ಸ್ ಮಾಡುವುದು ಸಾಮಾನ್ಯ, ನಾವೆಲ್ಲಾ ಆತ್ಮೀಯರಾಗಿದ್ದೇವೆ' ಎಂದು ವಿಚಿತ್ರ ಸಮರ್ಥನೆ ನೀಡಿದ್ದಾರೆ.

ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ:

ರಕ್ಷಣೆ ನೀಡಬೇಕಾದ ಇನ್ಸ್‌ಪೆಕ್ಟರ್ ಮೇಲೆ ಇಂತಹ ಲೈಂಗಿಕ ಕಿರುಕುಳದ ಆರೋಪ ಬಂದಿರುವುದು ಇಡೀ ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ. ದೂರುದಾರರು ಈಗಾಗಲೇ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more