ಗ್ರಾಮ ಒನ್‌ಗಳಿಗೆ ಇನ್ನಷ್ಟು ಆರ್ಥಿಕ, ತಾಂತ್ರಿಕ ಶಕ್ತಿ: ಸಿಎಂ ಬೊಮ್ಮಾಯಿ

Published : Feb 23, 2023, 01:56 PM IST
ಗ್ರಾಮ ಒನ್‌ಗಳಿಗೆ ಇನ್ನಷ್ಟು ಆರ್ಥಿಕ, ತಾಂತ್ರಿಕ ಶಕ್ತಿ: ಸಿಎಂ ಬೊಮ್ಮಾಯಿ

ಸಾರಾಂಶ

ರಾಜ್ಯ ಸರ್ಕಾರದ ‘ಗ್ರಾಮ ಒನ್‌’ ಅತ್ಯಂತ ಕ್ರಾಂತಿಕಾರಿ ಹಾಗೂ ನನ್ನ ಕನಸಿನ ಯೋಜನೆಯಾಗಿದ್ದು ರಾಜ್ಯದ ಜನರ ವಿಶ್ವಾಸಗಳಿಸಿದೆ. ಸರ್ಕಾರದ ನೂರಾರು ಸೇವೆಗಳು ಈ ಯೋಜನೆ ಮೂಲಕ ಮನೆ ಮನೆಗೆ ತಲುಪುತ್ತಿದ್ದು ಬರುವ ದಿನಗಳಲ್ಲಿ ಇದನ್ನು ಆರ್ಥಿಕವಾಗಿ ಮತ್ತು ತಾಂತ್ರಿಕವಾಗಿ ಇನ್ನಷ್ಟುಬಲಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರು (ಫೆ.23): ರಾಜ್ಯ ಸರ್ಕಾರದ ‘ಗ್ರಾಮ ಒನ್‌’ ಅತ್ಯಂತ ಕ್ರಾಂತಿಕಾರಿ ಹಾಗೂ ನನ್ನ ಕನಸಿನ ಯೋಜನೆಯಾಗಿದ್ದು ರಾಜ್ಯದ ಜನರ ವಿಶ್ವಾಸಗಳಿಸಿದೆ. ಸರ್ಕಾರದ ನೂರಾರು ಸೇವೆಗಳು ಈ ಯೋಜನೆ ಮೂಲಕ ಮನೆ ಮನೆಗೆ ತಲುಪುತ್ತಿದ್ದು ಬರುವ ದಿನಗಳಲ್ಲಿ ಇದನ್ನು ಆರ್ಥಿಕವಾಗಿ ಮತ್ತು ತಾಂತ್ರಿಕವಾಗಿ ಇನ್ನಷ್ಟು ಬಲಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ ಮಹತ್ವಾಕಾಂಕ್ಷಿ ‘ಗ್ರಾಮ ಒನ್‌’ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಂತ್ರಜ್ಞಾನ ಮತ್ತು ಸೇವಾ ಮನೋಭಾವ ಜೊತೆಗೂಡಿದರೆ, ದೇಶದಲ್ಲಿ ಸರ್ಕಾರದ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಿಗೂ ತಲುಪಿಸಲು ಸಾಧ್ಯ ಎನ್ನುವುದನ್ನು ‘ಗ್ರಾಮ ಒನ್‌’ ಕಾರ್ಯಕ್ರಮದ ಯಶಸ್ಸು ನಿರೂಪಿಸಿದೆ. ಇದೊಂದು ಕ್ರಾಂತಿಕಾರಿ ಯೋಜನೆ. ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಅನಿವಾರ್ಯವಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಒನ್‌ಗಳಲ್ಲಿ ಇನ್ನಷ್ಟುಸೇವೆಗಳು, ಅಂತರ್ಜಾಲಕ್ಕೆ ವೇಗ ಮತ್ತು ಮೆಮೋರಿ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ತನ್ಮೂಲಕ ಆರ್ಥಿಕ ಮತ್ತು ತಂತ್ರಜ್ಞಾನದ ಮೂಲಕ ಯೋಜನೆಯನ್ನು ಇನ್ನಷ್ಟುಉತ್ತಮಗೊಳಿಸಲಾಗುವುದು ಎಂದರು.

ರಾಜಕೀಯ ಪಕ್ಷಗಳಿಗೆ ದೇಶದ ನಿಜವಾದ ಬಡತನದ ಬಗ್ಗೆ ಅರಿವಿಲ್ಲ: ಎಚ್.ಡಿ.ಕುಮಾರಸ್ವಾಮಿ

ಮನೆ ಮನೆಗೆ ಸೇವೆ ತಲುಪಿಸುವ ಉದ್ದೇಶದಿಂದ ತಂತ್ರಜ್ಞಾನ ಬಳಕೆಯೊಂದಿಗೆ ಗ್ರಾಮ ಒನ್‌ ಯೋಜನೆ ಜಾರಿಯಾಗಿದೆ. ಜಾತಿ ಆದಾಯ ಪ್ರಮಾಣ ಪತ್ರದಿಂದ ಹಿಡಿದು ಸರ್ಕಾರದಿಂದ ಸಿಗಬೇಕಾದ ಅನೇಕ ಪ್ರಮಾಣ ಪತ್ರ, ಸೇವೆಗಳನ್ನು ಪ್ರತಿ ಗ್ರಾಮ ಪಂಚಾಯ್ತಿಯಲ್ಲೂ ಗ್ರಾಮ ಒನ್‌ ಸೇವೆ ಆರಂಭಿಸಿ ಮನೆ ಮನೆಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುತ್ತಿದೆ. ಈ ಸೇವೆ ಸೇವೆಯಾಗಿಯೇ ಉಳಿಯಬೇಕು. ಈ ಯೋಜನೆ ಮೂಲಕ ಸರ್ಕಾರದ ಅಧಿಕಾರವನ್ನು ಗ್ರಾಮಮಟ್ಟಕ್ಕೆ ನೀಡಲಾಗಿದೆ. ಸೇವಾ ಮನೋಭಾವ ಹೆಚ್ಚಾದಂತೆ ಜನರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯವಿದೆ. ಇದು ಜೀವನೋಪಾಯ ಹಾಗೂ ಜ್ಞಾನಾರ್ಜನೆಗೂ ಕೂಡ ಸಹಕಾರಿ. 

ಸೇವೆಗಳ ಮೂಲಕ ನಿಮ್ಮನ್ನು ಸಬಲರಾಗಿಸಲಾಗಿದೆ. ಕಾನೂನಿನ ವ್ಯಾಪ್ತಿಯಲ್ಲಿಯೇ ಕೆಲಸ ಮಾಡಬೇಕು ಎಂದು ಯೋಜನೆಯ ಭಾಗೀದಾರರಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಗ್ರಾಮ ಒನ್‌ ಕೇಂದ್ರದಿಂದ ಬಂದ ಅರ್ಜಿಗಳು ವಿಲೇವಾರಿ ಆಗಲು ವಿಳಂಬವಾದರೆ ತಹಸಿಲ್ದಾರ್‌ ಕಚೇರಿಗೂ ಇದಕ್ಕೂ ವ್ಯತ್ಯಾಸ ಇರುವುದಿಲ್ಲ. ಪ್ರಾಮಾಣಿಕತೆಯಿಂದ, ದಕ್ಷತೆಯಿಂದ, ವೇಗವಾಗಿ ಕೆಲಸಮಾಡಬೇಕು. ಗ್ರಾಮ ಒನ್‌ ನಿಂದ ಉತ್ತಮ ಕೆಲಸಗಳಾಗುತ್ತಿದೆ. ಇದರಿಂದ ಜನರಲ್ಲಿ ವಿಶ್ವಾಸ ಮೂಡಿದೆ. ಒಂದು ವರ್ಷದಲ್ಲಿ ಒಂದೂವರೆ ಕೋಟಿಗೂ ಮೀರಿದ ಸೇವೆಗಳನ್ನು ನೀಡಲಾಗಿದ್ದು, ಮುಂದಿನ ವರ್ಷದಲ್ಲಿ ಮೂರು ಕೋಟಿಗೆ ಮುಟ್ಟುವ ಗುರಿ ಹಾಕಿಕೊಳ್ಳಬೇಕು ಎಂದು ಕರೆ ನೀಡಿದರು.

ಗ್ರಾಮ ಒನ್‌ ಕಾರ್ಯಕರ್ತರಿಗೆ ಜಿಲ್ಲಾವಾರು ಪ್ರಶಸ್ತಿಗೆ ತೀರ್ಮಾನ: ಗ್ರಾಮ ಒನ್‌ ಕಾರ್ಯಕರ್ತರಿಗೆ ಜಿಲ್ಲಾವಾರು ಪ್ರಶಸ್ತಿಗಳನ್ನು ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅಸಾಧ್ಯ ಎನ್ನುತ್ತಿದ್ದ ಕೆಲಸಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಸೇವೆಗಳನ್ನು ಜನರಿಗೆ ತಲುಪಿಸುತ್ತಿರುವುದಕ್ಕಾಗಿ ಎಲ್ಲ ಗ್ರಾಮ ಒನ್‌ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಉತ್ತಮ ಕಾರ್ಯಕ್ಷಮತೆ ತೋರುವ ಗ್ರಾಮ ಒನ್‌ ಕಾರ್ಯಕರ್ತರಿಗೂ ಮುಂದಿನ ದಿನಗಳಲ್ಲಿ ಜಿಲ್ಲಾವಾರು ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ರೈತರ ಖಾತೆಗೆ ನೇರವಾಗಿ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ

ಕಾರ್ಯಕರ್ತರು ತಮ್ಮ ಅನುಭವಗಳನ್ನು ದಾಖಲಿಸಲಬೇಕು. ನಿತ್ಯ ಶೇ.10 ರಷ್ಟು ಹೆಚ್ಚು ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಮ್ಮ ರಾಜ್ಯದ ಮಾದರಿಯಲ್ಲಿ ಗ್ರಾಮ ಒನ್‌ ಇತರೆ ರಾಜ್ಯಗಳಲ್ಲಿಯೂ ಪ್ರಾರಂಭವಾಗುತ್ತಿರುವುದನ್ನು ಕಾಣಬಹುದು. ಘರ್ಷಣೆಗಳಿಲ್ಲದಂತೆ ಕೆಲಸ ಮಾಡುವಂತಾಗಬೇಕು. ಆರು ತಾಲ್ಲೂಕುಗಳನ್ನು ಸಂಪೂರ್ಣವಾಗಿ ಕಾಗದ ರಹಿತ ಕಚೇರಿಗಳನ್ನಾಗಿ ಮಾಡಲು ಪ್ರಾಯೋಗಿಕ ಕ್ರಮ ಕೈಗೊಂಡಿದ್ದು, ನಾಡಕಚೇರಿಗಳನ್ನೂ ಕಾಗದ ರಹಿತ ಕಚೇರಿಗಳನ್ನಾಗಿಸಲಾಗುವುದು. ಸವರ್ರ ಸಾಮರ್ಥ್ಯವನ್ನು ಹೆಚ್ಚಿಸಲು ಅನುಮತಿ ನೀಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತ ಸುಧಾರಣೆಯಾದರೆ ಎಲ್ಲರೂ ಯಶಸ್ವಿಯಾಗುತ್ತೇವೆ. ಅಧಿಕಾರದ ವಿಕೇಂದ್ರೀಕರಣದೊಂದಿಗೆ ಸೇವೆಗಳ ವಿಕೇಂದ್ರೀಕರಣವೂ ಆಗಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್