ಶುಭಸುದ್ದಿ: ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಂಭವ!

Published : Mar 18, 2024, 09:44 AM IST
ಶುಭಸುದ್ದಿ: ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಂಭವ!

ಸಾರಾಂಶ

ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು (ಮಾ.18): ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು  ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು , ಹಾಸನ, ಕೊಡಗು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ. ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ.

ಹಲವೆಡೆ ಮಳೆ ಸಂಭವ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ತಾಪ ಹೆಚ್ಚಾಗಿ ರಾಜ್ಯದಲ್ಲಿ ಜನ-ಜಾನುವಾರುಗಳು ತತ್ತರಿಸಿ ಹೋಗುತ್ತಿವೆ. ಕುಡಿಯುವ ನೀರಿಗೆ ಹಾಹಾಕಾರ ಕಾಣಿಸಿಕೊಂಡಿರುವ ಸಂದರ್ಭದಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಒಡಿಶಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಮುಂದಿನ 24 ಗಂಟೆಯಲ್ಲಿ ಬೀದರ್‌, ಧಾರವಾಡ, ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಲಿದೆ. 

ಮಾ.20 ರಿಂದ 24 ವರೆಗೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಲ್ಲಿಯೂ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮೇ ಅಂತ್ಯದ ವೇಳೆಗೆ ಎಲ್‌ನಿನೋ ಪ್ರಭಾವ ಕಡಿಮೆಯಾಗಲಿದ್ದು, ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಪ್ರಸಾದ್‌ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ಒಬಿಸಿ ವೋಟ್‌ಬ್ಯಾಂಕ್ ಮಾಡಿಕೊಳ್ಳುವ ಕಾಂಗ್ರೆಸ್‌ ಹುನ್ನಾರ ಫಲಿಸುವುದಿಲ್ಲ: ಮಾಜಿ ಸಿಎಂ ಬೊಮ್ಮಾಯಿ

2-3 ಡಿಗ್ರಿ ಗರಿಷ್ಠ ಉಷ್ಣಾಂಶ ಹೆಚ್ಚಳ: ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಲಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಪ್ಪಳದಲ್ಲಿ ಅತಿ ಹೆಚ್ಚು 39.5 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 19 ಡಿಗ್ರಿ ಸೆಲ್ಶಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ