ಹಾಸ್ಟೆಲ್‌ ಊಟ ಸೇವಿಸಿ 30+ ಬಾಲಕಿಯರು ಅಸ್ವಸ್ಥ: ಸಾರ್ವಜನಿಕ ಆಸ್ಪತ್ರೆಗೆ ದಾಖಲು

By Kannadaprabha NewsFirst Published Apr 28, 2024, 7:23 AM IST
Highlights

ನಗರದ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಪದವಿ ವಸತಿ ನಿಲಯದ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ವಾಂತಿ-ಬೇಧಿಯಿಂದ ಅಸ್ವಸ್ಥರಾದ ಘಟನೆ ಶನಿವಾರ ನಡೆದಿದೆ. 
 

ಸಿಂಧನೂರು (ಏ.28): ನಗರದ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಪದವಿ ವಸತಿ ನಿಲಯದ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ವಾಂತಿ-ಬೇಧಿಯಿಂದ ಅಸ್ವಸ್ಥರಾದ ಘಟನೆ ಶನಿವಾರ ನಡೆದಿದೆ. ವಿದ್ಯಾರ್ಥಿನಿಯರನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಅನ್ನ, ಸಾಂಬಾರು, ರೊಟ್ಟಿ, ಹುರುಳಿ ಕಾಳು ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ಸಂಜೆ ಏಕಾಏಕಿ ವಾಂತಿ, ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಷಯ ತಿಳಿದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಹೇಶ ಪೋತೆದಾರ್ ಆಸ್ಪತ್ರೆಗೆ ಆಗಮಿಸಿ ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ ಅವರಿಗೆ ವಿಷಯ ತಿಳಿಸಿದರು. ಈ ವೇಳೆ ಡಾ.ಕಾಟ್ವಾ ಅವರು ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ನಡೆಸಿ, ತಮ್ಮ ಸಿಬ್ಬಂದಿಯೊಂದಿಗೆ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿ,

ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕಾಂಗ್ರೆಸ್‌’ ಚಿಂತನೆ: ಪ್ರಧಾನಿ ಮೋದಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು ಶನಿವಾರ ಸಿಂಧನೂರಿನ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಪದವಿ ವಸತಿ ನಿಲಯ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.

click me!