ಮಧ್ಯಾಹ್ನದ ಬಿಸಿಯೂಟ ಸೇವಿಸಿ 45ಕ್ಕೂ ಅಧಿಕ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದ ಸಿದ್ದಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಬಳ್ಳಾರಿ (ನ.12): ಮಧ್ಯಾಹ್ನದ ಬಿಸಿಯೂಟ ಸೇವಿಸಿ 45ಕ್ಕೂ ಅಧಿಕ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದ ಸಿದ್ದಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಇಂದುಮಧ್ಯಾಹ್ನ ಬಿಸಿ ಊಟ ಸೇವಿಸಿದ್ದ ವಿದ್ಯಾರ್ಥಿಗಳು. ಬಳಿಕ ಮಕ್ಕಳಲ್ಲಿ ವಾಂತಿ ಭೇದಿಯಾಗಿದೆ. ಶಾಲೆಯ ಬಹುತೇಕ ವಿದ್ಯಾರ್ಥಿಗಳು ವಾಂತಿಭೇದಿಯಿಂದ ಅಸ್ವಸ್ಥಗೊಂಡರು. ಕೂಡಲೇ ಅಸ್ವಸ್ಥ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಡುಗೆ ಸಿಬ್ಬಂದಿ ನಿರ್ಲಕ್ಷದಿಂದ ಘಟನೆ ನಡೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ.
undefined
ವಯನಾಡು ಭೂಕುಸಿತದಲ್ಲಿ ಬಾಲಕ ಮೃತಪಟ್ಟು ನಾಲ್ಕು ತಿಂಗಳಾದ್ರೂ ಸಿಗದ ಪರಿಹಾರ!
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ತಹಸೀಲ್ದಾರ್, ತಾಲೂಕು ವೈದ್ಯಾಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಪ್ರಾಣಾಪಾಯದಿಂದ ಪಾರಾಗಿರುವ ವಿದ್ಯಾರ್ಥಿಗಳು. ಈ ವೇಳೆ ನಿರ್ಲಕ್ಷ್ಯ ವಹಸಿದ ಅಡುಗೆ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸುವಂತೆ ಪೋಷಕರ ಆಕ್ರೋಶ ವ್ಯಕ್ತಪಡಿಸಿದರು.