Shivamogga: ಹಾಸ್ಟೆಲ್‌ ಊಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಯಾವುದೇ ಪ್ರಾಣಾಪಾಯವಿಲ್ಲ

By Govindaraj S  |  First Published Jan 17, 2023, 1:59 AM IST

ಹಾಸ್ಟೆಲ್‌ನಲ್ಲಿ ಮಧ್ಯಾಹ್ನ ಊಟ ಸೇವಿಸಿದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ಸೋಮವಾರ ನಡೆದಿದೆ. ಶಿವಮೊಗ್ಗ ತಾಲೂ​ಕಿನ ಮೇಲಿನ ಹನಸವಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಸೋಮ​ವಾರ ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ದಾರೆ. 


ಶಿವಮೊಗ್ಗ (ಜ.17): ಹಾಸ್ಟೆಲ್‌ನಲ್ಲಿ ಮಧ್ಯಾಹ್ನ ಊಟ ಸೇವಿಸಿದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ಸೋಮವಾರ ನಡೆದಿದೆ. ಶಿವಮೊಗ್ಗ ತಾಲೂ​ಕಿನ ಮೇಲಿನ ಹನಸವಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಸೋಮ​ವಾರ ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ದಾರೆ. ಹೀಗೆ ಒಟ್ಟು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಬಳಿಕ ಹಲವು ವಿದ್ಯಾರ್ಥಿಗಳು ಪುನಃ ವಸತಿ ಶಾಲೆಗೆ ಹಿಂತಿರುಗಿದ್ದಾರೆ.

ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 5ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುತ್ತಿದ್ಧಾರೆ. ಸುಮಾರು 250ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿದ್ದಾರೆ. ಶಾಲೆಯ ಶಿಕ್ಷಕವೃಂದ ಮೆಗ್ಗಾನ್‌ನಲ್ಲಿ ಮೊಕ್ಕಾಂ ಹೂಡಿದ್ದು, ಮಕ್ಕಳ ತಪಾಸಣೆಯಲ್ಲಿ ನೆರವಾಗುತ್ತಿದ್ದಾರೆ.

Tap to resize

Latest Videos

ಸವದತ್ತಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಿಲ್ಲ: ಸತೀಶ್ ಜಾರಕಿಹೊಳಿ

ವೈದ್ಯರು ಹಾಗೂ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಸುಮಾರು 250ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಗಮನವಹಿಸಿದ್ದಾರೆ.

ಯಾವುದೇ ಪ್ರಾಣಾಪಾಯವಿಲ್ಲ ಎಲ್ಲರ ಆರೋಗ್ಯ ಸ್ಥಿರವಾಗಿದೆ: ಅಸ್ವಸ್ಥರಾದ ಮಕ್ಕಳನ್ನು ಹನಸವಾಡಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಸೋಮವಾರ ಮಧ್ಯಾಹ್ನದ ಊಟದ ನಂತರ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳು ಹೊಟ್ಟೆ ನೋವು ನಿಂದ ಬಳಲಿದ್ದು ಕೆಲವರು ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಈ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗಿದೆ.  ಯಾವುದೇ ಪ್ರಾಣಾಪಾಯವಿಲ್ಲ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಶಿವಮೊಗ್ಗ ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ವಿರೂಪಾಕ್ಷಪ್ಪ ತಿಳಿಸಿದ್ದಾರೆ. 

Kodagu: ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಪಂದ್ಯಾವಳಿ ಲಾಂಛನ ಬಿಡುಗಡೆ

ಈಗಾಗಲೇ 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 15ರಿಂದ 20 ವಿದ್ಯಾರ್ಥಿಗಳಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರಿಗೂ ಚಿಕಿತ್ಸೆ ನೀಡಲು ಆಂಬುಲೆನ್ಸ್ ಕಳಿಸಲಾಗಿದೆ. ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಟ್ಟು 500 ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಸುಮಾರು 60 ವಿದ್ಯಾರ್ಥಿಗಳಷ್ಟು ಈ ರೀತಿ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.ಯಾವುದೇ ಆತಂಕ ಪಡಬೇಕಾಗಿಲ್ಲ, ಬಹುತೇಕ ಎಲ್ಲ ಮಕ್ಕಳು ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ನೀಡಿ ಕಳಿಸುತ್ತೇವೆ ಎಂದು ಹೇಳಿದರು.

click me!