
ಚಿಕ್ಕಬಳ್ಳಾಪುರ(ಫೆ.13): ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ರಾಜ್ಯದಲ್ಲಿ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ರೈತರ ಆತ್ಮಹತ್ಯೆ ಕುರಿತು ಸುಳ್ಳು ಹೇಳಿಸಿದ್ದಾರೆ. ಭೀಕರ ಬರಗಾಲದ ಈ ಸಂದರ್ಭದಲ್ಲೂ ರೈತರಿಗೆ ಏಳು ಗಂಟೆ ವಿದ್ಯುತ್ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು. ತಾಲೂಕಿನ ದಿಟ್ಟೂರು ಗ್ರಾಮದಲ್ಲಿ ಸೋಮ ವಾರ ಬಿಜೆಪಿ ಗ್ರಾಮ ಪರಿಕ್ರಮ ಯಾತ್ರೆಯ ರಾಜ್ಯ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.
ದೇಶದಲ್ಲಿ ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿಯಿದ್ದರೆ ಅದು ಯಡಿಯೂರಪ್ಪನವರು ಮಾತ್ರ. ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದವರು ಅವರು. ಹಾಲಿಗೆ ಪ್ರೋತ್ಸಾಹಧನ ಮತ್ತು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿದ್ದು, ಬರದ ಸಂದರ್ಭದಲ್ಲಿ ಬಳು ತಾಸುವಿದ್ಯುತ್ ಕೊಟ್ಟದ್ದು ಬಿ.ಎಸ್. ಯಡಿಯೂರಪ್ಪನವರ ಸಾಧನೆ ಎಂದು ಅವರು ತಿಳಿಸಿದರು.
ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ ಚಕಾರ ಎತ್ತದ ಪ್ರಧಾನಿ ಮೋದಿ: ರಕ್ಷಾ ರಾಮಯ್ಯ ಆರೋಪ
ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಕಂಬ ಅಳವಡಿಸಿ ಸಂಪರ್ಕ ಕಲ್ಪಿಸಲು 25-30 ಸಾವಿರ ರು. ಕೊಟ್ಟರೆ ಸಾಕಾಗಿತ್ತು. ಆದರೆ ಈ ಸರ್ಕಾರದಲ್ಲಿ 2.50 ಯಿಂದ 3 ಲಕ್ಷ ರು. ಆಗುತ್ತಿದೆ. ಲಂಚ ಸೇರಿ 5 ಲಕ್ಷ ತಗಲುತ್ತದೆ.
ಇದು ಬಡವರ, ರೈತರ ಸರ್ಕಾರ ಅಲ್ಲ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿರೋದು ಶೇ.50 ಕಮಿಷನ್ ಪಡೆಯುವ ಸರ್ಕಾರ, ರೈತ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಮುಖಂಡ ಗಂಡಸಿ ಶಿವರಾಂ ಅವರೇ ಹೇಳಿದ್ದಾರೆ ಎಂದರು.
200 ಯುನಿಟ್ ಉಚಿತ ವಿದ್ಯುತ್ ಎಂದ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ನೀಡಿದ್ದರೆ ಇಂದು ಅನ್ನದಾತರ ಆತ್ಮಹತ್ಯೆ ನಡೆಯುತ್ತಿರಲಿಲ್ಲ. ಉಚಿತ ಬಸ್ ಎಂದು ಹೇಳಿ ಮಕ್ಕಳಿಗೆ ಬಸ್ ನೀಡಿಲ್ಲ, ಸ್ಟ್ರಾಂಪ್ ಡ್ಯೂಟಿ ದರ ಹೆಚ್ಚಿಸಲಾಗಿದೆ ಎಂದು ಅವರು ಕಿಡಿಕಾರಿದರು.
ಇಂಥ ದರಿದ್ರ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲು ಜನ ತೀರ್ಮಾನ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಚುನಾವಣೆ ಎದುರಿಸು ತ್ತಿದ್ದು, ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲಲಿದ್ದೇವೆ. ಈ ಮೂಲಕ ಪ್ರಧಾನಿ ಮೋದಿಯವರ ಕೈ ಬಲಪಡಿಸಲಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ