
ಜೂ.21ರಿಂದ ಜು.10ರ ವರೆಗೆ ಅವಕಾಶ
ಶೇ.50 ರಿಯಾಯ್ತಿಯಲ್ಲಿ ದಂಡ ಪಾವತಿ
ಬೆಂಗಳೂರು (ಜೂ.5): ರಾಜ್ಯ ವ್ಯಾಪ್ತಿ ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಿಗೆ ದಂಡ ಪಾವತಿಸಲು ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಜೂನ್ 21ರಿಂದ ಜುಲೈ 10ರ ವರೆಗೆ ದಂಡ ಪಾವತಿಗೆ ಅವಕಾಶ ನೀಡಲಾಗಿದ್ದು, 2026ರ ಮೇ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‌ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತು ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಡಿಸಲಾಗಿದೆ.
ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಬೆಂಗಳೂರು ನಗರ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ)ಗಳಲ್ಲಿ ತೆರಳಿ ದಂಡ ಪಾವತಿಸಬಹುದು. ಅಲ್ಲದೆ, ಆನ್‌ಲೈನ್ ಮೂಲಕ ಸಹ ಹಳೇ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಕರ್ನಾಟಕ ಒನ್, ಅಸ್ರಂ ಆ್ಯಪ್ ಹಾಗೂ ಕೆಎಸ್‌ಪಿಎಸ್ ಆ್ಯಪ್ ಮೂಲಕ ದಂಡ ಕಟ್ಟಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ