ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಮೊದಲು ಪ್ರಸ್ತಾಪಿಸಿದ್ದೇ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ

Kannadaprabha News, Ravi Janekal |   | Kannada Prabha
Published : Oct 10, 2025, 06:18 AM IST
Basavaraj Bommai

ಸಾರಾಂಶ

ಕುರುಬ ಸಮುದಾಯವನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಸ್ತಾಪ ಹಿಂದಿನಿಂದಲೂ ಇದ್ದು, ತಮ್ಮ ಸರ್ಕಾರದ ಅವಧಿಯಲ್ಲಿ ಕುಲಶಾಸ್ತ್ರೀಯ ಅಧ್ಯಯನ ವರದಿ ಬಂದಿತ್ತು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ ಎಂದರು.

ಬೆಂಗಳೂರು (ಅ.10): ಕುರುಬ ಸಮುದಾಯವನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸಲು ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರಕ್ಕೆ ಪ್ರಸ್ತಾಪ ಹೋಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಪರಿಶೀಲನೆ ಮಾಡಿ ಕಳೆದ 2023ರ ಜು.20ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿಸಿದರು.

ಕುಲ ಶಾಸ್ತ್ರೀಯ ಅಧ್ಯಯನ ಮಾಡಿಸುವಂತೆ ಕೇಂದ್ರದಿಂದ ರಾಜ್ಯಕ್ಕೆ ವಾಪಸ್ ಬಂದಿತ್ತು. ಅಂದಿನ ಜೆಡಿಎಸ್‌-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶ ಮಾಡಿತ್ತು. ನಮ್ಮ ಅವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತ್ತು. ಅದನ್ನು ನಮ್ಮ ಸರ್ಕಾರ ಒಪ್ಪಿತು. ಅಷ್ಟರಲ್ಲಿ ಚುನಾವಣೆ ಬಂದು ನಮ್ಮ ಸರ್ಕಾರದ ಅವಧಿ ಮುಗಿಯಿತು. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಪರಿಶೀಲನೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರ ದಾಖಲೆಗಳನ್ನು ತೆಗೆದು ನೋಡಲಿ ಎಂದು ವಿವರಿಸಿದರು.

ಇದನ್ನೂ ಓದಿ: ಕುರುಬರನ್ನು ಎಸ್ಟಿಗೆ ಸೇರಿಸಲು ಹೇಗೆ ಸಾಧ್ಯ?: ಮಾಜಿ ಸಂಸದ ಉಗ್ರಪ್ಪ ಆಕ್ರೋಶ

ಈಗ ವಿಷಯ ಸಿದ್ದರಾಮಯ್ಯ ಅವರ ಕೈಯಲ್ಲಿ ಇದೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬದನ್ನು ನೋಡಬೇಕು. ವಾಲ್ಮೀಕಿ ಸಮುದಾಯ ಮತ್ತು ಕುರುಬರ ನಡುವೆ ಏನೂ ಸಮಸ್ಯೆ ಆಗುವುದಿಲ್ಲ. ಅಹಿಂದ ನಾಯಕ ಸಿದ್ದರಾಮಯ್ಯ ಅವರೇ ಇದ್ದಾರೆ‌. ಮೀಸಲಾತಿ ಹೆಚ್ಚಳ ಮಾಡುವುದು ಅಷ್ಟು ಸುಲಭವಿಲ್ಲ ಎಂದರು.

ಇದೇ ವೇಳೆ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್