ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿಲ್ಲ, ಸಿದ್ದರಾಮಯ್ಯ ಹೇಳಿಕೆಗೆ ಬಿವೈ ರಾಘವೇಂದ್ರ ತಿರುಗೇಟು

By Ravi Janekal  |  First Published Sep 12, 2023, 4:09 PM IST

ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಇಲ್ಲ.ಬಿಜೆಪಿ ಯಾವಾಗಲೂ ಜೀವ ಉಳಿಸಿಕೊಳ್ಳುವ ಕೆಲಸ ಮಾಡುತ್ತದೆ ಎಂದು ಸಂಸದ ಬಿವೈ ರಾಘವೇಂದ್ರ ಸಿದ್ದರಾಮಯ್ಯರ ಹೆಣದ ಹೇಳಿಕೆಗೆ ತಿರುಗೇಟು ನೀಡಿದರು.


ಶಿವಮೊಗ್ಗ (ಸೆ.12) : ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಇಲ್ಲ.ಬಿಜೆಪಿ ಯಾವಾಗಲೂ ಜೀವ ಉಳಿಸಿಕೊಳ್ಳುವ ಕೆಲಸ ಮಾಡುತ್ತದೆ ಎಂದು ಸಂಸದ ಬಿವೈ ರಾಘವೇಂದ್ರ ಸಿದ್ದರಾಮಯ್ಯರ ಹೆಣದ ಹೇಳಿಕೆಗೆ ತಿರುಗೇಟು ನೀಡಿದರು.

ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇದೇ ವೇಳೆ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ನಾಯಕರಿಂದ ನಮಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಮೈತ್ರಿಯಾದರೆ ಅನುಕೂಲ ಆಗುತ್ತದೆ ಎಂದರು.

Tap to resize

Latest Videos

ಬರಗಾಲದಲ್ಲೂ ಕೂಡ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಜನಪರವಾಗಿದ್ದ ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದಾರೆ. ಈ ಬಾರಿ ಸರಾಸರಿ ಮಳೆಯೂ ಕಡಿಮೆಯಾಗಿದೆ.ಎಲ್ಲೆಡೆ ಬರಗಾಲ ಬಂದಿದೆ. ಆದರೂ ಸರ್ಕಾರ ಬರಗಾಲ ಘೋಷಣೆ ಮಾಡದೆ ವಿಳಂಬ ಮಾಡ್ತಿದ್ದಾರೆ. ರೈತರನ್ನು ನಿರ್ಲಕ್ಷಿಸಿರುವ ಸರ್ಕಾರ. ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸರ್ಕಾರದ ಸಚಿವರೇ ಹಗುರವಾಗಿ ಮಾತನಾಡ್ತಿದ್ದಾರೆ. ಇದು ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು.

'ಸೇರೋಣ ಬನ್ನಿ ಮಾತಾಡೋಣ' ದಾವಣಗೆರೆ ಎಎಪಿಯಿಂದ ಸಂವಾದ ಕಾರ್ಯಕ್ರಮ

ಈಗಾಗಲೇ ಬರಗಾಲ ಘೋಷಣೆ ಮಾಡಬೇಕಿತ್ತು. ಆದಷ್ಟು ಬೇಗ ಘೋಷಿಸಲಿ. ಜೊತೆಗೆ ಕಾವೇರಿ‌ ನೀರು ಹರಿಸುವುದನ್ನು ನಿಲ್ಲಿಸಬೇಕು. ಬರಗಾಲದಿಂದ ಬೆಳೆನಷ್ಟವಾಗಿರುವ ರೈತರಿಗೆ ಬೆಳೆ ವಿಮೆ ಕೊಡಬೇಕು. ರೈತರ ಆತ್ಮಹತ್ಯೆಯ ಬಗ್ಗೆ ವರದಿಯಾಗಿಲ್ಲ. ಆತ್ಮಹತ್ಯೆಯಾದ ರೈತರಿಗೆ ಪರಿಹಾರವೂ ಸಿಕ್ಕಿಲ್ಲ. ರೈತರ ಆತ್ಮಹತ್ಯೆ ವರದಿ ಪಡೆದು ಶೀಘ್ರವಾಗಿ ಪರಿಹಾರ ಕೊಡಲಿ. ಒಂದು ವೇಳೆ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಆಗಿದ್ದರೆ ಪರಿಶೀಲನೆ ನಡೆಸಲಿ. ಆತ್ಮಹತ್ಯೆ ಪರಿಹಾರ ವಿಷಯದಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ‌ರೈತರ ವಿಚಾರದಲ್ಲಿ ಚೆಲ್ಲಾಟ ಮಾಡಬಾರದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಸರ್ಕಾರ ಇದೆ ಅಂತಾ ಅನಿಸುತ್ತಿಲ್ಲ. ರಾಜ್ಯಾದ್ಯಂತ ಬರಗಾಲವಿದ್ದು ರೈತರು ಸಂಕಷ್ಟದಲ್ಲಿರುವಾಗ ಸರ್ಕಾರ ಸಚಿವರಿಗೆ ಹೊಸ ಕಾರು ಖರೀದಿಸಲು ಮುಂದಾಗಿದೆ. ಗ್ಯಾರಂಟಿ ಯೋಜನೆಗೆ ಬೇರೆ ಬೇರೆ ಕಲ್ಯಾಣ ಕಾರ್ಯಕ್ರಮಕ್ಕೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ತಿದೆ ಎಂದು ದೂರಿದರು.

ಸಿದ್ದರಾಮಯ್ಯ ಮೊದಲಸಲ ಗೂಟದ ಕಾರು ಹತ್ತಿದ್ದು ಬಿಜೆಪಿ ಬೆಂಬಲದಿಂದ: ಈಶ್ವರಪ್ಪ ತಿರುಗೇಟು

ರಾಜ್ಯದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಲೋಕಸಭಾ ಸ್ಥಾನದಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

click me!