
ನವದೆಹಲಿ (ಜೂ.10): ಗೃಹ ಸಚಿವ ಪ್ರಿಯಾಂಕ ಖರ್ಗೆ(Home minister Priyank kharge)ಯವರು ತಮ್ಮ ಇತಿಮಿತಿಗಳಲ್ಲಿ ಕೆಲಸ ಮಾಡಬೇಕು. ಆರ್‌ಎಸ್‌ಎಸ್(RSS)ಅನ್ನು ಟೀಕಿಸುವ ಬದಲು ಡ್ರಗ್ಸ್, ಭಯೋತ್ಪಾದನೆ ನಿರ್ಮೂಲನೆ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಲಿ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಆರ್‌ಎಸ್‌ಎಸ್, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವುದು ನನ್ನ ಭಾವನೆ. ಆರ್‌ಎಸ್‌ಎಸ್ ಕರ್ನಾಟಕ, ಭಾರತದಲ್ಲಿ ಮಾತ್ರ ಇಲ್ಲ. ಜಗತ್ತಿನ ಐವತ್ತು ದೇಶಗಳಲ್ಲಿ ಅದರ ಶಾಖೆಗಳಿವೆ ಎಂದರು.
ಇನ್ನು, ಆರ್‌ಎಸ್‌ಎಸ್ ನೋಂದಣಿ ಬಗ್ಗೆ ಸಂಘದ ಹಿರಿಯರು ಮಾತನಾಡಿದ್ದಾರೆ. ಅದಕ್ಕೆ ನಾವು ಉತ್ತರ ಕೊಡುವ ಅಗತ್ಯ ಇಲ್ಲ, ಸಂಘವೇ ಅದಕ್ಕೆ ಉತ್ತರ ನೀಡುತ್ತದೆ. ಈ ಹಿಂದೆ ಸಂಘವನ್ನು ನೆಹರು ಅವರು ಬ್ಯಾನ್ ಮಾಡಿದ್ದರು. ಆ ಬಳಿಕ ಗಣರಾಜೋತ್ಸವದ ಪರೇಡ್ ನಲ್ಲಿ ಭಾಗಿಯಾಗಲು ಮನವಿ ಮಾಡಿದರು. ಇಂದಿರಾ ಗಾಂಧಿಯವರು ಬ್ಯಾನ್ ಮಾಡಲು ಪ್ರಯತ್ನ ಪಟ್ಟರು, ಸಾಧ್ಯವಾಗಲಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರು ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ ಎನ್ನುತ್ತಾರೆ. ಆದರೆ, ಆರ್‌ಎಸ್‌ಎಸ್ ಬಗ್ಗೆ ಅಪಪ್ರಚಾರ ಮಾಡುವ ವ್ಯಕ್ತಿಯನ್ನು ಗೃಹ ಮಂತ್ರಿ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಕಿರುಕುಳ ಕೊಡುವ ಬಗ್ಗೆ ಸಿಎಂ ಗಮನಿಸಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ