
ವಿಜಯಪುರ (ಅ.22): ದೇಶ ಸೇವೆಯನ್ನೇ ಉಸಿರಾಗಿಸಿಕೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಬೇಜವಾಬ್ದಾರಿತನದ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ದೊಡ್ಡ ಪಾಪ ಮಾಡಿದ್ದು, ಸ್ವಪಕ್ಷದಲ್ಲಿಯೇ ಒಂಟಿಯಾಗುವಂತಾಗಿದ್ದಾರೆ. ಇನ್ನಾದರೂ ಪಾಪಕ್ಕೆ ಪ್ರಾಯಶ್ಚಿತ್ತಪಟ್ಟು ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸಂಘ ಪರಿವಾರದ ಕಾರ್ಯದಕ್ಷತೆ, ಸೇವಾ ಮನೋಭಾವವನ್ನು ಶ್ಲಾಘಿಸಿದ್ದನ್ನು ಪ್ರಿಯಾಂಕ್ ಖರ್ಗೆ ಮರೆತಂತೆ ಕಾಣುತ್ತಿದೆ. ಸಂಘ ಪರಿವಾರಕ್ಕೆ ಅಗೌರವ ತೋರುವ ಪ್ರಿಯಾಂಕ್‌ಗೆ ಪಕ್ಷದಲ್ಲಿಯೇ ಬೆಂಬಲ ಇಲ್ಲ.
ಅವರ ಹೇಳಿಕೆಯನ್ನೂ ಯಾರೂ ಸಮರ್ಥಿಸಿಕೊಂಡಿಲ್ಲ. ಮುಗ್ದ ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಮೊದಲು ಸಂಘ ಪರಿವಾರದ ಬಗ್ಗೆ ಅಗೌರವ ತೋರಿದ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲಿ ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ