ಆಪರೇಷನ್ ಹಸ್ತ ಬೆನ್ನಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ ಎಂಪಿ ರೇಣುಕಾಚಾರ್ಯ!

By Ravi Janekal  |  First Published Aug 25, 2023, 7:52 PM IST

ಕಾಂಗ್ರೆಸ್ ಸರ್ಕಾರದ ಆಪರೇಷನ್ ಹಸ್ತ ಬೆನ್ನಲ್ಲೇ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರನ್ನು ಭೇಟಿ ಮಾಡಿದ್ದಾರೆ.


ಬೆಂಗಳೂರು (ಆ.25) : ಕಾಂಗ್ರೆಸ್ ಸರ್ಕಾರದ ಆಪರೇಷನ್ ಹಸ್ತ ಬೆನ್ನಲ್ಲೇ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿರುವ ಎಂಪಿ ರೇಣುಕಾಚಾರ್ಯ ಬಳಿಕ ಡಿಕೆ ಶಿವಕುಮಾರ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Tap to resize

Latest Videos

ಸಿಎಂ ಡಿಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಪಿ ರೇಣುಕಾಚಾರ್ಯ ಇದರಲ್ಲಿ ರಾಜಕೀಯವಿಲ್ಲ. ಮಳೆ ಕೊರತೆಯಿಂದ ನನ್ನ ಕ್ಷೇತ್ರ ರೈತರು ಸಂಕಷ್ಟಕ್ಕೀಡಾಗಿದ್ದು, ಬರಪೀಡಿತ ತಾಲೂಕು ಘೋಷಿಸುವಂತೆ ಮನವಿ ಮಾಡಿದ್ದೇನೆ. ಕ್ಷೇತ್ರದಲ್ಲಿ ಬೇರೆ ಶಾಸಕರು ಇರಬಹುದು ಆದರೆ ನಾನು ಹಿಂದೆ ಮೂರು ಬಾರಿ ಶಾಸಕನಾಗಿದ್ದ ಕ್ಷೇತ್ರ. ಮಳೆಯ ಕೊರತೆಯಿಂದ ನನ್ನ ಕ್ಷೇತ್ರದ ರೈತರು ಸಂಕಷ್ಟದಲ್ಲಿದ್ದಾರೆ ಹೀಗಾಗಿ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿ ಬರಪೀಡಿತ ತಾಲೂಕಿಗೆ ಸೇರಿಸುವಂತೆ ಮನವಿ ಮಾಡಿದ್ದೇನೆ ಎಂದರು. ಇದೇ ವೇಳೆ ಲೋಕಸಭೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದ್ದೇನೆ ಎಂದರು.

ನೌಕರರ ಬೇಡಿಕೆಗಳಿಗೆ ಐಎಎಸ್‌ ಅಧಿಕಾರಿಗಳು ಅಡ್ಡಗಾಲು ಹಾಕ್ತಾರೆ: ರೇಣುಕಾಚಾರ್ಯ

click me!