
ಚಿಕ್ಕಬಳ್ಳಾಪುರ (ಅ.22): ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಸಂಸದ ಡಾ.ಕೆ.ಸುಧಾಕರ್ ದೀಪಾವಳಿ ಆಚರಿಸಿದರು.
ಪ್ರತಿ ವರ್ಷವೂ ಸಂಸದ ಡಾ.ಕೆ.ಸುಧಾಕರ್ ಅವರು ಅನಾಥ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುತ್ತಾರೆ. ಕೋವಿಡ್ ಸಮಯದಲ್ಲಿ ತಂದೆ, ತಾಯಿ ಹಾಗೂ ಕುಟುಂಬವನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಂಸದರು ಹಲವು ರೀತಿಯಲ್ಲಿ ನೆರವು ನೀಡಿದ್ದಾರೆ. ಅವರಿಗೆ ಇನ್ನಷ್ಟು ಪ್ರೋತ್ಸಾಹ, ಬೆಂಬಲ ನೀಡುವುದರ ಸೂಚಕವಾಗಿ ಪ್ರತಿ ವರ್ಷ ದೀಪಾವಳಿ ಹಬ್ಬವನ್ನು ಮಕ್ಕಳೊಂದಿಗೆ ಆಚರಣೆ ಮಾಡುತ್ತಿದ್ದಾರೆ.
ಈ ಬಾರಿಯ ಹಬ್ಬದಂದು ಚಿಕ್ಕಬಳ್ಳಾಪುರದ ತಮ್ಮ ನಿವಾಸದಲ್ಲಿ ಮಕ್ಕಳೊಂದಿಗೆ ಭೋಜನ ಮಾಡಿದ ಸಂಸದ ಡಾ.ಕೆ.ಸುಧಾಕರ್, ಅವರ ಯೋಗಕ್ಷೇಮ, ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸಿದರು.
ಈ ವೇಳೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ದೀಪಾವಳಿ ಹಬ್ಬ ಎಂದರೆ ಇಡೀ ಕುಟುಂಬಕ್ಕೆ ಸಡಗರ ಹಾಗೂ ಸಂಭ್ರಮ. ಕೋವಿಡ್ ಸಮಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಆಗ ಸಚಿವನಾಗಿದ್ದ ನಾನು, ಆ ಮಕ್ಕಳನ್ನು ದತ್ತು ಪಡೆದು, ಅವರ ಹೆಸರಿನಲ್ಲಿ ಠೇವಣಿ ಇಟ್ಟು, ಸಂಪೂರ್ಣ ಶೈಕ್ಷಣಿಕ ನೆರವು ನೀಡುತ್ತಿದ್ದೇನೆ ಎಂದರು.
ಈ ಮಕ್ಕಳಲ್ಲಿ ಎಲ್ಲ ಧರ್ಮ, ಜಾತಿಯವರಿದ್ದಾರೆ. ಪ್ರತಿ ವರ್ಷ ಇವರೊಂದಿಗೆ ದೀಪಾವಳಿ ಹಬ್ಬದ ಪೂಜೆ ಮಾಡಿ, ಭೋಜನ ಮಾಡುತ್ತೇನೆ. ಇದನ್ನು ಭಗವಂತನ ಸೇವೆಯಂತೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ