ನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡೊಲ್ಲ: ಸಂಸದೆ ಸುಮಲತಾ ಅಂಬರೀಶ್

By Ravi Janekal  |  First Published Nov 3, 2023, 12:26 PM IST

ನಾನು ಮಂಡ್ಯ ಸೊಸೆ,ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ  ಸ್ವಾಭಿಮಾನ, ಸಿದ್ದಾಂತ ಬಿಡಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.


ಮಂಡ್ಯ (ನ.3): ನಾನು ಮಂಡ್ಯ ಸೊಸೆ,ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ  ಸ್ವಾಭಿಮಾನ, ಸಿದ್ದಾಂತ ಬಿಡಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ, ಬೆಳೆಸಿದ್ದಾರೆ. ಹೀಗಾಗಿ ನಾನು ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದರು. ಇದೇ ವೇಳೆ ಜೆಡಿಎಸ್ ಬಿಜೆಪಿ ಮೈತ್ರಿ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ  ಪ್ರತಿಕ್ರಿಯಿಸಿದ ಅವರು, ಜೆಡಿಎಸ್‌ ಬಿಜೆಪಿ ಮೈತ್ರಿ ಆಗಿದೆ ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈಗ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ಕೊಡಲ್ಲ. ಈ ವಿಚಾರದಲ್ಲಿ ನಾನು ದುಡುಕಿನ ನಿರ್ಧಾರ ಮಾಡಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ಕಾನ್ಫಿಡೆನ್ಸ್ ಇದೆ. ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನು ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ. ಬೆಂಗಳೂರು ಉತ್ತರ ಆಫರ್  ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ. ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಬೇರೆ ಕ್ಷೇತ್ರದ ಆಫರ್ ಎಂದಿಗೂ ಒಪ್ಪಲ್ಲ. ಇದನ್ನ ನೂರಾರು ಬಾರಿ ಹೇಳಿದ್ದೇನೆ. ಇನ್ನು ರಕ್ತದಲ್ಲಿ ಬರೆದು ಕೊಡಬೇಕಾ? ಮಂಡ್ಯ ಜಿಲ್ಲೆ ರಾಜಕಾರಣ ಯಾವಾಗಲೂ ಚಾಲೆಂಜಿಂಗ್.ಚಾಲೆಂಜ್‌ಗೆ ಹೆದರುವ ಸ್ವಭಾವ ನನ್ನದ್ದಲ್ಲ ಎಂದು ಖಡಕ್ ನುಡಿದರು.

Tap to resize

Latest Videos

ಜೆಡಿಎಸ್ ವಿರುದ್ಧವೇ ಹೋರಾಡಿದ್ದ ಸುಮಲತಾ ಈಗ ಅವರಿಗೆ ಸಪೋರ್ಟ್..?

ಇನ್ನು ಸಿಎಂ ಬದಲಾವಣೆ ಚರ್ಚೆ ವಿಚಾರ ಅದು  ಅವರವರ ಪಕ್ಷದ ಆಂತರಿಕ ವಿಚಾರ. ಆ ಬಗ್ಗೆ ನಾನು ಕಮೆಂಟ್ ಮಾಡಲ್ಲ. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಹಾಗೂ ನೀರಿನ ಸಮಸ್ಯೆ ಇದೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಫ್ರೀ ಗ್ಯಾರಂಟಿ ಕೊಟ್ಟರೆ ಅಭಿವೃದ್ಧಿ ಕೆಲಸ ಆಗಲ್ಲ ಎಂದು ಮೊದಲೇ ಹೇಳಿದ್ವಿ. ಈಗ ಅದೇ ಆಗ್ತಿದೆ. ಚುನಾವಣೆ ಗೆಲ್ಲುವ ಉದ್ದೇಶದಿಂದ ಬರೀ ಫ್ರೀ ಫ್ರೀ ಎಂದು ಕೊಟ್ಟರೆ ತೊಂದರೆ ಆಗುತ್ತದೆ. ಅಭಿವೃದ್ಧಿ ಕೆಲಸಗಳಿಗೆ ದುಡ್ಡು ಎಲ್ಲಿಂದ ತರ್ತೀರಾ? ಫಂಡ್ಸ್ ಹುಟ್ಸೋಕೆ ಆಗಲ್ಲ, ಇರೋದರಲ್ಲೇ ಅಭಿವೃದ್ಧಿ ಮಾಡಬೇಕು. ನೀವು ಫೀ ಕೊಡ್ತಿರುವ ಯೋಜನೆಗಳಿಂದ ಜನರಿಗೆ ತೊಂದರೆ ಆಗುತ್ತದೆ. ಈಗ ಜನರಿಗೂ ಇದು ಗೊತ್ತಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕೂಡ ಗ್ಯಾರಂಟಿ‌ಗಳ ಚಾಲೆಂಜ್ ಫೇಸ್ ಮಾಡ್ತಿದೆ. ಕಾಂಗ್ರೆಸ್ ಉಚಿತ ಗ್ಯಾರೆಂಟಿಗಳಿಂದ ಅಭಿವೃದ್ಧಿ ಕಾರ್ಯಗಳಲ್ಲಿ ತೊಂದರೆ ಆಗಿರುವುದಂತೆ ನಿಜ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಿಡಿಕಾರಿದರು.

ಮಂಡ್ಯ ಸ್ಪರ್ಧೆ ಸದ್ಯಕ್ಕೆ ಸಸ್ಪೆನ್ಸ್‌, ಥ್ರಿಲ್ಲರ್: ಸಂಸದೆ ಸುಮಲತಾ

click me!