
ಬೆಂಗಳೂರು (ಏ.29): ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಎಲ್ಲಾ ವೈದ್ಯರು ಅವರನ್ನ ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಇವತ್ತು ಪ್ರಯತ್ನ ಕೈಗೂಡದೆ ನಮ್ಮನ್ನು ಅಗಲಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಹೇಳಿದ್ದಾರೆ. ಇವತ್ತು ಮೈಸೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುತ್ತೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಇರಿಸಲಾಗುತ್ತೆ. ಮನೆಗೆ ಕರೆದೊಯ್ದು ವಿಧಿವಿಧಾನಗಳನ್ನು ಪೂರೈಸಿ ನಂತರ ಅಂತಿಮ ದರ್ಶನಕ್ಕೆ ಇಡಲಾಗುತ್ತೆ. ನಮ್ಮ ತಂದೆ ಮಧ್ಯೆರಾತ್ರಿ 1:20 ಕೊನೆಯುಸಿರೆಳೆದಿದ್ದಾರೆ.
ಕಳೆದ ಸೋಮವಾರ ಆರೋಗ್ಯ ಏರುಪೇರಾಗಿತ್ತು. ಹಾಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ವಿ, ಆರೋಗ್ಯ ಸುಧಾರಿಸಿದ್ದರಿಂದ ಡಿಸ್ಚಾರ್ಜ್ ಮಾಡಿಸಿದ್ವಿ, ಮತ್ತೆ ಆರೋಗ್ಯದಲ್ಲಿ ಏರು ಪೇರಾಗಿದ್ದರಿಂದ ಕರೆದುಕೊಂಡು ಬಂದಿದ್ದೇವು. ಈಗ ಮೃತ ದೇಹ ಮೈಸೂರಿಗೆ ತೆಗೆದುಕೊಂಡು ಹೋಗುತ್ತೇವೆ.ಇಡೀ ದಿನ ಅಂತಿಮ ದರ್ಶನ ಮನೆಯಲ್ಲೆ ಇರುವುದಿಲ್ಲ. ಒಂದು ಸಾರ್ವತ್ರಿಕ ಜಾಗ ನಿರ್ಧಾರ ಮಾಡಿ ಅಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತೆ. ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ರು. ಆದ್ರೆ ತಮ್ಮ ಜರ್ನಿಯಿಂದಲೇ ನಿವೃತ್ತಿ ತೆಗೆದುಕೊಳ್ಳುತ್ತಾರೆ ಅಂದುಕೊಂಡಿರಲಿಲ್ಲ. ಇದು ಬಹಳ ದುಃಖಕರವಾದ ವಿಷಯ, ಇದು ಕರ್ನಾಟಕ ಜನತೆಗೆ ಬಿಗ್ ಲಾಸ್ ಎಂದರು.
Breaking: ದಕ್ಷಿಣ ಕರ್ನಾಟಕದ ದಲಿತ ಸೂರ್ಯ, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ
ಹೈಲಿ ಡಯಾಬಿಟಿಕ್ ಸಮಸ್ಯೆ ಇತ್ತು ಅವರಿಗೆ ಹನ್ನೊಂದು ವರ್ಷದ ಹಿಂದೆ ಅವರಿಗೆ ರಿನಲ್ ಟ್ರಾನ್ಸ್ ಪ್ಲಾಂಟ್ ಆಗಿತ್ತು, ಅದನ್ನೂ ಫೈಟ್ ಮಾಡಿ ಅವರು ಎಂದು ಪ್ರಯತ್ನ ಬಿಟ್ಟುಕೊಟ್ಟಿರಲಿಲ್ಲ. ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಕಾರ್ಡಿಯಾಕ್ ಅರೆಸ್ಟ್ ಆಗಿ 1.20 ಕ್ಕೆ ಮೃತ ಪಟ್ಟಿದ್ದಾರೆ . ಡಾ.ಸುದರ್ಶನ್ ಬಲ್ಲಾಳ್ ಮತ್ತು ಅವರ ಟೀಮ್ ತುಂಬಾ ಪ್ರಯತ್ನ ಮಾಡಿದ್ರು ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದ ಹೇಳ್ತಿನಿ. ಯಾವಾಗ್ಲೂ ಮಣಿಪಾಲ್ ಆಸ್ಪತ್ರೆಯಲ್ಲೆ ಚಿಕಿತ್ಸೆ ತಗೊಳ್ತಾ ಇದ್ರು. ಅವರ ಕೊನೆಯುಸಿರು ಕೂಡ ಅಲ್ಲೇ ಹೋಗಿದೆ.ಯಾವಗ್ಲೂ ತಂದೆಯವರು ನಮ್ಮನ್ನ ನಗನಗ್ತಾ ಬೀಳ್ಕೊಡಿ ಅಂತಾ ಕೇಳ್ತಾ ಇದ್ರು. ನಾನು ಅದನ್ನ ನಿಭಾಯ್ಸಿದಿನಿ. ಜನರಲ್ಲೂ ಕೂಡ ಅದನ್ನೇ ಮನವಿ ಮಾಡ್ತಿನಿ ಯಾವುದೇ ತೊಂದರೆ ಮಾಡದೇ ಕಳಿಸಿಕೊಡಿ ಅವರನ್ನ ಎಂದು ಕೇಳಿಕೊಂಡರು.
ಇದು ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ: ಲೋಕಸಭಾ ಸದಸ್ಯರು ಧೀಮಂತ ನಾಯಕರು ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿದ್ದಾರೆ. ಸುಮಾರು 1:20 ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಜಿ ಶಾಸಕ ಮತ್ತು ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಹೇಳಿದರು. ಮಣಿಪಾಲ್ ಆಸ್ಪತ್ರೆಯ ಎಲ್ಲ ಡಾಕ್ಟರ್ ತುಂಬಾ ಪ್ರಯತ್ನ ಪಟ್ಟಿದ್ದಾರೆ, ಆದ್ರೆ ಭಗವಂತ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು,. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ.
ನೇರವಾಗಿ ಮೈಸೂರಿಗೆ ತೆಗೆದುಕೊಂಡು ಹೋಗುತ್ತೇವೆ. ನಂತರ ಯಾವುದಾದರೂ ಗ್ರೌಂಡ್ ನಲ್ಲಿ ವ್ಯವಸ್ಥೆ ಮಾಡಲಾಗುತ್ತೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದ್ರು. ನಂಗೆ ಮತ್ತೆ ಅವರಿಗೆ ತಂದೆ ಮಗನ ರೀತಿಯ ಸಂಬಂಧ ಇತ್ತು. ಎಲ್ಲವನ್ನು ಅವರೊಂದಿಗೆ ಚರ್ಚೆ ಮಾಡಿ ತೀರ್ಮಾನಕ್ಕೆ ಬರ್ತಾ ಇದ್ದೆ.ಇವಾಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿಬಿಟ್ಟಿದೆ ಎಂದರು.
ಸಿಇಟಿ ಪರೀಕ್ಷೆ: 50 ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ
ಇನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಸ್ವಲ್ಪ ಚೇತರಿಕೆ ಕಂಡಿದ್ದರು. ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದ ಸಂಸದ ಶ್ರೀನಿವಾಸ್ ಪ್ರಸಾದ್, ಬಳಿಕ ನಿನ್ನೆಯಿಂದ ಮಾತನಾಡಲು ಆಗುತ್ತಿರಲಿಲ್ಲ. ಈ ವೇಳೆ ಕುಟುಂಬಸ್ಥರು ಪೆನ್ನು ಪೇಪರ್ ಕೊಟ್ಟಿದ್ದರು. ಆಗ ಪೇಪರ್ ನಲ್ಲಿ coffee ಅಂತ ಬರೆದಿದ್ದರು. ಬಳಿಕ ಎರಡು ಗುಟುಕು ಕಾಫಿಯನ್ನು ಶ್ರೀನಿವಾಸ್ ಪ್ರಸಾದ್ ಕುಟುಂಬಸ್ಥರು ಬಾಯಿಗೆ ಬಿಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ