ಕೇಂದ್ರ ಸರ್ಕಾರದ ಜಾತಿ ಗಣತಿ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದೇನು?

Published : May 02, 2025, 02:05 PM ISTUpdated : May 02, 2025, 03:14 PM IST
ಕೇಂದ್ರ ಸರ್ಕಾರದ ಜಾತಿ ಗಣತಿ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದೇನು?

ಸಾರಾಂಶ

ಸ್ವಾತಂತ್ರ್ಯಾನಂತರ ಮೊದಲ ಬಾರಿಗೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಕ್ರಮವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಅವರು ಗುರುವಾರ ಈ ಕುರಿತು ಹೇಳಿಕೆ ನೀಡಿ,

ಶಿರಸಿ: ಸ್ವಾತಂತ್ರ್ಯಾನಂತರ ಮೊದಲ ಬಾರಿಗೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಕ್ರಮವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಅವರು ಗುರುವಾರ ಈ ಕುರಿತು ಹೇಳಿಕೆ ನೀಡಿ,

೧೯೩೧ ರ ನಂತರ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಜನಗಣತಿಯ ಭಾಗವಾಗಿ ಜಾತಿ ಗಣತಿ ನಡೆಯುತ್ತಿರುವುದು ಒಂದು ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ದಿಟ್ಟ ಹೆಜ್ಜೆ ಮೂಡಿಬಂದಿರುವುದು ಅಭಿನಂದನಾರ್ಹ ಎಂದರು.

ಜಾತಿಗಣತಿ ಕೇವಲ ಅಂಕಿ-ಅಂಶಗಳನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲ. ಇದು ದೇಶದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ವಾಸ್ತವತೆಯನ್ನು ಅರಿಯಲು ಇರುವ ಪ್ರಮುಖ ಸಾಧನವಾಗಲಿದೆ. ಯಾವ ಸಮುದಾಯಗಳು ಅಭಿವೃದ್ಧಿಯ ಮುಖ್ಯವಾಹಿನಿಯಿಂದ ಹಿಂದೆ ಉಳಿದಿವೆ. ಯಾವ ಪ್ರದೇಶಗಳಲ್ಲಿ ಹೆಚ್ಚಿನ ಗಮನ ನೀಡಬೇಕಾಗಿದೆ ಎಂಬುದನ್ನು ಗುರುತಿಸಲು ಈ ದತ್ತಾಂಶವು ಅತ್ಯಂತ ಸಹಕಾರಿಯಾಗಲಿದೆ. 

ಭವಿಷ್ಯದ ಯೋಜನೆಗಳನ್ನು ರೂಪಿಸಲು ಈ ಗಣತಿಯು ಒಂದು ಬಲವಾದ ಅಡಿಪಾಯವನ್ನು ಒದಗಿಸಲಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದಂತೆ ಸೂಕ್ತವಾದ ನೀತಿಗಳನ್ನು ರೂಪಿಸಲು ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ದತ್ತಾಂಶವು ನಿರ್ಣಾಯಕ ಪಾತ್ರ ವಹಿಸುತ್ತದೆ. ಸಮಗ್ರ ಮತ್ತು ನ್ಯಾಯಯುತ ಸಮಾಜವನ್ನು ನಿರ್ಮಿಸುವಲ್ಲಿ ಈ ಮಾಹಿತಿಯು ಮಹತ್ವದ ಕೊಡುಗೆ ನೀಡಲಿದೆ.

ಇದನ್ನೂ ಓದಿ: RSS ಹುಟ್ಟಿ 100 ವರ್ಷ ಆಯ್ತು, ಯಾವತ್ತಾದ್ರೂ ಸಂವಿಧಾನದ ಪರ ಮಾತಾಡಿದೆಯಾ? ಸಿದ್ದರಾಮಯ್ಯ ವಾಗ್ದಾಳಿ!

ಈ ಬಾರಿ ಜನಗಣತಿ ಮತ್ತು ಜಾತಿ ಗಣತಿಯ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದು ಒಂದು ಪ್ರಮುಖ ಬದಲಾವಣೆಯಾಗಿದೆ. ಇದರಿಂದ ದತ್ತಾಂಶ ಸಂಗ್ರಹಣೆ ಮತ್ತು ವಿಶ್ಲೇಷಣೆಯ ಪ್ರಕ್ರಿಯೆಯು ಹೆಚ್ಚು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾಗಿರುತ್ತದೆ. ಪ್ರತಿ ಪ್ರಜೆಯೂ ತಮ್ಮ ಮಾಹಿತಿಯನ್ನು ವೈಯಕ್ತಿಕವಾಗಿ ಸಲ್ಲಿಸುವ ಅವಕಾಶವನ್ನು ಹೊಂದಿರುವುದು ಈ ಪ್ರಕ್ರಿಯೆಯ ವಿಶ್ವಾಸಾರ್ಹತೆ ಹೆಚ್ಚಿಸುತ್ತದೆ. 

ಈ ಜಾತಿ ಗಣತಿಯು ಕೇವಲ ಒಂದು ಸಂಖ್ಯೆಯ ಆಟವಲ್ಲ, ಬದಲಾಗಿ ಇದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡಿರುವ ಒಂದು ಮಹತ್ವದ ಹೆಜ್ಜೆಯಾಗಿದೆ. ಈ ಐತಿಹಾಸಿಕ ನಿರ್ಧಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಅಭಿನಂದಿಸುತ್ತೇನೆ. ಈ ಕ್ರಮವು ಭಾರತದ ಭವಿಷ್ಯದ ಅಭಿವೃದ್ಧಿಗೆ ಹೊಸ ದಿಕ್ಸೂಚಿಯನ್ನು ನೀಡಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ಸೈಬರ್ ವಂಚನೆ ತಡೆಗೆ ಎಐ ಅಸ್ತ್ರ ಪ್ರಯೋಗ
ಸೇವೆಯಲ್ಲಿಯೇ ಸಾರ್ಥಕತೆ ಪಡೆಯುವ ಗೃಹ ರಕ್ಷಕರು