ಬೆಂಗಳೂರು (ಆ.16): ದೆಹಲಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮನ ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಯಣ್ಣನ ಹೆಸರು ನಾಮಕರಣ ಸೇರಿದಂತೆ ಈ ಇಬ್ಬರೂ ಮಹನೀಯರಿಗೆ ಸಂಬಂಧಪಟ್ಟ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬಿಬಿಎಂಪಿ ಭಾನುವಾರ ಕೆ.ಎಸ್.ಆರ್. ರೈಲ್ವೆ ನಿಲ್ದಾಣದ ಸಮೀಪ ದೇವರಾಜ ಅರಸು ವೃತ್ತದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 224ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
undefined
ರಾಜಕೀಯ ವೈಷಮ್ಯ ಮರೆತು ಸಿದ್ದರಾಮಯ್ಯ -ಎಂಟಿಬಿ ನಾಗರಾಜ್ ಭೇಟಿ
ಬೆಳ್ಳಿ ಗದೆ : ಸಮಾರಂಭದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ. ನಾಗರಾಜ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳ್ಳಿ ಗದೆ ನೀಡಿ ಗೌರವಿಸಿದರು. ಜಿಲ್ಲಾ ಕೇಂದ್ರ ಹಾಗೂ ಬೆಂಗಳೂರಿನಲ್ಲಿ ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಮತ್ತು ಹುತಾತ್ಮ ದಿನ ಆಚರಣೆಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದಕ್ಕೆ ಎಂ.ಟಿ.ಬಿ. ನಾಗರಾಜ ಅವರು ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ವೇಳೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.