Muda case: ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಇದೇ ಮೊದಲು -ಸಿಎಂ

By Kannadaprabha News  |  First Published Sep 28, 2024, 7:40 AM IST

‘ಮುಡಾ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ, ರಾಜೀನಾಮೆ ಕೊಡಲ್ಲ. ಕಾನೂನು ಹೋರಾಟ ಮಾಡ್ತೀನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ


ಮೈಸೂರು (ಸೆ.28) : ‘ಮುಡಾ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ, ರಾಜೀನಾಮೆ ಕೊಡಲ್ಲ. ಕಾನೂನು ಹೋರಾಟ ಮಾಡ್ತೀನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನನಗಿರುವ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು ಎಂದು ಪ್ರತಿಪಾದಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂವಿಧಾನದ ಮುಖ್ಯಸ್ಥರಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

Tap to resize

Latest Videos

ರಾಷ್ಟ್ರಪತಿಗಳಾಗಲಿ, ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದೇ ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ, ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ಆದ್ರೂ ಸಮಾಧಾನವಾಗದ ಸ್ನೇಹಮಯಿ ಕೃಷ್ಣ: ಸಿಬಿಐಗೆ ವಹಿಸಲು ಅರ್ಜಿ ಸಲ್ಲಿಕೆ!

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯವರು ಮಾಡುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಯೇ? ಎಂದು ಮರುಪ್ರಶ್ನಿಸಿದರು. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.


ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದಿಂದ ಸಂವಿಧಾನದ ಸಂಘರ್ಷ ಉಂಟಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ ಎಂದರು.ಪ್ರಧಾನಿ ಮೋದಿ ಅವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗುಜರಾತ್‌ನಲ್ಲಿ ಈ ಹಿಂದೆ ಗೋಧ್ರಾ ಘಟನೆಗೆ ಸಂಬಂಧಪಟ್ಟಂತೆ ಮೋದಿಯವರು ರಾಜೀನಾಮೆ ನೀಡಿದ್ದಾರೆಯೇ?. ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ‘ಆಪರೇಷನ್ ಕಮಲ’ ಮಾಡಿ, ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಲಿದೆ ಎಂದರು.

ಮುಡಾ ಹಗರಣ ಎಫ್ಐಆರ್: ಸಿದ್ದರಾಮಯ್ಯ ಎ1, ಪಾರ್ವತಿ ಎ2 ಮತ್ತು ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಎ3

ರಾಜ್ಯದಲ್ಲಿ ಲೋಕಾಯುಕ್ತ ಮರಳಿರುವ ಕುರಿತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿ, ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಬಿಜೆಪಿ ಅಧಿಕಾರವಿರುವ ಅನೇಕ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯಲ್ಲಿ ತಪ್ಪು ಮಾಡದಿರುವ, ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ. ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದರು.ಅನಿಶ್ಚಿತ ರಾಜಕೀಯ ಬೆಳವಣಿಗೆಯಿಂದ ಗ್ಯಾರಂಟಿಗಳು ನಿಲ್ಲಬಹುದೆಂಬ ಆತಂಕ ಜನರಲ್ಲಿ ಮನೆಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿಯವರು ಎಂದಿಗೂ ಜನಾದೇಶ ಪಡೆಯದೆ, ಕೇವಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

click me!