ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ವಿಚಾರವಾಗಿ, ಸಿಎಂ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿಯವರು ಎಷ್ಟು ಜನರು ಬೇಲ್ (ಜಾಮೀನು) ಮೇಲೆ ಓಡಾಡುತ್ತಿದ್ದಾರೆ, ಪಾದಯಾತ್ರೆ ಮಾಡಿದ್ದ ಬಿಜೆಪಿಯವರು ನಿಯತ್ತಾಗಿ ಇದ್ದಾರಾ ಎಂದು ಪ್ರಶ್ನಿಸಿದರು.
ಯಾದಗಿರಿ (ಸೆ.26): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ವಿಚಾರವಾಗಿ, ಸಿಎಂ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿಯವರು ಎಷ್ಟು ಜನರು ಬೇಲ್ (ಜಾಮೀನು) ಮೇಲೆ ಓಡಾಡುತ್ತಿದ್ದಾರೆ, ಪಾದಯಾತ್ರೆ ಮಾಡಿದ್ದ ಬಿಜೆಪಿಯವರು ನಿಯತ್ತಾಗಿ ಇದ್ದಾರಾ ಎಂದು ಪ್ರಶ್ನಿಸಿ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಯಾದಗಿರಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡಬೇಕು ಎಂಬ ಕಾನೂನು ಇದೆಯೇ? ಆರೋಪಿ ಸ್ಥಾನದಲ್ಲಿರುವ ವಿಜಯೇಂದ್ರ ಮತ ಕೇಳಲಿಲ್ಲವೇ? ಎಚ್.ಡಿ. ಕುಮಾರಸ್ವಾಮಿ ಬೇಲ್ ಮೇಲೆ ಓಡಾಡುತ್ತಿದ್ದಾರೆ, ವಿಜಯೇಂದ್ರ ಅವರ ಅಪ್ಪನನ್ನು (ಬಿಎಸ್ವೈ) ಜೈಲಿಗೆ ಹಾಕಿದ್ದು ಮರೆತು ಬಿಟ್ಟರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಕಿಡಿ ಕಾರಿದರು.
Muda case: ಬಿಜೆಪಿ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ - ಹರೀಶ್ ಪೂಂಜಾ ಭಾಷಣ
ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರಗೆ ಬರುತ್ತಾರೆ, ನಮ್ಮ ಲೆಕ್ಕ ಕೇಳಬೇಕಾದರೆ ಅವರ ತಟ್ಟೆಯಲ್ಲಿ ಸತ್ತು ಬಿದ್ದ ಹೆಗ್ಗಣ ನಾರುತ್ತಿರುವುದನ್ನು ನೋಡಿಕೊಳ್ಳಲಿ ಎಂದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ಪ್ರಜಾಪ್ರಭುತ್ವದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗುವ ಅವಕಾಶವಿದೆ. ಗ್ಯಾರಂಟಿ ಫಲಾನುಭವಿಗಳು ಸಿದ್ದರಾಮಯ್ಯ ಜೊತೆ ಗ್ಯಾರಂಟಿಯಾಗಿ ಇದ್ದಾರೆ ಎಂದು ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮುಡಾ ಹಗರಣ: ನಿಮಗೆ ಕಿಂಚಿತ್ ಮಾನ-ಮರ್ಯಾದೆ ಇದ್ರೆ ರಾಜೀನಾಮೆ ಕೊಡಿ - ಸಿಎಂ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಕಿಡಿ
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡಲು ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ ಸಚಿವ ಮಧು ಬಂಗಾರಪ್ಪ, ಬಿಜೆಪಿಯವರು ಸರ್ಕಾರ ಬಿಳಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಪ್ರಯತ್ನ ಯಶಸ್ಸು ಆಗಲ್ಲ, ಅವರ ಪ್ರಯತ್ನ ಸಫಲವಾಗುವುದಿಲ್ಲ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು, ರಾಜೀನಾಮೆ ಕೊಡುವ ಅಗತ್ಯವಿಲ್ಲ, ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರಗಡೆ ಬರುತ್ತಾರೆಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.