ಮುಡಾ ಹಗರಣ ವಿರುದ್ಧ ಹೋರಾಟ ನಡೆಸುತ್ತಿರೋದಕ್ಕೆ ನನ್ನ ಮೇಲೆ ವಾಮಾಚಾರ ನಡೆದಿದೆ: ಸ್ನೇಹಮಯಿ ಕೃಷ್ಣ

Published : Feb 02, 2025, 09:11 AM ISTUpdated : Feb 02, 2025, 09:20 AM IST
ಮುಡಾ ಹಗರಣ ವಿರುದ್ಧ ಹೋರಾಟ ನಡೆಸುತ್ತಿರೋದಕ್ಕೆ ನನ್ನ ಮೇಲೆ ವಾಮಾಚಾರ ನಡೆದಿದೆ: ಸ್ನೇಹಮಯಿ ಕೃಷ್ಣ

ಸಾರಾಂಶ

ಮುಡಾ ಹಗರಣದ ಆರೋಪಿಗಳ ವಿರುದ್ಧ ಹೋರಾಟ ಮಾಡುತ್ತಿರುವುದರಿಂದ ತಮ್ಮ ಮೇಲೆ ಮಂಗಳೂರಿನಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಅವರ ಪತ್ನಿ ಹಗರಣದಲ್ಲಿ ಭಾಗಿಯಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಚನ್ನರಾಯಪಟ್ಟಣ (ಫೆ.2): ಮುಡಾ ಹಗರಣದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ನಾನು ಹೋರಾಟ ಮಾಡುತ್ತಿರುವುದರಿಂದ ನನ್ನ ವಿರುದ್ಧ ಮಂಗಳೂರಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮುಖ್ಯಮಂತ್ರಿ ವಿರುದ್ಧ ಮುಡಾ ಹಗರಣದಲ್ಲಿ ಹೋರಾಟ ಮಾಡುತ್ತಿದ್ದೇನೆ. ನನಗೆ ಭೀತಿಯಿಲ್ಲ, ನನ್ನ ಹೋರಾಟವನ್ನು ಹತ್ತಿಕ್ಕಲು ಆಗುವುದಿಲ್ಲ. ಮುಖ್ಯಮಂತ್ರಿ ಹಾಗೂ ಅವರ ಪತ್ನಿ ಈ ಹಗರಣದಲ್ಲಿ ಪಾತ್ರವಹಿಸಿದ್ದಾರೆ, ಅವರಿಗೆ ಶಿಕ್ಷೆ ಆಗಲೇಬೇಕು ಎಂದರು.

ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ, ಗಂಗರಾಜುಗೆ ಶಕ್ತಿ ತುಂಬಲು ಪ್ರಾಣಿರಕ್ತ ಬಲಿ!

2004-05ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಪ್ರಸಾದ್ ಅತ್ತಾವರ ಅವರಿಂದ ಅನುಕೂಲ ಪಡೆದಿದ್ದಾರೆ. ಈಗ ನಾನು ಹಗರಣವನ್ನು ಬಹಿರಂಗಪಡಿಸುತ್ತಿದ್ದರಿಂದ ನನ್ನ ವಿರುದ್ಧ ದುರುದ್ದೇಶದಿಂದ ವಾಮಾಚಾರ ಮಾಡಲಾಗಿದೆ ಎಂದು ಆರೋಪಿಸಿದರು.

ಹಗರಣ ಮುಚ್ಚಿ ಹಾಕಲು ಕೆಲವು ಆಮಿಷ ಒಡ್ಡುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ನಾನು ಜಗ್ಗುವುದಿಲ್ಲ ನನ್ನ ಬಳಿ ಎಲ್ಲಾ ದಾಖಲೆಗಳಿವೆ. ಮುಡಾ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೂಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟ್‌ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಇನ್ನಷ್ಟು ಶಕ್ತಿ ತುಂಬಲು ಪ್ರಾಣಿ ರಕ್ತ ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ಸ್ನೇಹಮಯಿ ಕೃಷ್ಣ ಇದೊಂದು ನನ್ನ ವಿರುದ್ಧದ ಸಂಚು, ನನ್ನ ವಶೀಕರಣಕ್ಕೆ ಹೀಗೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಪ್ರಕರಣ ಬಯಲಾಗಿದ್ದು ಹೇಗೆ?

ಮಂಗಳೂರಿನಲ್ಲಿ ಜ.23ರಂದು ನಡೆದ ಮಸಾಜ್ ಪಾರ್ಲರ್‌ ದಾಳಿಯಲ್ಲಿ ಪ್ರಸಾದ್‌ ಅತ್ತಾವರ ಮತ್ತು ಇತರೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಪ್ರಸಾದ್‌ ಅತ್ತಾವರ ಬಳಿ ಇದ್ದ ಎರಡು ಮೊಬೈಲ್‌ ಫೋನ್‌ಗಳ ಮೆಸೇಜ್‌ಗಳನ್ನು ಪರಿಶೀಲಿಸಿದಾಗ ವಾಮಾಚಾರ ನಡೆಸಿರುವುದು ಪೊಲೀಸರಿಗೆ ಗೊತ್ತಾಗಿದೆ.

ಪಾರ್ಲರ್‌ ದಾಳಿ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಸಾದ್‌ ಅತ್ತಾವರನ ಮೊಬೈಲ್‌ನಲ್ಲಿ ಸೆನ್‌ ಠಾಣೆಯಲ್ಲಿ ರಿಟ್ರೀಟ್‌ಗೆ ಒಳಪಡಿಸಿದ್ದರು. ಆಗ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಪರವಾಗಿ ಅತಿಮಾನುಷ ಶಕ್ತಿಯನ್ನು ಆಹ್ವಾನಿಸಿ ಅವರಿಗೆ ಮತ್ತಷ್ಟು ಶಕ್ತಿ ನೀಡಲು ಪ್ರಯತ್ನಿಸಿರುವ ಅಂಶ ಪತ್ತೆಯಾಗಿತ್ತು.

ಪ್ರಸಾದ್‌ ಅತ್ತಾವರ ಮತ್ತು ಅನಂತ ಭಟ್‌ ಎಂಬವರ ನಡುವೆ ಹಲವು ವಿಚಾರಗಳ ಸಂವಹನ ನಡೆದಿದೆ. ಅಲ್ಲದೆ ವಾಮಾಚಾರದ ವಿಡಿಯೋಗಳು ಕೂಡ ಪರಸ್ಪರ ರವಾನೆಯಾಗಿದೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಅವರ ಫೋಟೋಗಳನ್ನು ಮುಂದಿರಿಸಿ ಐದು ಕುರಿಗಳನ್ನು ಬಲಿ ಕೊಡಲಾಗಿದೆ. ಇವರ ಫೋಟೋಗಳಿಗೆ ರಕ್ತತರ್ಪಣ ಮಾಡಿ ಮತ್ತಷ್ಟು ಶಕ್ತಿ ತುಂಬುವ ಪ್ರಯತ್ನ ಮಾಡಿರುವ ರೀತಿಯ ವಿಡಿಯೋಗಳು ಮೊಬೈಲ್‌ನಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಕಮಿಷನರ್‌ ಅನುಪಮ ಅಗರ್‌ವಾಲ್‌ ಸೂಚನೆ ಮೇರೆಗೆ ಬರ್ಕೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿಸಿಎಂ ಸಿದ್ದರಾಮಯ್ಯ ಬಳಿಕ, ಶಾಸಕ ಜಿ.ಟಿ. ದೇವೇಗೌಡ ಹೆಗಲೇರಿದ 19 ಮುಡಾ ಸೈಟು ಹಗರಣ

ಕುರಿ ಬಲಿ ಕೊಟ್ಟಿರುವುದು ಪತ್ತೆ:

ಒಂದು ವಾರದ ಹಿಂದೆ ಪ್ರಸಾದ್ ಅತ್ತಾವರನನ್ನು ಬಂಧಿಸಿ ಮೊಬೈಲ್‌ ಪರಿಶೀಲನೆ ನಡೆಸಿದಾಗ, ಆತ ದೇವಸ್ಥಾನವೊಂದರಲ್ಲಿ ಕುರಿಗಳನ್ನು ಬಲಿಕೊಡುವ ದೃಶ್ಯ ಪತ್ತೆಯಾಗಿದೆ. ಐದು ಕುರಿಗಳನ್ನು ಬಲಿ ಕೊಡುತ್ತಿರುವ ವಿಡಿಯೋ ಇದ್ದು, ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಬಲ ತುಂಬಲು ಈ ರೀತಿ ಮಾಡಿದ್ದರು. ಈ ಕುರಿತು ವಾಟ್ಸ್‌ಆ್ಯಪ್‌ ಚಾಟ್‌ನಲ್ಲೂ ಉಲ್ಲೇಖಿಸಿರುವುದು ಗೊತ್ತಾಗಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ ಅಗರ್‌ವಾಲ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಾಮಾಚಾರ ನಡೆಸಿದ್ದಕ್ಕೆ ಪ್ರತಿಯಾಗಿ ಅನಂತ ಭಟ್‌ ಅವರಿಗೆ ಹಣದ ಕಂತೆಯನ್ನು ರವಾನೆ ಮಾಡಿರುವ ರೀತಿ ಕವರ್‌ವೊಂದರ ವಿಡಿಯೋ ಹಾಕಲಾಗಿದೆ. ಹಣದ ಚೀಲವನ್ನು ಸುಮ ಆಚಾರ್ಯ, ಪ್ರಶಾಂತ ಬಂಗೇರ ಹಾಗೂ ಹರ್ಷ ಮೈಸೂರು ಅವರು ಅನಂತ ಭಟ್‌ಗೆ ತಲುಪಿಸಿರುವುದಕ್ಕೆ ಸಾಕ್ಷಿ ಎನ್ನುವಂತೆ ವಾಟ್ಸ್‌ಆ್ಯಪ್‌ ನಂಬರಿಗೆ ಫೋಟೋ ರವಾನೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌