
ಬೆಂಗಳೂರು (ಅ.8): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಲೋಕಾಯುಕ್ತ ‘ಬಿ’ ರಿಪೋರ್ಟ್ ಪ್ರಶ್ನಿಸಿ ಮತ್ತು ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ತೀರ್ಪು ಪ್ರಕಟಿಸಲಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಈ ಅರ್ಜಿ ಕುರಿತು ಸೆ.29ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಈ ಸಂಬಂಧ ಅ.8ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯ ಮುಡಾ ಪ್ರಕರಣ ವಿಚಾರಣೆ ಅಕ್ಟೋಬರ್ 8ಕ್ಕೆ ಮುಂದೂಡಿಕೆ, ದಿನೇಶ್ ಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಸಿದ್ದರಾಮಯ್ಯ ಕುಟುಂಬವು ಮುಡಾದಿಂದ ಅಕ್ರಮವಾಗಿ 14 ನಿವೇಶನ ಪಡೆದಿದೆ. ಆದರೆ, ಲೋಕಾಯುಕ್ತ ತನಿಖಾಧಿಕಾರಿ ಸರಿಯಾದ ತನಿಖೆ ನಡೆಸದೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಆರೋಪಿಗಳ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಈ ‘ಬಿ’ ರಿಪೋರ್ಟ್ ತಿರಸ್ಕರಿಸಬೇಕು. ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ದೂರುದಾರ ಸ್ನೇಹಮಯಿ ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ