ಮುಡಾ ಗಬ್ಬೆದ್ದು ಹೋಗಿದೆ. ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು (ಜು.11) ಮುಡಾ ಗಬ್ಬೆದ್ದು ಹೋಗಿದೆ. ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿಗೆ ಭೇಟಿ ನೀಡಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮುಡಾ ಹಗರಣ(MUDA scam) ಬಗ್ಗೆ ಇಬ್ಬರು ಐಪಿಎಸ್ ಅಧಿಕಾರಿಗಳ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಮೇಲೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಅಧಿಕಾರಾವಧಿಯಲ್ಲೂ ತಪ್ಪುಗಳಾಗಿವೆ, ಆದರೆ ಬಿಜೆಪಿ ಕಾಲದಲ್ಲೇ ಹೆಚ್ಚಾಗಿವೆ. ಅದನ್ನ ಸರಿಪಡಿಸುತ್ತೇನೆ. ನನ್ನ ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರ ಇಟ್ಟುಕೊಂಡು ಬೇರೆ ಅಕ್ರಮ ಮಾಡಲು ಸಾಧ್ಯವಿಲ್ಲ. ನಮ್ಮ ಅಕ್ರಮವೇ ಅಲ್ಲ. ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ ಎಂದರು.
undefined
ಇನ್ನು ತಮ್ಮ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿರುವ ಟಿಜೆ ಅಬ್ರಹಾಂ ಸಂಬಂಧ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗಕ್ಕೆ ಅವರು ದೂರು ನೀಡಲಿ, ದೂರು ಕೊಟ್ಟರೆ ನಮಗೇನು? ಚುನಾವಣಾ ಆಯೋಗ ನೋಟಿಸ್ ಕೊಡಲಿ ನಾನು ಆಯೋಗಕ್ಕೆ ಉತ್ತರ ಕೊಡುತ್ತೇನೆ ಎಂದರು.
ಮುಡಾ ಹಗರಣ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಅವರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ರಾಜಕೀಯ ಮಾಡುವುದಾದರೆ ನಾವೂ ರಾಜಕೀಯವಾಗಿಯೇ ಹೆದರಿಸುತ್ತೇವೆ, ನೋಡ್ತಾ ಇರಿ ರಾಜಕೀಯವಾಗಿಯೇ ಅವರಿಗೆ ಉತ್ತರ ಕೊಡುತ್ತೇವೆ ಎಂದರು.
'ರಾಮ'ನ ಹೆಸರು ಇರೊದಕ್ಕೇ ರಾಮನಗರ ಹೆಸರು ಬದಲಾವಣೆ? ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಇನ್ನು ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ ಎಂಬ ಜಿಟಿ ದೇವೇಗೌಡರ ಹೇಳಿಕೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಬ್ಯಾಂಕ್‌ನಲ್ಲೂ ಅವ್ಯವಹಾರ ಆಗಿದೆ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕಾಲ್ವಾ?, ಪ್ರಧಾನಿ ಮೋದಿ ಇದರ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕಲ್ವಾ? ಎಂದು ಪ್ರಶ್ನಿಸಿದರು.