ಮುಡಾ ಹಗರಣ ಗಂಭೀರ ಪ್ರಕರಣವಾಗಿದೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದರು.
ಕೊಡಗು (ಜು.6): ರಾಜ್ಯದಲ್ಲಿ ವಾಲ್ಮೀಕಿ ನಿಗಮ ಹಗರಣ, ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಮುಗಿಬಿದ್ದ ಬೆನ್ನಲ್ಲೇ ಇದೀಗ ಮತ್ತೊಂದು ಮುಡಾ ಹಗರಣ ರಾಜ್ಯ ಸರ್ಕಾರವನ್ನು ಹೈರಾಣು ಮಾಡಿದೆ. ಮುಡಾ ಹಗರಣ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು ಮುಡಾ ಹಗರಣ(MUDA scam) ವಿಚಾರವಾಗಿ ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೊಡಗು ಸಂಸದ ಯದುವೀರ್ ಒಡೆಯರ್(MP Yaduveer wadeyar) ಪ್ರತಿಕ್ರಿಯಿಸಿದ್ದು, ಇದೊಂದು(MUDA scam) ಗಂಭೀರ ಪ್ರಕರಣವಾಗಿದೆ. ಇದನ್ನ ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
undefined
ವಾಲ್ಮೀಕಿ ನಿಗಮ ಹಗರಣ: ಪ್ರಕರಣದಲ್ಲಿ ನಾಗೇಂದ್ರನ ಬಲಿಪಶು ಮಾಡಲಾಗಿದೆ: ಜನಾರ್ದನ ರೆಡ್ಡಿ ವಾಗ್ದಾಳಿ
ಈ ಪ್ರಕರಣದಲ್ಲಿ ಯಾವುದೇ ಪ್ರಭಾವಿಲ್ಲದಂತಹ ಸಂಸ್ಥೆಯಿಂದ ತನಿಖೆ ನಡೆಸುವ ಅಗತ್ಯವಿದೆ ಎಂದಿರುವ ಸಂಸದರು. ಈ ಪ್ರಕರಣವನ್ನು ನಮ್ಮ ಪಕ್ಷವು ಗಂಭೀರವಾಗಿ ಪರಿಗಣಿಸಿದೆ. ಹಗರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರಿಗೆ ನಮ್ಮ ಪಕ್ಷ ಹೋರಾಟ ಮುಂದುವರಿಸುತ್ತೆ. ಈ ಹಗರಣವನ್ನು ಸಿಬಿಐ(CBI)ಗೆ ವಹಿಸಬೇಕು ಎಂದು ನಾನೂ ಕೂಡ ಒತ್ತಾಯ ಮಾಡುತ್ತೇನೆ ಎಂದರು.