Organ Donation: ತಾಯಿಯ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ ಮಾಡಿದ ಪುತ್ರ

Kannadaprabha News   | Asianet News
Published : Jan 17, 2022, 01:25 AM IST
Organ Donation: ತಾಯಿಯ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ ಮಾಡಿದ ಪುತ್ರ

ಸಾರಾಂಶ

ಅನಾರೋಗ್ಯದಿಂದ ಮಿದುಳು ನಿಷ್ಕ್ರಿಯಗೊಂಡಿದ್ದ ತಾಯಿಯ ಅಂಗಾಂಗಗಳನ್ನು ದಾನ ಮಾಡಿದ ಪುತ್ರ ಐವರಿಗೆ ಹೊಸ ಜೀವನ ನೀಡಿ ಸಾರ್ಥಕತೆ ಮೆರೆದಿರುವ ಘಟನೆ ತಾಲೂಕಿನ ಕೋರೇಗಾಲ ಗ್ರಾಮದಲ್ಲಿ ನಡೆದಿದೆ.

ಮಳವಳ್ಳಿ (ಜ. 17): ಅನಾರೋಗ್ಯದಿಂದ ಮಿದುಳು (Brain) ನಿಷ್ಕ್ರಿಯಗೊಂಡಿದ್ದ ತಾಯಿಯ ಅಂಗಾಂಗಗಳನ್ನು ದಾನ (Organ Donation) ಮಾಡಿದ ಪುತ್ರ ಐವರಿಗೆ ಹೊಸ ಜೀವನ ನೀಡಿ ಸಾರ್ಥಕತೆ ಮೆರೆದಿರುವ ಘಟನೆ ತಾಲೂಕಿನ ಕೋರೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟರಾಮೇಗೌಡರ ಪತ್ನಿ ನಾಗಮ್ಮ (Nagamma) (45) ಇವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪುತ್ರ ಚರಣ್‌ (Charan) ಹಾಗೂ ಕುಟುಂಬಸ್ಥರು ಮಾದರಿಯಾಗಿ ಐವರು ಕುಟುಂಬಗಳ ಬಾಳಿಗೆ ಬೆಳಕು ನೀಡಿ ಮಾನವೀಯತೆ (Humanity) ಮರೆದಿದ್ದಾರೆ.

ನಾಗಮ್ಮ ಅವರು ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದರು. ಮೈಸೂರಿನ (Musuru) ನಾರಾಯಣ ಹೃದಯಾಲಯ ಆಸ್ಪತ್ರೆಗೆ (Narayana Hrudayalaya) ಮಹಿಳೆಯನ್ನು ಕುಟುಂಬದ ಸದಸ್ಯರು ದಾಖಲಿಸಿ ಪರೀಕ್ಷೆಗೆ ಒಳಪಡಿಸಿದರು. ಆಸ್ಪತ್ರೆಯ ವೈದ್ಯರು ಮಹಿಳೆ ತಲೆಯಲ್ಲಿ ಗೆಡ್ಡೆಯ ರೀತಿಯಲ್ಲಿ ಕಾಣಿಸಿಕೊಂಡು ಮೆದುಳು ನಿಷ್ಕ್ರಿಯಗೊಂಡಿದೆ. ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎಂದಿದ್ದಾರೆ. ಮತ್ತೆ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ವೈದ್ಯರನ್ನು (Doctor) ಸಂಪರ್ಕಿಸಿದ ವೇಳೆ ವರದಿಗಳನ್ನು ಪರೀಕ್ಷಿಸಿದ ವೈದ್ಯರು ಅಂಗಾಂಗ ದಾನ ಮಾಡುತ್ತೀರಾ ಎಂದು ಪ್ರಶ್ನಿಸಿದರು.

Organ Donation; ಎಲ್ಲ ಅಂಗಾಂಗ ದಾನ, ಸಾವಲ್ಲೂ ಸಾರ್ಥಕತೆ ಮೆರೆದ ಮಂಡ್ಯದ ರೈತ ಹೇಮಂತ್

ನಾಗಮ್ಮರ ಪುತ್ರ ಚರಣ್‌ ತಮ್ಮ ತಂದೆ ಪುಟ್ಟರಾಮೇಗೌಡರೊಂದಿಗೆ ಚರ್ಚಿಸಿ ನಮ್ಮ ಅಮ್ಮ ಹೇಗಿದ್ದರೂ ಬದುಕುವುದಿಲ್ಲ. ಅಂಗಾಂಗ ದಾನ ಮಾಡಿರುವುದರಿಂದ ಐವರಿಗೆ ಹೊಸ ಬಾಳು ನೀಡಬಹುದು ಎಂದು ಮನವರಿಕೆ ಮಾಡಿದ್ದಾರೆ. ನಂತರ ಮೈಸೂರಿನ ಬಿಜಿಎಸ್‌ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಅಂಗಾಂಗ ದಾನ ಮಾಡಿದ್ದಾರೆ. ಶನಿವಾರ ನಡೆದ ಶಸ್ತ್ರಕ್ರಿಯೆ ಮೂಲಕ ಯಕೃತ್‌, ಎರಡು ಮೂತ್ರಪಿಂಡಗಳನ್ನು ಅಪೋಲೋ ಬಿಜಿಎಸ್‌ ಆಸ್ಪತ್ರೆಯ ಇಬ್ಬರು ರೋಗಿಗಳಿಗೆ, ಲಿವರ್‌ ಹಾಗೂ ಹೃದಯದ ಕವಚವನ್ನು ಗ್ರೀನ್‌ ಕಾರಿಡರ್‌ ನಿಯಮದಲ್ಲಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು.

ಎರಡು ಕಣ್ಣುಗಳನ್ನು ಮೈಸೂರಿನ ಐ ಬ್ಯಾಂಕ್‌ಗೆ ನೀಡಲಾಗಿದೆ. ಆ ಮೂಲಕ ಮಹಿಳೆಯ ಕುಟುಂಬದವರು ಐವರಿಗೆ ಹೊಸ ಜೀವನ ನೀಡಿ ಸಾರ್ಥಕತೆ ಮೆರೆದಿದ್ದಾರೆ. ಮೃತ ನಾಗಮ್ಮ ಅವರ ದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ವೇಳೆ ಆಸ್ಪತ್ರೆಯ ವೈದ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಎರಡು ಬದಿಯಲ್ಲಿ ಸಾಲಾಗಿ ನಿಂತು ಗೌರವ ಸಲ್ಲಿಸಿದರು.

ವೈದ್ಯರಿಂದ ಸಂದೇಶ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅಂಗಾಂಗ ದಾನದ ಬಗ್ಗೆ ಜನರಿಗೆ ಅರಿವು ಮೂಡಿಸುವ ಅವಶ್ಯಕತೆ ಇದೆ. ಬಹಳಷ್ಟುಮಂದಿಗೆ ಸಕಾಲಕ್ಕೆ ಅಂಗಾಂಗ ಸಿಗದೇ ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವ ಉದಾಹರಣೆ ಇದೆ. ಹಲವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ತಮ್ಮ ಜೀವ ಉಳಿಸಿಕೊಳ್ಳಲು ದಾನ ಮಾಡುವಂತಹ ಅಂಗಾಂಗಗಳನ್ನು ಎದುರು ನೋಡುತ್ತಿದ್ದಾರೆ ಎಂದರು. ಈ ಬಗ್ಗೆ ಪ್ರಚಾರ ಮತ್ತು ಅರಿವು ಕಾರ್ಯಕ್ರಮಗಳನ್ನು ಸರ್ಕಾರ ನಡೆಸಿದರೂ ಅಂಗಾಂಗ ದಾನಕ್ಕೆ ಮುಂದಾಗುವವರ ಸಂಖ್ಯೆ ಮಾತ್ರ ಬೆರಳೆಣಿಕೆಯಷ್ಟಿದೆ. 

ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್‌ಕುಮಾರ್

ಹೀಗಾಗಿ ಮಿದುಳು ನಿಷ್ಕ್ರಿಯಗೊಂಡಾಗ ಮಣ್ಣಲ್ಲಿ ಮಣ್ಣಾಗಿ ಹೋಗುವ ದೇಹದ ಅಂಗಾಂಗಳಿಂದ ಇನ್ನೊಷ್ಟುಜೀವಗಳನ್ನು ಉಳಿಸಲು, ಕುಟುಂಬದ ಜೀವನ ಬೆಳಕಾಗಲು ಸಾಧ್ಯವಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರೇ ಮಿದುಳು ನಿಷ್ಕ್ರಿಯಗೊಂಡಾಗ ಅಂಗಾಂಗ ಮುಂದಾಗುತ್ತಿದ್ದಾರೆ. ನಗರ ಪ್ರದೇಶಗಳಲ್ಲೂ ಈ ಬಗ್ಗೆ ಅರಿವು ಮೂಡಬೇಕಿದೆ ಎಂದು ಅಪೋಲೋ ಬಿಜಿಎಸ್‌ ಆಸ್ಪತ್ರೆಯ ಆಡಳಿತ ವಿಭಾಗದ ಮುಖ್ಯಸ್ಥ ಎನ್‌.ಜಿ. ಭರತೇಶ್‌ ರೆಡ್ಡಿ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ
ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು