ಶಾಸಕ ಕುಮಠಳ್ಳಿಗೆ ಕೊಲೆ ಬೆದರಿಕೆ : ವಿಡಿಯೋ ವೈರಲ್‌

Published : Feb 11, 2019, 10:41 AM IST
ಶಾಸಕ  ಕುಮಠಳ್ಳಿಗೆ ಕೊಲೆ ಬೆದರಿಕೆ : ವಿಡಿಯೋ ವೈರಲ್‌

ಸಾರಾಂಶ

ಕಾಂಗ್ರೆಸ್ ಶಾಸಕ ಮಹೇಶ್ ಕುಮಠಳ್ಳಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ರೀತಿಯ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗಿದೆ. 

ಅಥಣಿ: ಒಂದೊಮ್ಮೆ ಕ್ಷೇತ್ರದ ಮತದಾರರಿಗೆ ಮೋಸ ಮಾಡಿ ಬಿಜೆಪಿ ಸೇರಿದರೆ ಅಥವಾ ಅವರಿಗೆ ಬೆಂಬಲ ನೀಡಿದರೆ ಶಾಸಕ ಮಹೇಶ್‌ ಕುಮಠಳ್ಳಿ ಅವರನ್ನು ಕೊಲೆ ಮಾಡುವುದಾಗಿ ಕುಡಿದ ಮತ್ತಿನಲ್ಲಿ ವ್ಯಕ್ತಿಗಳಿಬ್ಬರು ಬೆದರಿಕೆ ಹಾಕಿದ್ದು, ಇದೀಗ ಆ ವಿಡಿಯೋ ವೈರಲ್‌ ಆಗಿದೆ. 

ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಶನಿವಾರ ರಾತ್ರಿ ಕುಡಿದ ಅಮಲಿನಲ್ಲಿ ವ್ಯಕ್ತಿಗಳಿಬ್ಬರು ಈ ಬೆದರಿಕೆ ಹಾಕಿದ್ದು, ವಿಡಿಯೋ ಸಾಮಾಜಿಕ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. 

ವಿಡಿಯೋದಲ್ಲಿರುವವರನ್ನು ಅಥಣಿ ತಾಲೂಕಿನ ಬುರ್ಲಟ್ಟಿಗ್ರಾಮದ ಸಂಜೀವ ಯಳ್ಳೂರ ಮತ್ತು ಬಸವರಾಜ ಖೋತ ಎಂದು ಹೇಳಲಾಗಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ