ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಫೋಕ್ಸೋ ಪ್ರರಕರಣ ಎರಡನೇ ಆರೋಪಿಗೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಚಿತ್ರದುರ್ಗ, (ಸೆಪ್ಟೆಂಬರ್. 06): ಲೈಂಗಿಕ ದೌರ್ಜನ್ಯ ಪ್ರಕರಣದಡಿ ಮುರುಘಾ ಮಠದ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಇದೀಗ ಇದೇ ಪ್ರಕರಣದ ಎರಡನೇ ಆರೋಪಿ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಅವರಿಗೆ ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಮಹಿಳಾ ವಾರ್ಡನ್ ನನ್ನು ಚಿತ್ರದುರ್ಗ ಪೊಲೀಸರು ಏಳು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದ್ರೆ, ಕೋರ್ಟ್ ಎರಡು ದಿನ ಮಾತ್ರ ಪೊಲಿಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಮಹಿಳಾ ವಾರ್ಡನ್ ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಿದ್ದಾರೆ.
ನಮ್ಮಂಥವರಿಗೆ ಬುದ್ಧಿ ಹೇಳುವ ನೀವೇ ಹೀಗಾದ್ರೆ ಹೇಗೆ? ವಿಚಾರಾಣಾಧೀನ ಖೈದಿಗಳ ಪ್ರಶ್ನೆಗೆ ಶ್ರೀಗಳ ಉತ್ತರವಿದು
5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು
ಮುರಾಘಾ ಮಠದ ಶಿವಮೂರ್ತಿ ಮುರುಘಾ ಶರಣ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣದ 5ನೇ ಆರೋಪಿಗೆ ಪೊಲೀಸರಿಗೆ ಶರಣಾಗಿದ್ದಾರೆ.
ಈ ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ (ಸೆ, 6) ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಸಿ, ತನಿಖಾಧಿಕಾರಿ ಸೂಚಿಸಿದಾಗ ಬರಲು ಸೂಚನೆ ನೀಡಿ ವಾಪಸ್ ಕಳುಹಿಸಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ..
ಏನಿದು ಪ್ರಕರಣ?: ಮುರುಘಾಮಠದ ಆವರಣದಲ್ಲಿದ್ದ ಅಕ್ಕಮಹಾದೇವಿ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ಬಾಲಕಿಯರು ತಮ್ಮ ಮೇಲೆ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಒಡನಾಡಿ ಸಂಸ್ಥೆಯ ನೆರವಿನಿಂದ ಮೈಸೂರಿನ ನಜರ್‌ಬಾದ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಶ್ರೀಗಳು, ಅಕ್ಕಮಹಾದೇವಿ ಹಾಸ್ಟೆಲ್‌ನ ವಾರ್ಡನ್, ಕಿರಿಯ ಶ್ರೀಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃತ್ಯ ನಡೆದ ಸ್ಥಳ, ಆರೋಪಿಗಳು ಮತ್ತು ಬಾಲಕಿಯರು ಚಿತ್ರದುರ್ಗ ಜಿಲ್ಲೆಗೆ ಸೇರಿದವರಾಗಿದ್ದರಿಂದ ಈ ಪ್ರಕರಣವನ್ನು ಚಿತ್ರದುರ್ಗ ಜಿಲ್ಲೆಗೆ ವರ್ಗಾಯಿಸಲಾಗಿತ್ತು.