ಚಿತ್ರದುರ್ಗದ ಮುರುಘಾ ಮಠದಲ್ಲಿ ಮಕ್ಕಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ. ಪೋಕ್ಸೋ ಕೇಸ್‌ನಲ್ಲಿ ದೂರು ದಾಖಲಾದ ನಂತರ ಶ್ರೀಗಳ ಬಂಧನವಾಗಿದೆ.
ಚಿತ್ರದುರ್ಗದ ಮುರುಘಾ ಮಠದಲ್ಲಿ (Murugha Mutt) ಮಕ್ಕಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ (Sexual Assault) ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ. ಪೋಕ್ಸೋ ಕೇಸ್‌ನಲ್ಲಿ (POCSO Case) ದೂರು ದಾಖಲಾದ 6 ದಿನಗಳ ನಂತರ ಬಂಧನವಾಗಿದೆ. ಚಿತ್ರದುರ್ಗದ ಮಠದಲ್ಲೇ ರಾತ್ರಿ 7.45 ರಿಂದ ವಿಚಾರಣೆ ನಡೆಸಿ ನಂತರ ಪೊಲೀಸರು ಮುರುಘಾ ಶ್ರೀಗಳನ್ನು ಬಂಧಿಸಿದ್ದಾರೆ. ಸಂಜೆಯಿಂದ ನಡೆಯುತ್ತಿದ್ದ ತೀವ್ರ ವಿಚಾರಣೆ ಬೆನ್ನಲ್ಲೇ ಶ್ರೀಗಳನ್ನು ಬಂಧಿಸಲಾಗಿದೆ.
ಮಾದ್ಯಮದವರಿಗೆ ಡೈವರ್ಟ್ ಮಾಡಲು ಮುರುಘಾ ಶ್ರೀಗಳನ್ನು ಪೊಲೀಸರು (Police) ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ಇನ್ನು, ಕೆಲವೇ ಕ್ಷಣಗಳಲ್ಲಿ DYSP ಕಚೇರಿಗೆ ಮುರುಘಾ ಶರಣರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುರುಘಾ ಶ್ರೀಗಳನ್ನು ಪೊಲೀಸರು ಡಿವೈಎಸ್‌ಪಿ ಕಚೇರಿಗೆ ಕರೆತರಲಿದ್ದು, ಈ ಹಿನ್ನೆಲೆ ಪೊಲೀಸ್ ಹೈ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗದ ಡಿಸಿ ಸರ್ಕಲ್ ಬಳಿ ಪೊಲೀಸ್ ಫುಲ್ ಬಿಗಿ ಬಂದೋಬಸ್ತ್ ಹಾಕಲಾಗಿದೆ.
The chief pontiff of Sri Murugha Mutt, Shivamurthy Murugha Sharanaru, accused of sexually assaulting minors, arrested: Alok Kumar, ADGP, Law and Order Karnataka pic.twitter.com/WNDxTvZ7Ha
— ANI (@ANI)
undefined
ಈ ಸುದ್ದಿಯನ್ನು ಓದಿ: Murugha Mutt sexual assault case: A2 ಆರೋಪಿ ವಾರ್ಡನ್ ರಶ್ಮಿ ಪೊಲೀಸರ ವಶಕ್ಕೆ
ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮುರುಘಾ ಮಠದ ಪ್ರಧಾನ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಲಾಗಿದೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ, ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ನಿಗದಿತ ಕ್ರಮ ಅನುಸರಿಸಲಾಗುವುದು. ಕಾರ್ಯವಿಧಾನದ ಪ್ರಕಾರ ವೈದ್ಯಕೀಯ ಪರೀಕ್ಷೆ ಮತ್ತು ತನಿಖೆಯನ್ನು ಮಾಡಲಾಗುತ್ತದೆ. ಹಾಗೂ, ಮುರುಘಾ ಶ್ರೀಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದೂ ಅಲೋಕ್ ಕುಮಾರ್ ತಿಳಿಸಿದ್ದಾರೆ.
The arrested chief pontiff of Sri Murugha Mutt, Shivamurthy Murugha Sharanaru who was accused of sexually assaulting minors will be produced before judge. Medical test and investigation will be done as per the procedure: Alok Kumar, ADGP Law and Order, Karnataka pic.twitter.com/O20WwomUjT
— ANI (@ANI)ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘರಾಜೇಂದ್ರ ಶರಣರನ್ನು ಕೂಡಲೇ ಬಂಧಿಸಬೇಕು. ಸಂತ್ರಸ್ತ ವಿದ್ಯಾರ್ಥಿನಿಯರು ಹಾಗೂ ಕುಟುಂಬ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಭಾರಿ ಪ್ರತಿಭಟನೆಗಳು ನಡೆದಿದ್ದವು. ಪೋಕ್ಸೋ ಕೇಸ್ ದಾಖಲಾಗಿ 6 ದಿನಗಳಾದರೂ ಶ್ರೀಗಳ ಬಂಧನ ಯಾಕಿಲ್ಲ? ತನಿಖೆಯಲ್ಲಿ ಲೋಪವಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ದೆಹಲಿ ಮಕ್ಕಳ ಹಕ್ಕುಗಳ ಆಯೋಗ ಚಿತ್ರದುರ್ಗ ಪೊಲೀಸರಿಗೆ ನೋಟಿಸ್ ನೀಡಿತ್ತು. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಪೊಲೀಸರಿಗೆ ವಿವರಣೆ ಕೇಳಿತ್ತು.
ಇನ್ನೊಂದೆಡೆ, ಮುರುಘಾ ಶ್ರೀಗಳ ಬಂಧನಕ್ಕೂ ಮುನ್ನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿಯಾಗಿರುವ ವಾರ್ಡನ್ ರಶ್ಮಿಯನ್ನು ಗುರುವಾರ ಸಂಜೆ ಪೊಲೀಸರು ವಶಕ್ಕೆ ಪಡೆದಿದ್ದರು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮುರುಘಾಶ್ರೀ ಸೇರಿ ಹಲವರ ವಿರುದ್ಧ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ವಾರ್ಡನ್ ಅನ್ನು ಬಂಧಿಸಲಾಗಿದೆ.
ಈ ಹಿನ್ನೆಲೆ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ತನಿಖಾಧಿಕಾರಿಗಳು ಮುಂದಾಗಿದ್ದು, ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಆರೋಪಿಯಾಗಿರುವ ವಾರ್ಡನ್ ರಶ್ಮಿ ವಶಕ್ಕೆ ಪಡೆದು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆ ಬಳಿಕ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ನಾಳೆಯೂ ವಿಚಾರಣೆ ಮುಂದುವರಿಯುವುದರಿಂದ ಇಂದು ಪೊಲೀಸ್ ಭದ್ರತೆಯೊಂದಿಗೆ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಮುರುಘಾ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. .
ಪ್ರಕರಣದ ವಿವರ:
‘ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು’ ಎಂದು ವಿದ್ಯಾರ್ಥಿನೀಯರು ಆರೋಪಿಸಿದ್ದಾರೆ. ‘ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ’ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಇನ್ನು ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ಹೇಳಿದ್ದರು.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೈಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುರುಘಾ ಶರಣರು ಸೇರಿದಂತೆ ವಸತಿ ನಿಲಯದ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದಯಡಿ ಪ್ರಕರಣ ದಾಖಲಾಗಿದೆ. ಮುರುಘಾ ಶರಣರು ವಿದ್ಯಾರ್ಥಿನಿಯರನ್ನು ಬಳಸಿಕೊಳ್ಳುತ್ತಿದ್ದರು. ಉಳಿದ ಆರೋಪಿಗಳು ಈ ಕೃತ್ಯಕ್ಕೆ ಸಹಕಾರ ನೀಡಿದ್ದರು ಎಂಬ ಆರೋಪವೂ ಇದೆ.