ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದ ಕೋರ್ಟ್

By Ramesh B  |  First Published Sep 14, 2022, 7:15 PM IST

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ. 


ಚಿತ್ರದುರ್ಗ, (ಸೆಪ್ಟೆಂಬರ್ 14): ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ.

ಇಂದು(ಬುಧವಾರ)  ಮುರುಘಾಶ್ರೀಗೆ ಜಾಮೀನು ನೀಡುವಂತೆ ವಕೀಲ ಸಂದೀಪ್ ಪಾಟೀಲ್ ವಾದ ಮಂಡನೆ ಮಾಡಿದರು. ಆದ್ರೆ, ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿ ಚಿತ್ರದುರ್ಗ ಜಿಲ್ಲಾ ಅಪರ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

Tap to resize

Latest Videos

Murugha Sri Case: ಮುರುಘಾ ಶ್ರೀಗಿಲ್ಲ ಬಿಡುಗಡೆ ಭಾಗ್ಯ: 14 ದಿನ ಮತ್ತೆ ನ್ಯಾಯಾಂಗ ಬಂಧನಕ್ಕೆ

ಮುರುಘಾ ಶ್ರೀಗಳ ಪರವಾಗಿ ವಾದ ಮಂಡನೆ ಮಾಡಲಾಗಿದ್ದು, ಸೆ.16ಕ್ಕೆ ಸರ್ಕಾರಿ ವಕೀಲರಿಗೆ ವಾದ ಮಂಡನೆಗೆ ಕೋರ್ಟ್ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶರಣರಿಗೆ ಸೆಪ್ಟೆಂಬರ್ ಸೆ.16 ಮಹತ್ವದ ದಿನವಾಗಿದೆ.

ಶರಣರು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ
ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಗೆ  ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು. ಆದ್ರೆ,  ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಏನಿದು ಪ್ರಕರಣ?:
ಕಳೆದ ವಾರ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ. 

click me!