
ಬೆಂಗಳೂರು (ಜೂ.21): ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿರುವ ಆರೋಪವನ್ನು ರೋಹಿಣಿ ಸಿಂಧೂರಿ ವಿರುದ್ಧ ಹೊರಿಸಿದ್ದಾರೆ.
ಯಲಹಂಕ ನ್ಯೂಟೌನ್ ಬಳಿ ಜಮೀನನ್ನು ರೋಹಿಣಿ ಒತ್ತುವರಿ ಮಾಡಿದ ಆರೋಪ ಇದ್ದು, ಈ ಬಗ್ಗೆ ದೂರು ನೀಡಿದ ಅಲಿ X ಖಾತೆಯಲ್ಲಿ ದೂರಿನ ಪ್ರತಿ ಅಪ್ಲೋಡ್ ಮಾಡಿದ್ದಾರೆ. ರೋಹಿಣಿ ಸಿಂಧೂರಿ, ಪತಿ ಸುಧೀರ್ ರೆಡ್ಡಿ, ಭಾಮೈದ ಮಧುಸೂಧನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ.
ರಾಹುಲ್ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ ಪೊಲೀಸ್!
ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಜಾಗವನ್ನು ಲಪಟಾಯಿಸಿದ್ದಾರೆಂದು ದೂರಿನಲ್ಲಿ ಅಲಿ ಉಲ್ಲೇಖಿಸಿದ್ದಾರೆ. ಮಾತ್ರವಲ್ಲ ಈ ಭೂ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ. 2022ರಲ್ಲಿ ಲಕ್ಕಿ ಅಲಿ ಈ ಸಂಬಂಧ ಯಲಹಂಕ ನ್ಯೂಟೌನ್ ಠಾಣೆಗೆ ದೂರು ನೀಡಿದ್ರು, ಈಗ ಲೋಕಾಯುಕ್ತಕ್ಕೆ ಕೊಟ್ಟ ದೂರನ್ನ ಡಿಜಿ/ಐಜಿಪಿಗೆ ಟ್ಯಾಗ್ ಮಾಡಿದ್ದಾರೆ.
2022ರಲ್ಲಿ ದೂರು ನೀಡಿದ್ದ ಅಲಿ: 2022ರಲ್ಲಿ ಅಂದಿನ ಡಿಜಿಪಿ ಆಗಿದ್ದ ಪ್ರವೀಣ್ ಸೂದ್ ಅವರಿಗೆ ಸರಣಿ ಟ್ವೀಟ್ ಮಾಡಿ, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು. 2012ರಿಂದಲೂ ಈ ಜಾಗದ ವಿಚಾರಕ್ಕೆ ಎರಡು ತಂಡಗಳ ನಡುವೆ ವ್ಯಾಜ್ಯ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ